Sagara: ಹಸಲರು ಸಮುದಾಯಕ್ಕೆ ಪೌಷ್ಟಿಕ ಆಹಾರ ಪೂರೈಕೆ ಪುನರಾರಂಭ; ಆಗ್ರಹ

Team Udayavani, Aug 22, 2023, 3:18 PM IST

12-sagara

ಸಾಗರ: ರಾಜ್ಯದ ಬುಡಕಟ್ಟು ಜನಾಂಗವಾದ ಹಸಲರು ಸಮುದಾಯಕ್ಕೆ ನೀಡುತ್ತಿರುವ ಪೌಷ್ಟಿಕ ಆಹಾರವನ್ನು ಪುನರ್ ಪ್ರಾರಂಭಿಸುವಂತೆ ಒತ್ತಾಯಿಸಿ ಆ.22ರ ಮಂಗಳವಾರ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಣ್ಣ ಹಸಲರು ಮಾತನಾಡಿ, ಹಸಲರು ಜನಾಂಗಕ್ಕೆ ರಾಜ್ಯ ಸರ್ಕಾರ ನೀಡುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಈ ಸಾಲಿನ ಜೂನ್‌ನಿಂದ ನಿಲ್ಲಿಸಲಾಗಿದೆ. ಎಸ್‌ಟಿ ಜನಾಂಗಕ್ಕೆ ಸೇರಿರುವ ಹಸಲರು ಸಮುದಾಯಕ್ಕೆ ಜೂನ್‌ನಿಂದ ಡಿಸೆಂಬರ್ ತಿಂಗಳವರೆಗೆ ಆರು ತಿಂಗಳಿಗೆ ಆಗುವಷ್ಟು ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿತ್ತು ಎಂದರು.

ಮುಂದುವರೆದು ಮಾತನಾಡಿ, ಕೇಂದ್ರ ಸರ್ಕಾರ ಸಮುದಾಯಕ್ಕೆ ವರ್ಷಪೂರ್ತಿ ಆಹಾರ ಕಿಟ್ ನೀಡಬೇಕು ಎಂದು ಆದೇಶ ಮಾಡಿದೆ. ಆದರೆ ರಾಜ್ಯ ಸರ್ಕಾರ ಜೂನ್‌ನಿಂದ ಸಂಪೂರ್ಣವಾಗಿ ಕಿಟ್ ಕೊಡುವುದನ್ನೇ ನಿಲ್ಲಿಸಿಬಿಟ್ಟಿದೆ. 10 ಕೆಜಿ ಕೊಡುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲ ಧಾನ್ಯಗಳನ್ನು ನೀಡಬೇಕು. ಜೊತೆಗೆ ಆರು ತಿಂಗಳ ಬದಲು 12 ತಿಂಗಳು ಆಹಾರ ಕಿಟ್ ನೀಡಬೇಕು ಎಂದು ಒತ್ತಾಯಿಸಿದ ಅವರು ಅರಣ್ಯ ಮೂಲ ಬುಡಕಟ್ಟು ನಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹೆಚ್ಚಿನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸಾಗರದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಮಾತನಾಡಿ, ಹಸಲರು ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು ಕಾಡಿನ ನಡುವೆ ವಾಸ ಮಾಡುತ್ತಿವೆ. ಸರ್ಕಾರ ಅವರಿಗೆ ನೀಡಿರುವ ಆಹಾರದ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಾರದು. ಪೌಷ್ಟಿಕ ಆಹಾರ ಪಡೆಯಲು ಒಕ್ಕೂಟ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ 12 ಬುಡಕಟ್ಟು ಸಮುದಾಯದ ಹೋರಾಟದಿಂದ ಆಹಾರ ಕಿಟ್ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇದೀಗ ಅದನ್ನು ನಿಲ್ಲಿಸುವ ಕ್ರಮ ಖಂಡನೀಯ. ತಕ್ಷಣ ಎಂದಿನಂತೆ ಆಹಾರ ಕಿಟ್ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಒಕ್ಕೂಟದ ಮಹಿಳಾ ಪ್ರಮುಖರಾದ ಲಕ್ಷ್ಮಮ್ಮ ಹಿರೇಮನೆ ಮಾತನಾಡಿದರು. ಪ್ರತಿಭಟನೆಯಲ್ಲಿ ಮಂಜುಳಾ, ಶೋಭಾ, ಕಮಲಾಕ್ಷಿ ಕಡಕೋಡು, ಈಶ್ವರ, ಕೃಷ್ಣಮೂರ್ತಿ, ನಾಗರತ್ನ, ರವೀಂದ್ರ, ಎಂ.ಸಿ. ಸುಂದರಪ್ಪ, ಈಶ್ವರ, ನಾರಾಯಣಪ್ಪ, ಗೌರಿ, ಗಂಗಾಧರ, ಎಂ.ಬಿ.ಮಂಜಪ್ಪ ಹಿರೇನೆಲ್ಲೂರು, ಸೋಮಾವತಿ, ಸುಂದರಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.