ವಿದ್ಯುತ್‌ ಕಂಬಗಳಿಗೆ ಹಾನಿಯಾಗುವ ಮರಗಳ ತೆರವಿಗೆ ಸೂಚನೆ


Team Udayavani, Aug 11, 2020, 1:42 PM IST

ವಿದ್ಯುತ್‌ ಕಂಬಗಳಿಗೆ ಹಾನಿಯಾಗುವ ಮರಗಳ ತೆರವಿಗೆ ಸೂಚನೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್‌ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ನೆಟ್ಟಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್‌ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ ತೆರವುಗೊಳಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎರಡು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸದರೆ ಮಾತ್ರ ಈ ಭಾಗದ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಿದೆ. ಈ ಎರಡು ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗಿವೆ ಎಂದು ಹೇಳಿದರು.

ಅಕೇಶಿಯಾ ಮರ ಬಿದ್ದರೆ 10ರಿಂದ 15 ವಿದ್ಯುತ್‌ ಕಂಬಗಳಿಗೆ ಹಾನಿ ಉಂಟಾಗುತ್ತಿದೆ. ಅರಣ್ಯ ಇಲಾಖೆ ಅಂತಹ ಮರಗಳನ್ನು ಮೊದಲೇ ಗುರುತಿಸಿ ತೆರವುಗೊಳಿಸಬೇಕು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅಕೇಶಿಯಾ ಹಾಗೂ ನೀಲಗಿರಿ ಸಸಿಗಳನ್ನು ನೆಡಬಾರದು. ಅಕೇಶಿಯಾ ಮರಗಳ ತೆರವುಗೊಳಿಸಲು ಕೋರಿ ಮೆಸ್ಕಾಂ ಸಲ್ಲಿಸುವ ಪ್ರಸ್ತಾವನೆಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.

ತೀರ್ಥಹಳ್ಳಿ ಭಾಗದಲ್ಲಿ ಮಳೆ ಗಾಳಿಯಿಂದಾಗಿ 314 ವಿದ್ಯುತ್‌ ಕಂಬಗಳು ಬಿದ್ದಿದ್ದು, 116 ಕಂಬಗಳನ್ನು ಅಳವಡಿಸಲಾಗಿದೆ. ಇನ್ನುಳಿದ ಕಂಬಗಳನ್ನು ಮೂರು ದಿನಗಳ ಒಳಗಾಗಿ ಅಳವಡಿಸಲಾಗುವುದು. ಈ ಭಾಗದಲ್ಲಿ ವಿದ್ಯುತ್‌ ಕಂಬಗಳಿಗೆ ಅಪಾಯಕಾರಿಯಾಗಿರುವ 940 ಅಕೇಶಿಯಾ ಮರಗಳನ್ನು ತೆರವುಗೊಳಿಸುವ ಕುರಿತು ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.

ಮರಗಳನ್ನು ತೆರವುಗೊಳಿಸಲು ಅಗತ್ಯವಾದ ಕಟ್ಟರ್‌ಗಳನ್ನು ಖರೀದಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು. ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳಿಗೆ ಅಡ್ಡಿ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅರಣ್ಯದ ಪ್ರಾಣಿ- ಪಕ್ಷಿಗಳಿಗೆ ಅನುಕೂಲಕರವಾಗಿರುವ ಇಂತಹ ಯೋಜನೆಗಳ ಜಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಬಾರದು ಎಂದು ಅವರು ಸ್ಪಷ್ಪಪಡಿಸಿದರು.

ಶಾಸಕ ಆರಗ ಜ್ಞಾನೇಂದ್ರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾ ಕಾರಿ ಶಂಕರ್‌, ಸಾಗರ ವಿಭಾಗದ ಡಿಎಫ್‌ಒ ಮೋಹನಕುಮಾರ್‌ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.