ಸಾಗರ: ಅಪಘಾತದಲ್ಲಿ ಗಾಯಗೊಂಡಿದ್ದ ಅರಣ್ಯಾಧಿಕಾರಿ ಸಾವು
Team Udayavani, Jan 23, 2022, 3:20 PM IST
ಸಾಗರ: ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳ್ಳ ಗ್ರಾಮದ ಬಳಿ ಶನಿವಾರ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಉಪ ವಲಯ ಅರಣ್ಯಾಧಿಕಾರಿ ಲೋಕನಾಥ್ (52) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲೋಕನಾಥ್ ಅವರು ಕರ್ತವ್ಯ ನಿಮಿತ್ತ ತ್ಯಾಗರ್ತಿಯಲ್ಲಿರುವ ತಮ್ಮ ಕಚೇರಿಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟಾಟಾ ಇಂಡಿಕಾ ಕಾರು ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಾಗರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಲೋಕನಾಥ್ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಲೋಕನಾಥ್ ಸಂಬಂಧಿ ಮಂಜುನಾಥ್ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.