ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ ಸಂಭ್ರಮ! ಈಡಿಗರ ಒಗ್ಗಟ್ಟು ಪ್ರದರ್ಶನ!


Team Udayavani, Oct 18, 2021, 12:49 PM IST

ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ ಸಂಭ್ರಮ! ಈಡಿಗರ ಒಗ್ಗಟ್ಟು ಪ್ರದರ್ಶನ!

ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಾವಿರಾರು ಈಡಿಗರ ಒಗ್ಗಟ್ಟು ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ನಾರಾಯಣ ಗುರು ಪ್ರತಿಮೆಯ ಬೃಹತ್ ಮೆರವಣಿಗೆ ಮೂಲಕ ಕುರುವಳ್ಳಿ ಅಗ್ರಹಾರದ ನಾರಾಯಣ ಗುರು ಮಂದಿರದಲ್ಲಿ ಶುರುವಾದ ಮೆರವಣಿಗೆ ಸಾವಿರಾರು ಈಡಿಗರ ಸಮುದಾಯದವರ ಜತೆ ಕಲಾ ತಂಡಗಳ ಸಮಾಗಮದೊಂದಿಗೆ ಬಾನುವಾರ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ಸಂಸ್ಕೃತಿ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಮಾಜದ ಒಗ್ಗಟ್ಟು ಪ್ರದರ್ಶನ ಇಂದು ಅಗತ್ಯ ಇದೆ.

ನಾವೆಲ್ಲರೂ ಸೇರಿ ನಾರಾಯಣ ಗುರು ತತ್ವದಡಿ ಕೆಲಸ ಮಾಡೋಣ. ಯಾವಾಗಲು ಬೇಕಾದ ಹಕ್ಕನ್ನು ಹೋರಾಟದ ಮೂಲಕ ಪಡೆಯಬೇಕು.ಯಾವುದೇ ಜಾತಿಯ, ವ್ಯವಸ್ಥೆಯ ವಿರೋಧ ಅಲ್ಲ, ನಮ್ಮ ಒಗ್ಗಟ್ಟು, ಅವಕಾಶಕ್ಕಾಗಿ ಸಂಘಟನೆ ಮಾಡಬೇಕು ಎಂದರು.

ಈಡಿಗ ಸ್ವಾಮೀಜಿ ಅಮೃತ ಮಠದ ರೇಣುಕಾನಂದ ಶ್ರೀಗಳು ಮಾತನಾಡಿ, ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಯುವ ಶಕ್ತಿ ಸಂಘಟಿತರಾದರೆ ಸಮಾಜ ಉದ್ದಾರ ಸಾಧ್ಯ. ಮನುಷ್ಯ ಸತ್ತ ನಂತರ ಮಣ್ಣಲ್ಲಿ ಮಣ್ಣಾಗುತ್ತಾನೆ. ಜೀವ ಇರುವಾಗ ಎಲ್ಲರೂ ಒಂದಾಗಿ ಬಾಳಬೇಕು. ಹಳ್ಳಿ ಹಳ್ಳಿಯಲ್ಲೂ ಸಂಘಟನೆ ಆಗಬೇಕು. ಈಡಿಗ ಸಮುದಾಯ ಒಂದಾಗಬೇಕು ಎಂದರು.

ಶ್ರೀ ನಾರಾಯಣ ಗುರು ವೇದಿಕೆ ರಾಜ್ಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ಈಡಿಗ ಸಮುದಾಯ ಒಗ್ಗಟ್ಟು ಆಗದಿದ್ದರೆ ಯಾವುದೇ ಸೌಲಭ್ಯ ಸಿಗಲ್ಲ. ಸರ್ಕಾರಕ್ಕೆ ಈ ಬಗ್ಗೆ ದನಿ ಎತ್ತಬೇಕು ಎಂದು ಹೇಳಿದರು.

ರಾಜ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ. ತಿಮ್ಮೆಗೌಡ ಮಾತನಾಡಿ, ರಾಜ್ಯದಲ್ಲಿ ಈಡಿಗ ನಿಗಮದ ಬಗ್ಗೆ ಮುಖ್ಯ ಮಂತ್ರಿಗಳ ಜತೆ ಮಾತನಾಡಲಾಗಿದೆ. ರಾಜ್ಯದ ಈಡಿಗ ಸಂಘಟನೆಗೆ ರಾಜ್ಯ ಸಂಘ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಈಡಿಗ ಸಮುದಾಯದ ನಾಯಕರಾದ ಮಾಲೀಕಯ್ಯ ಗುತ್ತೇದಾರ್, ರಾಜಶೇಖರ್ ಕೋಟ್ಯಾನ್,  ಡಾ. ಗೋವಿಂದ ಬಾಬು ಪೂಜಾರಿ, ಸಿನಿಮಾ ಸಾಹಿತಿ ಕವಿರಾಜ್ , ತಾಲೂಕು ಸಂಘಟನೆ ಅಧ್ಯಕ್ಷ ವಿಶಾಲ್ ಕುಮಾರ್, ಈಡಿಗರ ಸಂಘದ ಅಧ್ಯಕ್ಷ ಮಟ್ಟಿನಮನೆ ರಾಮಚಂದ್ರ, ಬಿಲ್ಲವ ಸಂಘದ ಅಧ್ಯಕ್ಷ ಮಂಜುನಾಥ್ ಇತರರು ಇದ್ದರು.

ಸಾಧಕರಿಗೆ ಸನ್ಮಾನ..!:

ಸಮಾರಂಭದಲ್ಲಿ ಈಡಿಗ ಸಮುದಾಯದ ಸಾಧಕರಾದ ಸಾಹಿತಿ ಕವಿರಾಜ್, ಮಾದರಿ ಉದ್ಯಮಿ ಗೋಪಾಲ್ ಬಾಬು ಪೂಜಾರಿ, ಹಿನ್ನೆಲೆ ಗಾಯಕಿ ದಿವ್ಯಾ ರಾಮಚಂದ್ರ, ಎಸ್ಎಸ್ಎಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಶ್ರೀಷ, ಸಮಾಜ ಸೇವಕರಾದ ಗೋಪಾಲ ಪೂಜಾರಿ, ಪ್ರಮೋದ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಈಡಿಗ ಸಮುದಾಯದ  ಬಹುತೇಕ ಎಲ್ಲಾ ನಾಯಕರು ಹಾಜರಿದ್ದರು. ಸುಮಾರು 1500ಕ್ಕೂ ಹೆಚ್ಚು ಈಡಿಗ ಸಮುದಾಯವರು ಭಾಗಿಯಾಗಿದ್ದು ತೀರ್ಥಹಳ್ಳಿಯಲ್ಲಿ ಈಡಿಗ ಸಮುದಾಯದ ಒಗ್ಗಟ್ಟು ಪ್ರದರ್ಶನವಾಯಿತು. ಪಕ್ಷ ಬೇಧ ಮರೆತು ಈಡಿಗ ಸಮುದಾಯದ ಬಹುತೇಕ ನಾಯಕರು, ಉದ್ಯಮಿಗಳು, ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.