ಸರಕಾರ ಜಾನಪದ ಕಲಾವಿದರ ಪೋಷಿಸಲಿ

Team Udayavani, Jun 5, 2020, 1:01 PM IST

5-June-13

ಸಾಗರ: ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್‌ ವತಿಯಿಂದ ಆಯ್ದ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ ವಿತರಿಸಲಾಯಿತು.

ಸಾಗರ: ಜಾನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಗಳಾಗಿದ್ದು, ಅವರನ್ನು ಪೋಷಣೆ ಮಾಡುವತ್ತ ಸರ್ಕಾರ ಹಾಗೂ ಸಮಾಜ ಗಮನ ಹರಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್‌ ವತಿಯಿಂದ ಆಯ್ದ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ ಮತ್ತು ಆರ್ಥಿಕ ಸಹಾಯಧನ ವಿತರಣೆ ಮಾಡಿ ಮಾತನಾಡಿದ ಅವರು, ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ. ಕಲೆ ಉಳಿಯಬೇಕಾದರೆ ನಾವು ಜಾನಪದ ಕಲಾವಿದರನ್ನು ಉಳಿಸಿಕೊಳ್ಳುವ ತುರ್ತು ಅವಶ್ಯವಿದೆ. ಆಗ ಮಾತ್ರ ನಮ್ಮ ಮುಂದಿನ ಪೀಳಿಗೆಗೆ ಜಾನಪದ ಕಲೆಯನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈಗಾಗಲೇ ಜಾನಪದ ಪರಿಷತ್‌ ವತಿಯಿಂದ ರಾಜ್ಯಾಧ್ಯಕ್ಷರಾದ ಟಿ.ತಿಮ್ಮೇಗೌಡ ನೇತೃತ್ವದಲ್ಲಿ ಜಾನಪದ ಕಲಾವಿದರಿಗೆ ಆರ್ಥಿಕ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು 2 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದ 3 ಸಾವಿರ ಕಲಾವಿದರು ಆರ್ಥಿಕ ಸಹಕಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲಿ ಹಣ ಅವರ ಖಾತೆಗೆ ಜಮೆ ಆಗುವ ನಿರೀಕ್ಷೆ ಹೊಂದಲಾಗಿದೆ. ಜೊತೆಗೆ ಆದಿಚುಂಚನಗಿರಿ ಮಠಕ್ಕೆ ಮಾಡಿಕೊಂಡ ಮನವಿ ಮೇರೆಗೆ 3 ಲಕ್ಷ ರೂ. ಹಣ ನೀಡಿದ್ದು, ಅದನ್ನು ಸಹ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ವಿತರಣೆ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 300 ಕಲಾವಿದರು ಅರ್ಜಿ ಸಲ್ಲಿಸಿದ್ದು, ಹಂತಹಂತವಾಗಿ ಅವರಿಗೆ ಆರ್ಥಿಕ ಸಹಾಯ, ದಾನಿಗಳಿಂದ ದಿನಸಿ ಕಿಟ್‌ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಾನಪದ ಗಾಯಕ ವೈ.ಎನ್‌. ಹುಬ್ಬಳ್ಳಿ, ಯಕ್ಷಗಾನ ಕಲಾವಿದರಾದ ನಾರಾಯಣಪ್ಪ ತುಮರಿ, ಮಣಿಕಂಠ ಆವಿನಹಳ್ಳಿ, ಡೊಳ್ಳು ಕಲಾವಿದರಾದ ಓಂಕಾರಮ್ಮ, ಸುಧಾ, ಜಾನಪದ ಕಲಾವಿದ ರುದ್ರೇಶ್‌ ಅವರಿಗೆ 2 ಸಾವಿರ ರೂ. ಬೆಲೆಬಾಳುವ ದಿನಸಿ ಕಿಟ್‌ ಮತ್ತು 1 ಸಾವಿರ ರೂ. ಸಹಾಯಧನ ನೀಡಲಾಯಿತು. ಶಿಕ್ಷಕ ಚಂದ್ರಪ್ಪ ತುಮರಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಉಮೇಶ್‌ ಹಿರೇನೆಲ್ಲೂರು, ಪ್ರಮುಖರಾದ ನಾರಾಯಣಪ್ಪ ಕುಗ್ವೆ, ಕಸ್ತೂರಿ, ಚೂಡಾಮಣಿ ರಾಮಚಂದ್ರ, ವಸಂತ ಕುಗ್ವೆ, ಡಾ| ರಾಮಪ್ಪ, ಎಸ್‌.ಎಲ್‌.ಎನ್‌. ಸ್ವಾಮಿ, ಭಾಗೀರಥಿ ಹೆಗ್ಗೋಡು ಇನ್ನಿತರರು ಇದ್ದರು. ವಿ.ಟಿ. ಸ್ವಾಮಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಎಸ್‌. ಬಸವರಾಜ್‌ ವಂದಿಸಿದರು. ಪರಮೇಶ್ವರ ಕರೂರ್‌ ನಿರೂಪಿಸಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.