ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೊಳಿಸಿ
Team Udayavani, Sep 20, 2020, 6:57 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಮಾರ್ಚ್ 23 ರಿಂದ ಇದುವರೆಗೂ ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆಯಾಗಿಲ್ಲ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡದಿದ್ದಲ್ಲಿ ಆಡಳಿತ ಪಕ್ಷದ ಶಾಸಕನಾಗಿ ಸದನದಲ್ಲಿ ಉನ್ನತ ಶಿಕ್ಷಣ ಸಚಿವರ ವಿರುದ್ಧ ಧ್ವನಿಯೆತ್ತಬೇಕಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಸಂದರ್ಭದಲ್ಲಿ ವೇತನ ಸಿಗದೇ ಜೀವನ ನಿರ್ವಹಣೆ ಸಾಧ್ಯವಾಗದೆ ನಾಲ್ವರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದು ಅಲ್ಲದೇ ಅನಾರೋಗ್ಯಕ್ಕೆ ತುತ್ತಾಗಿ 18 ಉಪನ್ಯಾಸಕರು ಮೃತಪಟ್ಟಿದ್ದಾರೆ. ಇಂದು ಉನ್ನತ ಶಿಕ್ಷಣ ಕಲಿತವರು ಒಂದುಹೊತ್ತಿನ ಊಟಕ್ಕಾಗಿ ಪರಿತಪಿಸುವಂತಹ ಸಂದರ್ಭ ಬಂದಿದೆ ಎಂದರು.
ಕೇಂದ್ರ ಸರ್ಕಾರ ಜುಲೈವರೆಗೆ ವೇತನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದರೂ ಸಹ ರಾಜ್ಯ ಸರ್ಕಾರ ಇದನ್ನು ಪಾಲನೆ ಮಾಡಿಲ್ಲ. ವೇತನ ಸಿಗದೇ ಅತಿಥಿ ಉಪನ್ಯಾಸಕರು ಕೂಲಿ ಕೆಲಸ, ಹಣ್ಣುಹಂಪಲು ಮಾರಾಟ ಸೇರಿದಂತೆ ಇತರೆ ಕೆಲಸಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಇವರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸಂಬಂಧಿ ಸಿದಂತೆಉನ್ನತ ಸಚಿವರನ್ನು ಕರೆಸಿ, ಚರ್ಚಿಸಿ ವೇತನ ಬಿಡುಗಡೆ ಮಾಡುವಂತೆ ಸೂಚಿಸಬೇಕು. ಕೂಡಲೇ ಸರ್ಕಾರ ವೇತನ ಬಿಡುಗಡೆ ಮಾಡಬೇಕು, ಇಲ್ಲದಿದ್ದಲ್ಲಿ ಸದನದಲ್ಲಿ ಉಪನ್ಯಾಸಕರ ಪರ ಬಹಿರಂಗವಾಗಿ ನಿಲ್ಲುವುದಕ್ಕೆ ಹಿಂಜರಿಯುವುದಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ