ಮಾನ್ಯತೆ ಪಡೆಯದ ಶಾಲೆಗಳ ರದ್ದತಿಗೆ ಸೂಚನೆ

•ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಸಮಗ್ರ ವರದಿ ನೀಡಿ: ದಯಾನಂದ್‌

Team Udayavani, May 14, 2019, 3:58 PM IST

shivamoga-tdy-1..

ಶಿವಮೊಗ್ಗ: ಶಿಕ್ಷಣ ಇಲಾಖೆ ಪ್ರಗತಿ ಕುರಿತು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಸಭೆ ನಡೆಸಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆಯದೆ ನಡೆಸುತ್ತಿರುವ ಖಾಸಗಿ ಪ್ರಾಥಮಿಕ ಶಾಲೆಗಳ ಮಾನ್ಯತೆ ರದ್ದುಗೊಳಿಸಲು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಲಾ ದಾಖಲಾತಿ ಹಾಗೂ ವ್ಯವಸ್ಥಿತ ನಿರ್ವಹಣೆ ಕುರಿತು ಸೋಮವಾರ ಏರ್ಪಡಿಸಲಾಗಿದ್ದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಇಲಾಖೆಯ ನಿಯಮ ಮೀರಿ ಪೋಷಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಹಾಗೂ ಆರ್‌.ಟಿ.ಇ. ಯೋಜನೆಯಡಿ ದಾಖಲಾದ ಮಕ್ಕಳ ಪೋಷಕರಿಂದಲೂ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆಯೂ ಸಾರ್ವಜನಿಕ ವಲಯದಿಂದ ಭಾರೀ ಪ್ರಮಾಣದ ದೂರುಗಳು ಕೇಳಿ ಬರುತ್ತಿದ್ದು, ಇವುಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರಿಂದ ಹೆಚ್ಚಿನ ಹಣ ವಸೂಲಿ ಮಾಡಿರುವುದನ್ನು ಹಾಗೂ ಆರ್‌ಟಿಇ ಮಕ್ಕಳ ಪೋಷಕರಿಂದ ಹಣ ವಸೂಲಿ ಮಾಡಿರುವುದನ್ನು ಶಾಲಾ ಆಡಳಿತ ಮಂಡಳಿಯವರು ಹಿಂದಿರುಗಿಸಿ, ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ವರದಿ ನೀಡಬೇಕು. ಇವೆಲ್ಲವನ್ನು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಸಮಗ್ರ ವರದಿಯನ್ನು ಒಂದು ವಾರದೊಳಗಾಗಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಖಾಸಗಿ ಶಾಲೆಗಳ ಸೂಚನಾ ಫಲಕದಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರ ನೀಡಬೇಕಾದ ಶುಲ್ಕಗಳ ವಿವರಗಳನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಅನೇಕ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ, ದಾಖಲಾತಿಯಲ್ಲಿನ ಸಮಸ್ಯೆ, ವಾಹನ ವ್ಯವಸ್ಥೆ ಮುಂತಾದ ಲೋಪಗಳ ಕುರಿತು ನೋಟಿಸ್‌ ಜಾರಿಗೊಳಿಸಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವ ಶಾಲೆಗಳ ಪರವಾನಗಿಯನ್ನು ಅಮಾನತುಗೊಳಿಸುವುದು ಅನಿವಾರ್ಯವಾಗಲಿದೆ. ಪೋಷಕರು ಪರವಾನಗಿ ನವೀಕರಿಸದ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸದಂತೆ ಅವರು ಸೂಚಿಸಿದರು.

ಶಾಲಾ ಮಕ್ಕಳನ್ನು ಕರೆದೊಯ್ಯಲು ಇರುವ ವಾಹನಗಳ ಸ್ಥಿತಿ-ಗತಿ, ವಾಹನ ಚಾಲಕನ ಅನುಭವ, ಮಾರ್ಗ, ವಾಹನ ಸಂಖ್ಯೆ, ವಾಹನ ವಿಮೆ ಮುಂತಾದವುಗಳನ್ನು ಶಾಲಾ ಆಡಳಿತ ಮಂಡಳಿಯವರು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಕಾರಿಗಳಿಗೆ ಸಲ್ಲಿಸಿ ಅನುಮತಿ ಪಡೆಯಬೇಕು. ಬಿಇಒ ಪರವಾನಗಿ ಪಡೆಯದೇ ನಡೆಸುತ್ತಿರುವ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ತಮ್ಮ ಸೂಚನೆಯ ನಂತರವೂ ಸುಧಾರಣೆ ಕಾಣದ ಶಾಲೆಗಳ ಮಾನ್ಯತೆ ರದ್ದುಪಡಿಸಿ ಆದೇಶ ಹೊರಡಿಸಬೇಕು. ತಪ್ಪಿದಲ್ಲಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಂದಿರುವ ಫಲಿತಾಂಶದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ವಿಷಯ ಪರೀವೀಕ್ಷಕರು ಹಾಗೂ ವಿಷಯವಾರು ಶಿಕ್ಷಕರು ಫಲಿತಾಂಶದ ಹಿನ್ನೆಡೆಗೆ ಆತ್ಮಾವಲೋಕನ ಮಾಡಿಕೊಂಡು ಫಲಿತಾಂಶ ಸುಧಾರಣೆಗೆ ಕ್ರಮವಹಿಸಬೇಕು. ತಪ್ಪಿದಲ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡುವುದು ಅನಿವಾರ್ಯವಾಗಲಿದೆ ಎಂದರು.

ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದ ಪ್ರೌಢಶಾಲೆಯ ಈ ಬಾರಿಯ ಫಲಿತಾಂಶ ಅತ್ಯಂತ ಕಳಪೆಯಾಗಿದ್ದು, ಆ ಶಾಲೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ಅಲ್ಲಿ ಈಗಾಗಲೇ ದಾಖಲಾಗಿರುವ ಮಕ್ಕಳನ್ನು ಸಮೀಪದ ಸರ್ಕಾರಿ ಶಾಲೆಗೆ ದಾಖಲಿಸುವಂತೆಯೂ ಅವರು ಶಿಕಾರಿಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ, ಫಲಿತಾಂಶ ಸುಧಾರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವರ್ತನೆ ಕ್ಷಮಿಸಲಾಗುವುದಿಲ್ಲ. ಖಾಸಗಿ ಶಾಲೆಗಳಲ್ಲಿ ನೋಟ್ ಪುಸ್ತಕ, ಸಮವಸ್ತ್ರಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯ ಮಾಡುತ್ತಿರುವುದರ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಶಾಲಾ ಆವರಣದ ವ್ಯಾಪ್ತಿಯಲ್ಲಿ ಮಾರಾಟ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದರೂ ಆದೇಶವನ್ನು ನಿರ್ಲಕ್ಷ ್ಯ ಮಾಡಿ, ಮಾರಾಟ ಮಾಡುವವರ ವಿರುದ್ಧವೂ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸುಮಂಗಳಾ ಪಿ. ಕುಚಿನಾಡ, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕ ಇಮ್ತಿಯಾಜ್‌ ಅಹ್ಮದ್‌, ಎಲ್ಲ ತಾಲೂಕುಗಳ ಬಿಇಒ, ಶಿಕ್ಷಣ ಇಲಾಖೆ ಅಧಿಕಾರಿ-ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.