ಜಾತ್ರೆ ಸಂದರ್ಭ ಮಳೆ-ಶುಭಸೂಚನೆ
Team Udayavani, Apr 6, 2022, 4:14 PM IST
ಸಾಗರ: ಮಹಾಗಣಪತಿ ದೇವರು ನಮ್ಮೂರಿನ ಆರಾಧ್ಯ ಧೈವ. ಗಣಪತಿ ಜಾತ್ರೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ನಡೆದಿದ್ದು, ಸಹಸ್ರಾರು ಜನರ ಸಮ್ಮುಖದಲ್ಲಿ ಮಹಾಗಣಪತಿ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆದಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ಮಹಾಗಣಪತಿ ಜಾತ್ರೋತ್ಸವ ಅಂಗವಾಗಿ ಮಂಗಳವಾರ ನೆರವೇರಿದ ಮಹಾಗಣಪತಿ ಮಹಾಸ್ಯಂದನ ರಥೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಹಾಗಣಪತಿ ಜಾತ್ರೆ ಪ್ರಾರಂಭವಾಗಿದೆ ಎಂದರೆ ಭೂಮಿಗೆ ಮೊದಲ ಮಳೆ ಬರುತ್ತದೆ ಎಂಬ ವಾಡಿಕೆ ಮಾತಿತ್ತು. ಅದೇ ರೀತಿ ಎರಡು ದಿನಗಳಿಂದ ಉತ್ತಮ ಮಳೆ ಸಹ ಆಗಿದ್ದು ಇದು ಶುಭ ಸೂಚನೆಯಾಗಿದೆ.
ಗಣಪತಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಪ್ರತಿದಿನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಬುಧವಾರದಿಂದ ಪ್ರತಿದಿನ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ. ಭಕ್ತಾದಿಗಳು ಶಾಂತಿ ಮತ್ತು ಸೌಹಾರ್ದತೆ ಕಾಯ್ದುಕೊಳ್ಳುವ ಮೂಲಕ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊರಬ : ಎಸ್ಸೆಸ್ಸೆಲ್ಸಿ ಯಲ್ಲಿ ಸಮಾನ ಅಂಕ ಗಳಿಸುವ ಮೂಲಕ ಗಮನ ಸೆಳೆದ ಅವಳಿ ಸಹೋದರಿಯರು
ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಸಾಗರ: ನೆಡುತೋಪು ಕಾವಲು ಕಾಯುತ್ತಿದ್ದವನಿಂದಲೇ ಪ್ಲಾಂಟೇಶನ್ನಿಂದ ಮರ ಕಳ್ಳತನ; ಆರೋಪಿಗಳ ಬಂಧನ
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಅವಾಂತರ ತಪ್ಪಿಸಲು ಮನವಿ
ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ