ಶಿವಮೊಗ್ಗ: ಸೋಂಕಿತನ ಶವಕ್ಕೆ ಎರಡು ಬಾರಿ ಬೆಂಕಿ ಇಟ್ಟರು!

Team Udayavani, Jul 12, 2020, 7:08 AM IST

ಶಿವಮೊಗ್ಗ: ಸೋಂಕಿತನ ಶವಕ್ಕೆ ಎರಡು ಬಾರಿ ಬೆಂಕಿ ಇಟ್ಟರು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ನಗರದಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರದ ವೇಳೆ ಸಿಬಂದಿ ನಿರ್ಲಕ್ಷ್ಯ ತೋರಿದ್ದು, ತಡರಾತ್ರಿ ಸ್ಥಳೀಯರ ಪ್ರತಿಭಟನೆ ಬಳಿಕ ಎರಡನೇ ಬಾರಿ ಬೆಂಕಿ ನೀಡಿ ದಹಿಸಿದ ಘಟನೆ ಸಂಭವಿಸಿದೆ. ಈ ಮಧ್ಯೆ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಇಲ್ಲಿನ ಕಸ್ತೂರ್ಬಾ ರಸ್ತೆಯ ನಿವಾಸಿಯೊಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದರು. ಶುಕ್ರವಾರ ರಾತ್ರಿ ಎಂಟು ಗಂಟೆ ವೇಳೆಗೆ ಪಾಲಿಕೆ ಸಿಬಂದಿ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಚಿತಾಗಾರಕ್ಕೆ ತಂದಿದ್ದಾರೆ. ಚಿತಾಗಾರಕ್ಕೆ ಬೀಗ ಹಾಕಿದ್ದ ಕಾರಣ ಪಾಲಿಕೆ ಸಿಬಂದಿ ಬೀಗ ಒಡೆದು ಮೃತದೇಹಕ್ಕೆ ಬೆಂಕಿ ಹಚ್ಚಿ ಪೂರ್ಣ ಸುಡುವವರೆಗೆ ಕಾಯದೇ ಸ್ಥಳದಿಂದ ತೆರಳಿದ್ದಾರೆ.

ಮೃತದೇಹ ಫ್ರೀಜರ್‌ನಲ್ಲಿದ್ದ ಕಾರಣ ಬೆಂಕಿ ಆರಿ ಹೋಗಿದ್ದು, ನಾಯಿಗಳು ಶವ ಎಳೆಯಲು ಮುಂದಾಗಿದ್ದವು. ಶ್ಮಶಾನದ ಕಾವಲುಗಾರ ವಿಷಯವನ್ನು ಸ್ಥಳೀಯರ ಗಮನಕ್ಕೆ ತಂದಿದ್ದು, ಸ್ಥಳೀಯರು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ. ತಡರಾತ್ರಿ 1.30ರ ಸುಮಾರಿಗೆ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಂತ್ಯಸಂಸ್ಕಾರ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ಪಿಪಿಇ ಕಿಟ್‌ ಎಸೆದರು
ಈ ವೇಳೆ ಸಿಬಂದಿ ಧರಿಸಿದ್ದ ಪಿಪಿಇ ಕಿಟ್‌ಗಳನ್ನು ಅಲ್ಲೇ ಎಸೆದು ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಸ್ಥಳಿಯರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.