ಶಿವಮೊಗ್ಗ: ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟಕ್ಕೆ ಪಾಲಿಕೆ ಗದ್ದುಗೆ
Team Udayavani, Mar 4, 2018, 6:30 AM IST
ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ ಅಂತಿಮ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಗದ್ದುಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಪಾಲಾಗಿದೆ.
ಮೇಯರ್ ಆಗಿ ಜೆಡಿಎಸ್ ಸದಸ್ಯ ನಾಗರಾಜ್ ಕಂಕಾರಿ ಹಾಗೂ ಉಪಮೇಯರ್ ಆಗಿ ಕಾಂಗ್ರೆಸ್ ಸದಸ್ಯೆ ವಿಜಯಲಕ್ಷ್ಮಿ ಪಾಟೀಲ್ ಆಯ್ಕೆಯಾಗಿದ್ದಾರೆ. ಮತ್ತೂಂದೆಡೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಎಸ್. ರಾಜಶೇಖರ್ಗೆ ಆ ಪಕ್ಷದ ಯಾವೊಬ್ಬ ಸದಸ್ಯರು ಬೆಂಬಲ ವ್ಯಕ್ತಪಡಿಸಲಿಲ್ಲ.
ಶನಿವಾರ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಸಿಎಂ (ಎ) ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಸದಸ್ಯ ನಾಗರಾಜ್ ಕಂಕಾರಿ 25 ಮತ ಪಡೆದು ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ನ ವಿಜಯಲಕ್ಷಿ¾à ಪಾಟೀಲ್ 26 ಮತ ಪಡೆದು ಆಯ್ಕೆಯಾದರು. ಮೈತ್ರಿ ಕೂಟಕ್ಕೆ ಎಸ್ಡಿಪಿಐನ ಓರ್ವ ಹಾಗೂ ನಾಲ್ವರು ಪಕ್ಷೇತರ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಕಳೆದ ಬಾರಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡು ಆಡಳಿತ ಚುಕ್ಕಾಣಿಯಲ್ಲಿ ಭಾಗಿಯಾಗಿದ್ದ ಬಿಜೆಪಿ, ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ವಿರೋಧ ಪಕ್ಷದ ಸಾಲಿನಲ್ಲಿ ಕೂರುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ