ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Team Udayavani, Jun 12, 2018, 4:13 PM IST

ಶಿವಮೊಗ್ಗ: ನ್ಯಾ| ಸದಾಶಿವ ಆಯೋಗ ಸಲ್ಲಿಸಿರುವ ವರದಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಸಂಘಟನೆ ವತಿಯಿಂದ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸುಮಾರು 1.8 ಕೋಟಿ ಜನಸಂಖ್ಯೆಯನ್ನು ಸಮುದಾಯ ಹೊಂದಿದೆ. ದೇಶದ ಮೂಲ ನಿವಾಸಿಗಳಾದ ಅಸ್ಪೃಶ್ಯ ವರ್ಗಗಳಿಗೆ ಸೇರಿದ ಮಾದಿಗ ಮತ್ತು ಉಪ ಜಾತಿಗಳಿಗೆ ಇಂದೂ ಸಹ ಸ್ವಾತಂತ್ರ ದೊರಕದಿರುವುದು ದುರದೃಷ್ಟಕರ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಈ ವರ್ಗಗಳು ಮೂಲಭೂತ ಹಕ್ಕುಗಳಿಗಾಗಿ ಹೋರಾಟ ಮಾಡುವ ದುಸ್ಥಿತಿ ಮುಂದುವರಿದಿದೆ. ಸಾಮಾಜಿಕ ಸೌಲಭ್ಯಗಳಿಂದ ವಂಚಿತರಾಗಿರುವ ಸಮುದಾಯದವರು ಸಮಾಜದ
ಮುಖ್ಯವಾಹಿನಿಯಿಂದ ಬಹುದೂರ ಉಳಿದಿದ್ದಾರೆ ಎಂದು ತಿಳಿಸಿದರು. 

ರಾಜ್ಯದಲ್ಲಿ ಸುಮಾರು 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿರುವುದು ಸರಿಯಷ್ಟೆ. ಆದರೆ ಸರ್ಕಾರಗಳು ಇತ್ತ ಗಮನಹರಿಸುತ್ತಿಲ್ಲ. ಮಾದಿಗ ಜನಾಂಗಕ್ಕೆ ಸೇರಿದ ರೂಪ ಶಶಿಧರ್‌, ಧರ್ಮಸೇನಾ, ತಿಮ್ಮಾಪುರ ವಿಧಾನಪರಿಷತ್‌ ಸದಸ್ಯರಾಗಿದ್ದಾರೆ. ಆದರೆ ರಾಜ್ಯ ಸಮ್ಮಿಶ್ರ ಸಕಾರರದ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿಲ್ಲ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ದೂರಿದರು.

ಕೂಡಲೇ ಸಂಪುಟದಲ್ಲಿ ಮಾದಿಗರಿಗೆ ಪ್ರಾತಿನಿದ್ಯ ನೀಡಬೇಕು. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು. ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗೆ ಪ್ರಥಮ ಆದ್ಯತೆ ನೀಡಬೇಕು. ರೈತ ಸಾಲ ಮನ್ನಾ ಮಾಡಿದ ಹಾಗೆ ದಲಿತರ ವಿವಿಧ ಸಾಲ ಮನ್ನಾ ಮಾಡಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲೂ ರುದ್ರಭೂಮಿ ಒದಗಿಸಬೇಕು.
 
ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಪಡೆದಿರುವ ಸಾಲ ಮನ್ನಾ ಮಾಡಿ ನೇರ ಸಾಲ ಕೊಡಿಸಬೇಕೆಂದು ಆಗ್ರಹಿಸಿದರು. ಮೂರ್ತಿ, ಪ್ರಭು, ಹಾಲೇಶ್‌, ಮಂಜುನಾಥ್‌ ಮತ್ತಿತರರು ಪಾಲ್ಗೊಂಡಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಶಿವಮೊಗ್ಗ: ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಫೆ.25 ರಂದು ಆರಂಭಗೊಳ್ಳುತ್ತಿದ್ದು ಸಿದ್ಧತೆ ಭರದಿಂದ ಸಾಗಿದೆ ಎಂದು ಎಂದು ಕೋಟೆ ಶ್ರೀ ಮಾರಿಕಾಂಬಾ ಸೇವಾ ಸಮಿತಿ ಅಧ್ಯಕ್ಷ...

  • ಶಿವಮೊಗ್ಗ: ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರ. ರಾಷ್ಟ್ರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಮಕ್ಕಳನ್ನು ಪುಸ್ತಕದ ಹುಳುಗಳನ್ನಾಗಿ...

  • ಶಿವಮೊಗ್ಗ: ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿ ಶನಿವಾರ ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ...

  • ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಸಿ ದುಡಿಮೆಯಲ್ಲಿ ತೊಡಗಿಸುವುದು ಸಂವಿಧಾನದ ವಿರುದ್ಧವಾಗಿದೆ...

  • ಸಾಗರ: ವೃತ್ತಿ ರಂಗಭೂಮಿ ಕಲಾವಿದರಿಗೆ ಆಶ್ರಯ ನೀಡಿದ ತಾಣ ಸಾಗರ. ರಂಗಭೂಮಿ ಕುರಿತು ಸಾಗರದ ಜನರಲ್ಲಿ ವಿಶೇಷವಾದ ಆಸಕ್ತಿಯಿದೆ. ಅನೇಕ ವೃತ್ತಿರಂಗಭೂಮಿ ತಂಡಗಳು ಇಲ್ಲಿ...

ಹೊಸ ಸೇರ್ಪಡೆ