ಶಿವಮೊಗ್ಗ-ತಿರುಪತಿ ಬಸ್‌ ಸದ್ದಿಲ್ಲದೆ ಸ್ಥಗಿತ

ಪ್ಯಾಕೇಜ್‌ ಟೂರ್‌ ಸೌಲಭ್ಯ ಬಳಸಿಕೊಳ್ಳಲು ಪ್ರಯಾಣಿಕರ ನಿರಾಸಕ್ತಿ ಸಂಸದರ ಪ್ರಯತ್ನ ವ್ಯರ್ಥ

Team Udayavani, Jan 16, 2020, 1:02 PM IST

16-January-11

ಶಿವಮೊಗ್ಗ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದೇ ತಮ್ಮ ಜೀವನದ ಬಹುದೊಡ್ಡ ಆಸೆ ಎಂದು ಬಹಳಷ್ಟು ಜನ ಅಂದುಕೊಂಡಿದ್ದಾರೆ. ಹಿಂದೆ ಸೂಕ್ತ ಸಾರಿಗೆ ಸೌಕರ್ಯ ಇರಲಿಲ್ಲ. ಪ್ರಸ್ತುತ ಬಸ್‌, ರೈಲು ಸೌಕರ್ಯ ಇದ್ದರೂ ಅದನ್ನು ಬಳಸಿಕೊಳ್ಳುವವರೂ ಇಲ್ಲ. ಹೀಗಾಗಿ ಶಿವಮೊಗ್ಗದಿಂದ ತಿರುಪತಿಗೆ ಆರಂಭಸಿದ್ದ ಕೆಎಸ್‌ಆರ್‌ಟಿಸಿ ಪ್ಯಾಕೇಟ್‌ ಟೂರ್‌ ಸೌಲಭ್ಯವು ಸದ್ದಿಲ್ಲದೇ ಸ್ಥಗಿತಗೊಂಡಿದೆ.

ಶಿವಮೊಗ್ಗದಿಂದ ಪ್ರತಿದಿನ ಸಾವಿರಾರು ಮಂದಿ ತಿರುಪತಿ ವೆಂಕಟೇಶ್ವರ ದರ್ಶನಕ್ಕೆ ಹೋಗುತ್ತಾರೆ. ಅದರಲ್ಲಿ ಬಹುತೇಕರು ರೈಲಿನ ಮೂಲಕ ಹೋಗುತ್ತಾರೆ. ಶೂನ್ಯ ಮಾಸ ಹೊರತುಪಡಿಸಿ ವಿಶೇಷ ದಿನಗಳಲ್ಲಿ ಜನಸಂದಣಿ ಹೆಚ್ಚಾಗಿರುತ್ತದೆ.

ಅತಿ ಕಡಿಮೆ ದರಕ್ಕೆ ವಿಶೇಷ ಸೌಲಭ್ಯ ಕಲ್ಪಿಸಿಕೊಟ್ಟರೂ ಜನರು ಬಳಸಿಕೊಳ್ಳುತ್ತಿಲ್ಲ. 2 ವರ್ಷದ ಹಿಂದೆ ಕ್ಲಬ್‌ ಕ್ಲಾಸ್‌ ಬಸ್‌ನಲ್ಲಿ ಶಿವಮೊಗ್ಗ – ತಿರುಪತಿ – ಕಾಳಹಸ್ತಿ – ಪದ್ಮಾವತಿ ದೇವಿ ದೇವಸ್ಥಾನ – ಮೂರು ಹೊತ್ತು ಊಟ – ಹೊಟೇಲ್‌ – ವಿಶೇಷ ದರ್ಶನ ವ್ಯವಸ್ಥೆ ಇರುವ ಪ್ಯಾಕೇಜ್‌ ಟೂರನ್ನು ಲಾಂಚ್‌ ಮಾಡಲಾಗಿತ್ತು. ಜನರ ಪ್ರತಿಕ್ರಿಯೆ ಉತ್ತಮವಾಗಿರದ ಕಾರಣ ಸ್ಥಗಿತಗೊಳಿಸಲಾಗಿದೆ.

3900 ರೂ.ಗೆ ಮಕ್ಕಳಿಗೆ 3700 ರೂ. ದರ ಇತ್ತು. ದರದ ಕಾರಣಕ್ಕೆ ಯೋಜನೆ ಸ್ಥಗಿತಗೊಂಡಿದೆ ಎನ್ನುತ್ತಾರೆ ಸಾರ್ವಜನಿಕರು. ಬೆಂಗಳೂರಿನಿಂದಲೂ ತಿರುಪತಿ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಇದ್ದು 2100 ರೂ.ಗೆ ಲಭ್ಯವಿದೆ. ಶಿವಮೊಗ್ಗದಿಂದ ತಿರುಮಲ ಹೋಗುವವರು ಬೆಂಗಳೂರಿನವರೆಗೂ ರೈಲು. ಅಲ್ಲಿಂದ ಬಸ್‌ನಲ್ಲಿ ಹೋಗುವವರೂ ಇದ್ದಾರೆ. ಹಲವು ಕಾರಣಗಳಿಂದಲೂ ಯೋಜನೆ ಯಶಸ್ವಿಯಾಗಿಲ್ಲ. ಪ್ಯಾಕೇಜ್‌ ಟೂರ್‌ ಹೊರತಾಗಿಯೂ ಪ್ರತಿ ದಿನ ಬೆಳಗ್ಗೆ ವೋಲ್ವೋ ಹಾಗೂ ಕೆಂಪು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತವೆ. ವೋಲ್ವೋಗೆ 1097 ರೂ. ಇದ್ದರೆ, ಕೆಂಪು ಬಸ್‌ಗೆ 515 ರೂ. ಇದೆ. ಈ ಬಸ್‌ ಗಳು ಕೂಡ ಪೂರ್ಣ ಭರ್ತಿಯಾಗುತ್ತಿಲ್ಲ ಎನ್ನುತ್ತಾರೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು.

ರೈಲಿಗೂ ಕಂಟಕ: ಶಿವಮೊಗ್ಗದಿಂದ ತಿರುಪತಿ (ರೇಣಿಗುಂಟ)ವರೆಗೂ ರೈಲು ವ್ಯವಸ್ಥೆಯನ್ನೂ ಆರಂಭಿಸಲಾಗಿದ್ದು ಅದಕ್ಕೂ ಕೂಡ ಉತ್ತಮ ಸ್ಪಂದನೆ ಸಿಕ್ಕಿಲ್ಲ. ಶಿವಮೊಗ್ಗದಿಂದ ತಿರುಪತಿಗೆ ಶೇ.47ರಷ್ಟು ಸೀಟುಗಳು ಭರ್ತಿಯಾಗುತ್ತಿದ್ದರೆ, ಅಲ್ಲಿಂದ ವಾಪಸ್‌ ಬರುವಾಗ ಶೇ.15ರಷ್ಟು ಜನ ಮಾತ್ರ ಭರ್ತಿಯಾಗುತ್ತಿದೆ. ಇದರಲ್ಲಿ ಶಿವಮೊಗ್ಗದಿಂದ ಬುಕ್‌ ಮಾಡುವವರ ಪ್ರಮಾಣ ತೀರಾ ಕಡಿಮೆ ಇದೆ. ಇದು ತತ್ಕಾಲ್‌ ರೈಲಾಗಿರುವುದರಿಂದ ಇದೇ ರೀತಿ ಮುಂದುವರಿದರೆ ರೈಲು ರದ್ದಾಗುವ ಸಾಧ್ಯತೆ ಇದೆ. ಈಚೆಗೆ ಸಂಸದ ಬಿ.ವೈ.ರಾಘವೇಂದ್ರ ಕೂಡ ಜನರು ರೈಲು ಸದ್ಬಳಕೆ ಮಾಡಿಕೊಳ್ಳಲು ಮನವಿ ಮಾಡಿದ್ದರು.ಸುತ್ತಮುತ್ತಲ ಜಿಲ್ಲೆಗಳ ಜನರಲ್ಲಿ ಮಾಹಿತಿ ತಿಳಿಸಲು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕರಪತ್ರ ಹಂಚಲು ಸೂಚಿಸಿದ್ದರು. ರೈಲು ಹಾಗೂ ಬಸ್‌ಗಳನ್ನು ಉಳಿಸಿಕೊಳ್ಳಲು ಜನರ ಸಹಕಾರ ಅಗತ್ಯವಿದೆ.

ತಿರುಪತಿಗೆ ಹೊಸದಾಗಿ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳೀಯರು ಹಾಗೂ ಅಕ್ಕಪಕ್ಕದ ಜಿಲ್ಲೆಯವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ಯಾಕೇಜ್‌ ಟೂರ್‌ ವ್ಯವಸ್ಥೆಯನ್ನೂ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೆ ಆರಂಭಿಸಬೇಕಿದೆ. ಇದಕ್ಕೂ ಕೂಡ ಜನರ ಸಹಕಾರ ಬೇಕು.
ಪ್ರವೀಣ್‌, ಸ್ಥಳೀಯರು

„ಶರತ್‌ ಭದ್ರಾವತಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.