ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ
Team Udayavani, Nov 2, 2022, 10:17 PM IST
ಸಾಗರ: ‘ರಾಮ ಮಂದಿರ ಯಾಕೆ ಬೇಡ’ ಎಂಬ ಕೃತಿಯ ವಿವಾದದ ಹಿನ್ನೆಲೆಯಲ್ಲಿ ನಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ಬರಹಗಾರ, ವಿವಾದಾತ್ಮಕ ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಬುಧವಾರ ಜಾರಿಯಾಗಿದೆ.
ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ಸದಸ್ಯ ಹಳೆಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾದ ಕಾರ್ಯಕರ್ತ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿರುವ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿಕೊಂಡಿತ್ತು. ಗುರುವಾರ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರು ಎಸ್ಪಿ ಮೂಲಕ ಸಮನ್ಸ್ ಜಾರಿ ಮಾಡಿದ್ದರೂ ಅವರು ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ್ ಭಗಾಡೆ ಜಾಮೀನುರಹಿತ ಬಂಧನ ವಾರೆಂಟ್ಗೆ ಆದೇಶಿಸಿದ್ದಾರೆ. ದೂರುದಾರರ ಪರವಾಗಿ ವಕೀಲ ಕೆ.ವಿ.ಪ್ರವೀಣಕುಮಾರ್ ವಾದಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ