ಬಾಲಕಿಯರ ವಸತಿ ನಿಲಯಕ್ಕೆ ಶಾಸಕರ ದಿಢೀರ್ ಭೇಟಿ
Team Udayavani, Jan 17, 2022, 7:39 PM IST
ಸಾಗರ: ಸ್ವಚ್ಛತೆ, ಆಹಾರ ಮತ್ತು ವಿದ್ಯಾಭ್ಯಾಸದ ಬಗ್ಗೆ ಪರಿಶೀಲಿಸಲು ನಗರಸಭೆ ವ್ಯಾಪ್ತಿಯ ಎಸ್‌ಎನ್ ನಗರದ ಕಂಬಳಿಕೊಪ್ಪದ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ದಿಢೀರ್ ಭೇಟಿ ನೀಡಿದರು.
ದಿಢೀರ್ ಭೇಟಿ ನೀಡಿದ ಶಾಸಕರು, ಅಲ್ಲಿನ ಸಮಸ್ಯೆಗಳ ಬಗ್ಗೆ ಹಾಗೂ ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಡಿಜಿಟಲ್ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ವಸತಿ ನಿಲಯದ ಹೆಣ್ಣು ಮಕ್ಕಳು ಕರೆ ಮಾಡಿ ಹಾಸ್ಟೆಲಿನಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇದೆ. ಈ ಹಿನ್ನೆಲೆಯಲ್ಲಿ ಇವತ್ತು ಭೇಟಿ ನೀಡಿದ್ದೇನೆ. ಇಲ್ಲಿ ಬಂದು ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆದ ಸಂದರ್ಭದಲ್ಲಿ ನೀರಿನ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ.
ನೌಕರರ ಸಮಸ್ಯೆ ಇದೆ, ಗೋಧಿ ಹಿಟ್ಟು ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಕ್ಷಣ ಅಧಿಕಾರಿಗಳ ಜೋತೆ ಸಭೆ ನಡೆಸಿ ಸರಿಪಡಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ನೀಡುವ ಕಿಟ್‌ಗಳಲ್ಲಿ ಸರಿಯಾಗಿ ವಸ್ತುಗಳು ಬರುತ್ತಿಲ್ಲ ಎಂದು ದೂರಿದ್ದಾರೆ. ಮಕ್ಕಳು ಹೇಳಿರುವ ಎಲ್ಲಾ ಸಮಸ್ಯೆಗಳನ್ನೂ ಅತಿ ಶೀಘ್ರದಲ್ಲಿ ಸರಿಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಸ್ಥಳೀಯ ನಗರ ಸಭೆ ಸದಸ್ಯ ಲಿಂಗರಾಜು, ಸಾಗರ ಉಪವಿಭಾಗ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವಿನೋದ್‌ರಾಜ್, ರವಿ ಇತರರು ಇದ್ದರು.