ಕೋವಿಡ್ ತಡೆಗೆ ಆಯುರ್ವೇದ ಔಷಧ ಪೂರಕ
ಜಿಲ್ಲಾ ಆಯುಷ್ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ| ದೊಡ್ಡಮನಿ ಅಭಿಮತ
Team Udayavani, Jun 25, 2020, 4:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಕೋವಿಡ್ ಸೋಂಕಿನ ಲಕ್ಷಣಗಳನ್ನು ಸಮರ್ಥವಾಗಿ ನಿಭಾಯಿಸಲು ಆಯುರ್ವೇದ ಔಷಧಗಳು, ಯುನಾನಿ ಕಷಾಯಗಳು ಮತ್ತು ಮನೆಮದ್ದುಗಳು ಪೂರಕವಾಗಿವೆ ಎಂದು ಜಿಲ್ಲಾ ಆಯುಷ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ದೊಡ್ಡಮನಿ ಹೇಳಿದರು.
ಮಹಾನಗರಪಾಲಿಕೆ ಹಾಗೂ ಆಯುಷ್ ಇಲಾಖೆಯ ಸಹಯೋಗದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಶ್ರಮಿಸುತ್ತಿರುವ ಪಾಲಿಕೆ ಅಧಿಕಾರಿ-ಸಿಬ್ಬಂದಿ ಹಾಗೂ ಪೌರಸೇವಾ ಕಾರ್ಮಿಕರಿಗಾಗಿ ಆಯುಷ್ ಇಲಾಖೆ ವತಿಯಿಂದ ನೀಡಲಾದ ಔಷಧಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಕೋವಿಡ್ ವೈರಸ್ ನಮ್ಮ ದುರ್ಬಲವಾದ ರೋಗ ನಿರೋಧಕ ಶಕ್ತಿಯಿಂದ ದೇಹದಲ್ಲಿ ಬೆಳೆಯುತ್ತದೆ. ನಮ್ಮ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ಮತ್ತು ಮನೆ ಮದ್ದು ಪಾಲಿಸುವುದು ಕ್ಷೇಮ ಎಂದರು.
ಅಮೃತಬಳ್ಳಿ ಸೇರಿದಂತೆ ವಿವಿಧ ಗಿಡಮೂಲಿಕೆ ಮತ್ತು ಆಹಾರ ಪದಾರ್ಥಗಳ ಸಂಯೋಗದೊಂದಿಗೆ ಉತ್ಪತ್ತಿಯಾದ ಔಷಧ ಗಳನ್ನು ಸೇವಿಸುವ ಮೂಲಕ ದೇಹಕ್ಕೆ ಆರೋಗ್ಯ ಕವಚ ಸೃಷ್ಟಿಸಿಕೊಳ್ಳಬಹುದಾಗಿದೆ. ಆಯುರ್ವೇದದ ಔಷಧಗಳನ್ನು ಬಳಸಿದ ಸೋಂಕಿತರು ಗುಣಮುಖರಾಗಿರುವುದು ವೈಜ್ಞಾನಿಕವಾಗಿ ದೃಢೀಕರಿಸಲಾಗಿದೆ ಎಂದರು.
ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಮಾತನಾಡಿ, ಅನಾದಿಕಾಲದಿಂದಲೂ ಮಾನವ ತನ್ನ ದೇಹವನ್ನು ರೋಗ-ರುಜಿನಗಳಿಂದ ರಕ್ಷಿಸಿಕೊಳ್ಳಲು ಆಯುರ್ವೇದ ಔಷಧಗಳನ್ನು ಮೊರೆ ಹೋಗುತ್ತಿದ್ದುದು ಸರ್ವವಿಧಿ ತ ಎಂದರು. ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಮಹಾ ನಗರಪಾಲಿಕೆ ಮೇಯರ್ ಸುವರ್ಣ ಶಂಕರ್ ಅವರು ಸಾಂಕೇತಿಕವಾಗಿ ಪಾಲಿಕೆ ಸಿಬ್ಬಂಧಿಗಳಿಗೆ ಔಷಧಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ಸುರೇಖಾ ಮುರಳೀಧರ್, ಜ್ಞಾನೇಶ್ವರ್, ಗನ್ನಿಶಂಕರ್ ಸೇರಿದಂತೆ ಪಾಲಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ
Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ