Udayavni Special

ಶಿವಮೊಗ್ಗ ಮನೆ ತೆರವು ವಿರೋಧಿಸಿ ಪ್ರತಿಭಟನೆ


Team Udayavani, Oct 11, 2020, 8:06 PM IST

sm-tdy-1

ಶಿವಮೊಗ್ಗ: ಮನೆಗಳ ತೆರವು ವಿರೋ ಧಿಸಿ ಇಲ್ಲಿನ ಇಮಾಂಬಡಾ ನಿವಾಸಿಗಳು ಪ್ರತಿಭಟನೆ ನಡೆಸಿದರು. ಶನಿವಾರ ಪಾಲಿಕೆಯಿಂದ ಮನೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲು ಮುಂದಾದಾಗ ನಿವಾಸಿಗಳು ಪ್ರತಿರೋಧ ವ್ಯಕ್ತಪಡಿಸಿದರಲ್ಲದೆ ಧರಣಿ ನಡೆಸಿದರು.

ಪಾಲಿಕೆ ವಿಪಕ್ಷ ನಾಯಕ ಎಚ್‌.ಸಿ.ಯೋಗೀಶ್‌ ಮತ್ತು ಸದಸ್ಯರಾದ ನಾಗರಾಜ್‌ ಕಂಕಾರಿ ಹಾಗೂ ಕೆ.ರಂಗನಾಥ್‌ ಪ್ರತಿಭಟನೆಗೆ ಸಾಥ್‌ ನೀಡಿದರು. ಪ್ರತಿ ಬಾರಿ ಮಳೆಗಾಲದಲ್ಲೂ ಇಮಾಂಬಡಾದಲ್ಲಿರುವ ಸುಮಾರು 27ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗುತ್ತದೆ. ಪ್ರತಿ ಬಾರಿ ಪ್ರವಾಹ ಬಂದಾಗ ಇಲ್ಲಿನ ನಿವಾಸಿಗಳಿಗೆ ಸಂಕಷ್ಟಎದುರಾಗುತ್ತದೆ. ಹೀಗಾಗಿ ಮಹಾನಗರಪಾಲಿಕೆಇವರಿಗೆ ಬೇರೆ ಕಡೆ ಜಾಗ ನೀಡಿ ಮನೆಗಳನ್ನು ತೆರವುಗೊಳಿಸಲು ಮುಂದಾಗಿದೆ. ಆದರೆ ಬೇರೆಡೆ ನೀಡಲಾದ ಸ್ಥಳದಲ್ಲಿ ಯಾವುದೇ ಸೌಕರ್ಯವಿಲ್ಲ ಹೀಗಾಗಿ ಮನೆ ತೆರವುಗೊಳಿಸಬಾರದು ಎಂದು ನಿವಾಸಿಗಳು ಒತ್ತಾಯಿಸಿದರು.

ಪಾಲಿಕೆ ಗುರುತಿಸಿರುವ ಹಾಯ್‌ಹೊಳೆಯ ಜಾಗದಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಹಾಗೂ ಮನೆಗಳನ್ನು ತೆರವುಗೊಳಿಸದಂತೆ ಇಲ್ಲಿನ ಕೆಲವರು ನ್ಯಾಯಾಲಯದ ಮೊರೆಹೋಗಿದ್ದರು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಪಾಲಿಕೆ ಅಧಿಕಾರಿಗಳು ತೆರವುಗೊಳಿಸುತ್ತಿರುವುದಕ್ಕೆ ಅಲ್ಲಿನ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಸ್ಥಳದಲ್ಲಿಯೇ ಧರಣಿಕುಳಿತರು. ಯಾವುದೇ ಕಾರಣಕ್ಕೂ ಮನೆ ತೆರವುಗೊಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಪಾಲಿಕೆ ವಿಪಕ್ಷ ನಾಯಕ ಎಚ್‌.ಸಿ.ಯೋಗೀಶ್‌ ಮಾತನಾಡಿ, ಇಮಾಂಬಡಾದಲ್ಲಿ ಸಮಸ್ಯೆ ಇದ್ದೇ ಇದೆ. ಇಲ್ಲಿನ ನಿವಾಸಿಗಳಿಗೆ ಬೇರೆ ಕಡೆ ಜಾಗ ನೀಡಲಾಗಿದೆ. ಆದರೆ ಅಲ್ಲಿ ಮೂಲ ಸೌಕರ್ಯ ಇಲ್ಲ. ಮೊದಲು ಸೌಕರ್ಯಗಳನ್ನು ಕಲ್ಪಿಸಲಿ.

ಅಲ್ಲದೇ ಅಲ್ಲಿ ಕೆಲವು ಖಾಸಗಿಯವರು ಇದು ತಮ್ಮ ಜಾಗವೆಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಪಾಲಿಕೆಯವರು ಎಲ್ಲಸಮಸ್ಯೆಗಳನ್ನು ಬಗೆಹರಿಸಿ ಆಮೇಲೆ ನಿವಾಸಿಗಳನ್ನು ಸ್ಥಳಾಂತರಗೊಳಿಸಲಿ ಎಂದು ಹೇಳಿದರು.

ಇಮಾಂಬಡಾದ ನಿವಾಸಿಗಳ ಸ್ಥಳಾಂತರ ಅನಿವಾರ್ಯ. ಇಲ್ಲಿನ ನಿವಾಸಿಗಳಿಗೆ ಈಗಾಗಲೇ ಬೇರೆ ಕಡೆ ಜಾಗ ಗುರುತಿಸಲಾಗಿದೆ. ಅಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಆದರೂ ಇವರು ಹೋಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಪ್ರತಿ ಬಾರಿ ಪ್ರವಾಹ ಉಂಟಾದಾಗಲೂ ಇಲ್ಲಿನ ನಿವಾಸಿಗಳು ಪರಿಹಾರ ಪಡೆಯುತ್ತಾರೆಯೇ ಹೊರತು ಹೊಸ ಜಾಗಕ್ಕೆ ಹೋಗಲು ಒಪ್ಪುವುದಿಲ್ಲ. ಹೀಗಾದರೆ ಸಮಸ್ಯೆ ಬಗೆಹರಿಯುವುದಾದರೂ ಹೇಗೆ? ಹಾಯ್‌ಹೊಳೆ ಜಾಗದಲ್ಲಿ ಎಲ್ಲರಿಗೂ ನಿವೇಶನ ನೀಡಲಾಗಿದೆ. ಮನೆ ಕಟ್ಟಿಕೊಳ್ಳಲೆಂದೇ ಪ್ರತಿಯೊಬ್ಬರಿಗೂ 1.25 ಲಕ್ಷ ಹಣ ಪಾವತಿಸಲಾಗಿದೆ. ಆದರೂ ಕೂಡ ನಿವಾಸಿಗಳು ಹೊಸ ಜಾಗಕ್ಕೆ ತೆರಳುತ್ತಿಲ್ಲ. ಈಗಾಗಲೇ ಅವರಿಗೆಮನೆ ಖಾಲಿ ಮಾಡುವಂತೆ ತಿಳಿಸಿ 1 ವರ್ಷದ ಕಾಲಾವಕಾಶ ನೀಡಲಾಗಿದೆ. ಇವರು ಅಲ್ಲಿಗೆ ತೆರಳಿದ ಕೂಡಲೇ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿಕೊಡಲಾಗುವುದು. ಸದ್ಯ ಅನಿವಾರ್ಯವಾಗಿ ಇಲ್ಲಿನ ಮನೆಗಳನ್ನು ತೆರವುಗೊಳಿಸಬೇಕಾಗಿದೆ. ಇಲ್ಲದಿದ್ದರೆ ಈ ಸಮಸ್ಯೆ ಜೀವಂತವಾಗಿ ಉಳಿಯುತ್ತದೆ ಮತ್ತು ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivamogga news

ಸಿದ್ದು ಅಲ್ಪಸಂಖ್ಯಾತರಿಗೆ ಉತ್ತರ ನೀಡಲಿ: ಎಚ್ಡಿಕೆ

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

shivamogga news

ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆಗೆ ನಿರ್ಧಾರ

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.