ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿ: ಶಿಕ್ಷಕ ಸ್ಥಳದಲ್ಲೇ ಸಾವು
Team Udayavani, Dec 25, 2019, 11:32 AM IST
ಶಿವಮೊಗ್ಗ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿ, ಚಾಲಕ,ನಿರ್ವಾಹಕ ಗಂಭಿರ ಗಾಯಗೊಂಡ ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳದಲ್ಲಿ ನಡೆದಿದೆ.
ಹರಿಕೃಷ್ಣ(45) ಮೃತ ಶಿಕ್ಷಕ. ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು ವಾಪಾಸ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ಮಾರಶೆಟ್ಟಹಳ್ಳಿ ಗ್ರಾಮದ ಮಂಜುನಾಥ ಪ್ರೌಢ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದರು. ಮಾರಶೆಟ್ಟಿಹಳ್ಳಿಯಲ್ಲಿ ಹಾಗೂ ಅರಬಿಳಚಿ ಗ್ರಾಮದಲ್ಲಿ ಕೆಲ ವಿದ್ಯಾರ್ಥಿಗಳನ್ನು ಇಳಿಸಿ , ನಂತರ ಬಸ್ಸು ವಾಪಾಸ್ ತೆರಳುತ್ತಿತ್ತು. ಈ ವೇಳೆ ಕಲ್ಲಿಹಾಳ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ