ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ


Team Udayavani, Feb 14, 2021, 4:28 PM IST

Protest protesting price rise

ಶಿವಮೊಗ್ಗ: ಪೆಟ್ರೋಲ್‌, ಡಿಸೇಲ್‌ ಮತ್ತು ಗ್ಯಾಸ್‌ ದರ ಏರಿಕೆ ವಿರೋ ಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಶನಿವಾರ ಮಹಾವೀರ ವೃತ್ತದಲ್ಲಿ ಬೈಕಿಗೆ ಛಟ್ಟ ಕಟ್ಟಿ ಅಣಕು ಪ್ರದರ್ಶನದ ಮೂಲಕ ವಿಭಿನ್ನ ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ  ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್‌ ದರ ಕಡಿಮೆಯಾಗಿದ್ದರೂ ಕೂಡ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್‌ ಬೆಲೆ ಏರಿಕೆ ಮಾಡುತ್ತಿದೆ. ಕೇಂದ್ರ ಸರ್ಕಾರ ಜನ ಸಾಮಾನ್ಯರ ನೋವುಗಳಿಗೆ ಸ್ಪಂದಿಸುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಉದ್ಯೋಗ ಸೃಷ್ಟಿಯಲ್ಲಿಯೂ ವಿಫಲವಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಬಿಜೆಪಿ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಅಸಿಟೈಲಿನ್‌ ಅನಿಲದಿಂದ ದ್ವಿಚಕ್ರ ವಾಹನ ಚಾಲನೆ ಆವಿಷ್ಕಾರ

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡ ಜನರಿಗೆ ನೆರವು ನೀಡಬೇಕಿದ್ದ ಸರ್ಕಾರ ಜನರಿಂದಲೇ ಹಣ ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಇದೇನಾ ಕೇಂದ್ರ ಸರ್ಕಾರದ ಅಚ್ಛೇ ದಿನ್‌ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್‌, ಜಿಲ್ಲಾಧ್ಯಕ್ಷ ಎಚ್‌.ಎಸ್‌. ಬಾಲಾಜಿ, ಯುವ ಮುಖಂಡ ಸಿ.ಜಿ. ಮಧುಸೂದನ್‌, ಮಹಮ್ಮದ್‌ ನಿಹಾಲ್‌, ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ರವಿಕುಮಾರ್‌, ವಿಜಯ್‌, ವಿನಯ್‌ ತಾಂಡ್ಲೆ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.