ರಾಮುಲು- ಜಾರಕಿಹೊಳಿಗೆ ಡಿಸಿಎಂ ಪಟ್ಟ ನೀಡುವ ಬಗ್ಗೆ ಯಾವುದೇ ಚರ್ಚೆ ಇಲ್ಲ

Team Udayavani, Dec 17, 2019, 12:19 PM IST

ramesh-ramului

ಶಿವಮೊಗ್ಗ: ಸಚಿವ ಶ್ರೀ ರಾಮುಲು ಹಾಗೂ ನೂತನ ಶಾಸಕ ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ. ಈ ಬಗ್ಗೆ ಯಾರೂ ನಮ್ಮ ಬಳಿ‌ ಮಾತನಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಗೆ ಸಚಿವ ಸಂಪುಟ ವಿಸ್ತರಣೆಯ ಪರಮಾವಧಿಕಾರವಿದೆ. ಅವರು ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಡಿಸಿಎಂ ಹುದ್ದೆ ಹಂಚಿಕೆ‌ಯ ಬಗ್ಗೆಯೂ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ರಾಜ್ಯದಲ್ಲಿ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗ ಎಂಬ ಭಿನ್ನಾಭಿಪ್ರಾಯಗಳು ಇಲ್ಲ. ಬಿಜೆಪಿಗೆ ಸೇರಿದ ಮೇಲೆ ಅವರೂ ನಮ್ಮವರೇ. ಎಲ್ಲರೂ ಸೇರಿ ಉಪ ಚುನಾವಣೆ ನಡೆಸಿದ್ದರಿಂದಾಗಿ 12 ಸ್ಥಾನಗಳನ್ನು ಗೆದ್ದಿದ್ದೇವೆ. ಹೊರಗಿನಿಂದ ಪಕ್ಷಕ್ಕೆ ಬಂದವರೂ ಬಿಜೆಪಿಯನ್ನು ತಾಯಿ ಪಕ್ಷ ಎಂದು ಸ್ವೀಕರಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ದೇಶದಲ್ಲಿ ವಿವಾದ ಸೃಷ್ಟಿಸಿರುವ ಪೌರತ್ವ ಕಾಯ್ದೆಯ ಬಗ್ಗೆ ಮಾತನಾಡಿದ ನಳಿನ್, ಕಾಯ್ದೆ ಬಗ್ಗೆ ಕಾಂಗ್ರೆಸಿಗರು ಬೆಂಕಿಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಕಾಯ್ದೆಯಿಂದ ನಮ್ಮ ದೇಶದ ಅಲ್ಪ ಸಂಖ್ಯಾತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ದೇಶದಲ್ಲಿ ಈ ಕಾಯ್ದೆ ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಗಲಭೆ ಎಬ್ಬಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿತ್ತು. ಅಧಿಕಾರದಲ್ಲಿ ಇಲ್ಲದಿರುವಾಗ ಗಲಭೆ ಎಬ್ಬಿಸಿ ಲಾಭ ಪಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಗೆ ಕಳೆದ ಆರು ವರ್ಷದಿಂದ ಗಲಭೆ ಮಾಡಲು ವಿಷಯಗಳು ಸಿಕ್ಕಿರಲಿಲ್ಲ. ಇದೀಗ ಈ ಕಾಯ್ದೆಯನ್ನು ಇಟ್ಟುಕೊಂಡು ಗಲಭೆ ಎಬ್ಬಿಸಿ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಇದೀಗ ಸಂಪೂರ್ಣವಾಗಿ ದಿವಾಳಿ ಎದ್ದಿದೆ. ಕಾಂಗ್ರೆಸ್ ಭೌದ್ದಿಕವಾಗಿ, ವೈಚಾರಿಕ, ಸಂಘಟನಾತ್ಮಕವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳಲು ಈ ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ‌. ಕಾಂಗ್ರೆಸ್ ರಾಜಕೀಯದ ಆಟವನ್ನು ಆಡುತ್ತಿದೆ. ಕೇವಲ ಗಲಭೆ ಮಾಡುತ್ತಿದೆ ಎಂದು ಟೀಕಿಸಿದರು

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.