Congressನಿಂದ ಸ್ಥಳೀಯ ಸಂಸ್ಥೆಗಳ ಅಧಿಕಾರದ ಕತ್ತು ಹಿಸುಕುವ ಕೆಲಸ; ಮಾಜಿ ಜಿಲ್ಲಾಧ್ಯಕ್ಷ ಆರೋಪ

Team Udayavani, Jan 18, 2024, 2:50 PM IST

12-sagara

ಸಾಗರ: 2021ಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಅಧಿಕಾರ ಮುಗಿದಿದೆ. ಈ ತನಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದೆ ಸ್ಥಳೀಯ ಸಂಸ್ಥೆಗಳ ಅಧಿಕಾರದ ಕತ್ತು ಹಿಸುಕುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರದ್ದು ಸಂವಿಧಾನ ವಿರೋಧಿ ಧೋರಣೆ ಎನ್ನುವುದು ಸಾಬೀತಾಗಿದೆ. ಸುಪ್ರೀಂ ಕೋರ್ಟ್ ಸಹ ನಿಗದಿತ ಸಮಯಕ್ಕೆ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದೆ. ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ ಆದೇಶವನ್ನು ಸಹ ಗಾಳಿಗೆ ತೂರಿದೆ ಎಂದರು.

ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವ ಮಾದರಿಯಲ್ಲೇ ಜಿಲ್ಲಾ, ತಾಲೂಕು ಪಂಚಾಯ್ತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಐದು ವರ್ಷ ಅವಧಿ ಮುಗಿದ ತಕ್ಷಣ ಚುನಾವಣೆ ನಡೆಯಬೇಕು ಎಂದು ಸಂವಿಧಾನದ 73 ಮತ್ತು 74ನೇ ಕಲಂಗೆ ತಿದ್ದುಪಡಿ ತಂದಿದ್ದಾರೆ ಎಂದು ಹೇಳಿದರು.

ಜನಪ್ರತಿನಿಧಿಗಳ ಚುನಾಯಿತ ಆಡಳಿತ ಐದು ವರ್ಷ ಇರಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಬಿಜೆಪಿಯವರಿಗೆ ಇದು ಗಂಭೀರ ವಿಷಯವಲ್ಲದೇ ಹೋದರೂ ಕಾಂಗ್ರೆಸ್ ಪಕ್ಷ ತಮ್ಮದೇ ಪ್ರಧಾನಿ ರಾಜೀವ್ ಗಾಂಧಿಯವರು ಜಾರಿಗೆ ತಂದಿರುವ ಕಾನೂನನ್ನು ಮೂಲೆಗುಂಪು ಮಾಡಿದೆ. ಒಂದರ್ಥದಲ್ಲಿ ಕಾಂಗ್ರೇಸ್ ಹೆತ್ತ ಕೂಸು ಅದೇ ಪಕ್ಷ ಕೆರೆಗೆ ಎಸೆದಂತೆ ಆಗಿದೆ ಎಂದು ವ್ಯಂಗ್ಯವಾಡಿದರು.

ಹತ್ತಕ್ಕೂ ಹೆಚ್ಚು ಬಾರಿ ಚುನಾವಣಾ ಆಯೋಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಜೊತೆಗೆ ಮೀಸಲಾತಿ ಘೋಷಣೆ ಅಧಿಕಾರ ಆಯೋಗಕ್ಕೆ ನೀಡುವಂತೆ ಮನವಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಎಲ್ಲಿ ತಮ್ಮ ಶಾಸಕರ ಅಧಿಕಾರ ಮೊಟಕಾಗುತ್ತದೆಯೋ ಎಂದು ಚುನಾವಣೆ ನಡೆಸಲು ಆಸಕ್ತಿ ತೋರಿಸದೆ ಇರುವುದು ನಾಚಿಕೆಗೇಡಿನ ಸಂಗತಿ ಎಂದರು.

ಇದರ ಜೊತೆಗೆ ರಾಜ್ಯದಲ್ಲಿ 400ಕ್ಕೂ ಹೆಚ್ಚು ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಅಧಿಕಾರ ಅವಧಿ ಮುಗಿದು ೯ ತಿಂಗಳು ಕಳೆದಿದೆ. ಕೊನೆಯ ಒಂದು ತಿಂಗಳಿನಲ್ಲಿ  ಬಿಜೆಪಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡಿರಲಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಬಂದು 7-8 ತಿಂಗಳು ಕಳೆದರೂ ಮೀಸಲಾತಿ ಘೋಷಣೆ ಮಾಡಿಲ್ಲ. ಎರಡೂ ಪಕ್ಷಗಳು ಸ್ಥಳೀಯ ಸಂಸ್ಥೆಗಳ ಅಧಿಕಾರದ ಕುತ್ತಿಗೆ ಹಿಸುಕುವ ಕೆಲಸ ಮಾಡುತ್ತಿದ್ದು, ಇದನ್ನು ಖಂಡಿಸಿ ಮುಂದಿನ ತಿಂಗಳು ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಹಾಳು ಮಾಡುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.