ದಿಲ್ಲಿಯಿಂದ ಶಿವಮೊಗ್ಗಕ್ಕೆ ಬಂದ ಮಹಿಳೆಗೆ ಕೋವಿಡ್ ಸೋಂಕು ದೃಢ
Team Udayavani, May 29, 2020, 1:38 PM IST
ಶಿವಮೊಗ್ಗ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಿಂದ ಶಿವಮೊಗ್ಗ ಜಿಲ್ಲೆಗೆ ಬಂದ ಮಹಿಳೆಯೋರ್ವರಿಗೆ ಕೋವಿಡ್-19 ಸೋಂಕು ದೃಢವಾಗಿದೆ, ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆ ಕಂಡಿದೆ.
ಹೊಸದಿಲ್ಲಿಯಿಂದ ಜಿಲ್ಲೆಗೆ ಬಂದಿದ್ದ 35 ವರ್ಷದ ಮಹಿಳೆಗೆ ( P-2583 ) ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲು ದ್ರವ ಪರೀಕ್ಷೆ ವೇಳೆ ಸೋಂಕು ತಾಗಿರುವುದು ದೃಢವಾಗಿದೆ.
ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದಿನ ಒಂದು ಸೋಂಕು ಪ್ರಕರಣದ ಕಾರಣದಿಂದ ಜಿಲ್ಲೆಯ ಕೋವಿಡ್- 19 ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಈ 35 ಜನರಲ್ಲಿ 7 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 28 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು ಹೊಸ 178 ಸೋಂಕು ಪ್ರಕರಣಗಳು ಕಂಡು ಬಂದಿದೆ. ಆದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711ಕ್ಕೆ ಎರಿಕೆಯಾಗಿದೆ. ಇದರಲ್ಲಿ 869 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 47 ಜನ ಸೋಂಕಿತರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
ತಾಜ್ ಮಹಲ್ ನೋಡಲು ಬಂದ ಅರ್ಜೆಂಟೀನಾ ಪ್ರವಾಸಿಗೆ ಕೋವಿಡ್; ವ್ಯಕ್ತಿ ನಾಪತ್ತೆ!
ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ದರ ನಿಗದಿ; ಖಾಸಗಿ/ಸರ್ಕಾರಿ ಆಸ್ಪತ್ರೆಯಲ್ಲಿ ದರ ಎಷ್ಟು?
ದೇಶದಲ್ಲಿಂದು ಕೋವಿಡ್ ಚಿಕಿತ್ಸಾ ತಾಲೀಮು: ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು