ರೈತ ಸಂಘಟನೆಗಳಿಂದ ಛೀ..ಥೂ..ಪ್ರತಿಭಟನೆ

•ಎಲೆ, ಅಡಿಕೆ ಜಗಿದು ಪಕ್ಷದ ಪ್ರತಿಕೃತಿಗೆ ಉಗಿದರು•ಪ್ರಸಕ್ತ ರಾಜಕೀಯ ವಿದ್ಯಮಾನಕ್ಕೆ ಆಕ್ರೋಶ

Team Udayavani, Jul 16, 2019, 11:41 AM IST

sm-tdy-2..

ಶಿವಮೊಗ್ಗ: ಶಾಸಕರಿಂದ ಪ್ರಜಾಪ್ರಭುತ್ವ ಕಗ್ಗೊಲೆ ಖಂಡಿಸಿ ರೈತ ಸಂಘ ಉಗಿಯುವ ಚಳವಳಿ ನಡೆಸಿತು.

ಶಿವಮೊಗ್ಗ: ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ ‘ಛೀ.. ಥೂ’ ವಿಶಿಷ್ಟ ಪ್ರತಿಭಟನೆ ನಡೆಯಿತು.

ಮೂರೂ ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಶಿವಪ್ಪ ನಾಯಕ ವೃತ್ತದಲ್ಲಿ ಜೆಡಿಎಸ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಪ್ರತಿಕೃತಿ ಇಟ್ಟು ಎಲೆ, ಅಡಿಕೆ ತಿಂದು ಛೀ.. ಥೂ ಎಂದು ಅದಕ್ಕೆ ಉಗಿಯುವ ಮೂಲಕ ಪ್ರತಿಭಟಿಸಿದರು. ನಾಗರಿಕರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ನಾಶ ಮಾಡಲು ಹೊರಟಿರುವ, ರಾಜೀನಾಮೆ ನೀಡಿರುವ ಶಾಸಕರಿಗೆ ಛೀಮಾರಿ ಹಾಕಿದರು.

ಕೆಲವು ಶಾಸಕರು ಹಣಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಮತ್ತೆ ಕೆಲ ಪಕ್ಷದ ಮುಖಂಡರು ಅಧಿಕಾರಕ್ಕಾಗಿ ರಾಜೀನಾಮೆ ನೀಡುವಂತೆ ಪ್ರೇರೇಪಣೆ ನೀಡಿದ್ದಾರೆ. ಶಾಸಕರೆಂದರೆ ಮಾರಾಟದ ವಸ್ತುವಾಗಿ ಬಿಟ್ಟಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಇವರು ರೆಸಾರ್ಟ್‌ಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಾ ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಇವು ಕೂಡ ಅನೈತಿಕ ಚಟುವಟಿಕೆ ಎಂದು ಕಿಡಿಕಾರಿದರು.

ರಾಜ್ಯದ ಮೂರು ಪಕ್ಷಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುತ್ತಿವೆ. ಇಂತಹ ರಾಜಕಾರಣಿಗಳಿಗೆ ಮತದಾರರೇ ಮುಂದೊಂದು ದಿನ ಬುದ್ಧಿ ಕಲಿಸುತ್ತಾರೆ. ಇದೆಲ್ಲ ಸರಿಯಾಗಬೇಕಾದರೆ ಪಕ್ಷಾಂತರ ನಿಷೇಧ ಮಸೂದೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು ಮತ್ತು ಸ್ವಾರ್ಥಕ್ಕಾಗಿ, ಹಣಕ್ಕಾಗಿ ಪಕ್ಷಾಂತರ ಮಾಡಿದ ಶಾಸಕರು ಮತ್ತೆಂದೂ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕಾನೂನು ಜಾರಿಯಾಗಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು. ದಾವಣಗೆರೆ, ಚಿತ್ರದುರ್ಗ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್‌.ಬಸವರಾಜಪ್ಪ, ಪ್ರಮುಖರಾದ ಕೆ.ರಾಘವೇಂದ್ರ, ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಬಿ.ಎಂ.ಚಿಕ್ಕಸ್ವಾಮಿ, ಎಸ್‌.ಶಿವಮೂರ್ತಿ, ಅರೆಬಿಳಚಿ ಶಿವಣ್ಣ, ರಾಮಚಂದ್ರಪ್ಪ, ಇ.ಬಿ. ಜಗದೀಶ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.