ಕೊಡಗಲ್ಲಿ 4 ಸಾವಿರ ಕೋಟಿ ರೂ.ಆರ್ಥಿಕ ನಷ್ಟ: ಸಾ.ರಾ. ಮಹೇಶ

Team Udayavani, Sep 25, 2018, 6:35 AM IST

ಶಿವಮೊಗ್ಗ: ಅತಿವೃಷ್ಟಿ, ಭೂ ಕುಸಿತದಿಂದ ಕೊಡಗು ಜಿಲ್ಲೆಯಲ್ಲಿ ಸುಮಾರು 4,000 ಕೋಟಿ ರೂ.ಆರ್ಥಿಕ ನಷ್ಟ ಸಂಭವಿಸಿರುವ ಬಗ್ಗೆ ಮಾಹಿತಿ ಇದೆ. ಈ ಪ್ರದೇಶದ ಸಂತ್ರಸ್ತರ ನೆರವಿಗೆ ಅಗತ್ಯವಿರುವ ಎಲ್ಲಾ ರೀತಿಯ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನ ಸಂತ್ರಸ್ತರಿಗೆ ರಾಜ್ಯದ ಎಲ್ಲೆಡೆಯಿಂದ ನೆರವಿನ ಮಹಾಪೂರ ಹರಿದು ಬಂದಿದೆ. ಸುಮಾರು 65 ಕೋಟಿ ರೂ.ಮುಖ್ಯಮಂತ್ರಿಗಳ ಪರಿಹಾರನಿಧಿಗೆ ಜಮಾ ಆಗಿದೆ. ಕೊಡಗಲ್ಲಿ ನೆಲೆ ಕಳೆದುಕೊಂಡು ನಿರಾಶ್ರಿತರಾಗಿರುವ ಪ್ರತಿ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು 6 ಲಕ್ಷ ರೂ.ನೀಡಲಾಗುತ್ತಿದೆ. ಪ್ರತಿ ಕುಟುಂಬಕ್ಕೆ 1.09 ಲಕ್ಷ ರೂ.ವೆಚ್ಚದಲ್ಲಿ ದಿನಬಳಕೆ ಸಾಮಗ್ರಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತರ ಬಹುತೇಕ ಕುಟುಂಬಗಳಿಗೆ ತಕ್ಷಣದ ನೆರವು ನೀಡಲಾಗಿದೆ. ವಾಸದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವವರಿಗೆ ಸ್ವಂತ ಸೂರೊಂದನ್ನು ನಿರ್ಮಿಸಿಕೊಳ್ಳಲು 100 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಬಾಡಿಗೆ ಮನೆಯಲ್ಲಿ ವಾಸಿಸುವವರಿಗಾಗಿ ತಿಂಗಳ 10,000 ರೂ.ಬಾಡಿಗೆ ರೀತಿಯಲ್ಲಿ ಧನಸಹಾಯ ನೀಡಲಾಗುತ್ತಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ