Udayavni Special

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆಗೆ ಸೂಚನೆ

ಪ್ರತಿ ತಾಲೂಕಿನಲ್ಲಿ ಬಸ್‌ ಮಾರ್ಗ ಅಂತಿಮಗೊಳಿಸಿ: ಡಿಸಿ ಶಿವಕುಮಾರ್‌

Team Udayavani, Jun 7, 2020, 1:35 PM IST

07-June-13

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಹೇಳಿದರು. ಶನಿವಾರ ಎಸಿ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಬಸ್‌, ಹಾಸ್ಟೆಲ್‌ ಸೌಲಭ್ಯ: ಬಸ್‌ ವ್ಯವಸ್ಥೆ ಹಾಗೂ ಪರೀಕ್ಷೆ ಸಂದರ್ಭದಲ್ಲಿ ಹಾಸ್ಟೆಲ್‌ ವ್ಯವಸ್ಥೆ ಬಯಸಿರುವ ವಿದ್ಯಾರ್ಥಿಗಳ ವಿವರಗಳನ್ನು ಈಗಾಗಲೇ ಪಡೆಯಲಾಗಿದೆ. ಪ್ರತಿ ತಾಲೂಕಿನಲ್ಲಿ ಬಸ್‌ ರೂಟ್‌ ಅಂತಿಮಗೊಳಿಸಬೇಕು. ಪ್ರತಿ ಬಸ್‌ನಲ್ಲಿ ನೋಡೆಲ್‌ ಅಧಿಕಾರಿ ಹಾಜರಿರಬೇಕು. ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗಿರುವ ಈ ಬಸ್‌ಗಳನ್ನು ಹೊರತುಪಡಿಸಿ ಪ್ರತಿ ಕ್ಷೇತ್ರ ಶಿಕ್ಷಣಾಧಿಕಾರಿ ಅಧೀನದಲ್ಲಿ ಕನಿಷ್ಟ 5 ವಾಹನಗಳು ಚಾಲಕರೊಂದಿಗೆ ಸನ್ನದ್ಧವಾಗಿರಬೇಕು. ಬಸ್‌ ತಪ್ಪಿ ಹೋದರೆ ಅಥವಾ ಇನ್ನಿತರ ತುರ್ತು ಸಂದರ್ಭಗಳಲ್ಲಿ ವಿದ್ಯಾರ್ಥಿಗಳನ್ನು ಮನೆಯಿಂದ ಕರೆತರಲು ಈ ವಾಹನ ಬಳಸಬಹುದಾಗಿದೆ. ಇದನ್ನು ಹೊರತುಪಡಿಸಿ ಪಿಡಿಒಗಳು ಸಹ ತಮ್ಮ ಹಂತದಲ್ಲಿ ವಾಹನಗಳನ್ನು ಸಜ್ಜುಗೊಳಿಸಿರಬೇಕು. ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ವಿದ್ಯಾರ್ಥಿಯೂ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂದು ಹೇಳಿದರು. ಯಾವುದೇ ವಿದ್ಯಾರ್ಥಿ ಪರೀಕ್ಷೆ ದಿನಗಳಲ್ಲಿ ಹಾಸ್ಟೆಲ್‌ನಲ್ಲಿ ಇರಬಯಸಿದರೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳೊಂದಿಗೆ ಪಾಲಕರಿಗೂ ಹಾಸ್ಟೆಲ್‌ನಲ್ಲಿ ಉಚಿತ ಅವಕಾಶ ಕಲ್ಪಿಸಲಾಗುವುದು ಎಂದರು.

ಮಾರ್ಗಸೂಚಿ ಪಾಲನೆ: ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಇಲಾಖೆ ಹೊರಡಿಸಿರುವ ಕೋವಿಡ್‌-19 ಮಾರ್ಗಸೂಚಿಯನ್ನು ಪಾಲಿಸಬೇಕು. ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ಇರುವುದು. ಪ್ರತಿಯೊಬ್ಬರ ಥರ್ಮಲ್‌ ಸ್ಕ್ಯಾನ್ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಯ ದೇಹದ ತಾಪಮಾನ ಹೆಚ್ಚಿರುವುದು ಕಂಡು ಬಂದರೆ, ಅದನ್ನು ಬಹಿರಂಗಪಡಿಸದೇ, ಗೊಂದಲಕ್ಕೆ ಅವಕಾಶ ನೀಡದೆ, ಅಂತಹ ವಿದ್ಯಾರ್ಥಿಗಳಿಗೆ ಮೀಸಲಾಗಿರಿಸಿರುವ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದರು.

ತಿಂಡಿ ವ್ಯವಸ್ಥೆ: ವಿದ್ಯಾರ್ಥಿಗಳು ಮನೆಯಿಂದಲೇ ಬೆಳಗ್ಗಿನ ತಿಂಡಿ ತಿಂದು ಬರಬೇಕು. ನೀರನ್ನು ಸಹ ಮನೆಯಿಂದಲೇ ತರಬೇಕು. ಒಂದು ವೇಳೆ ನೀರು ತರಲು ಮರೆತು ಬಂದಿರುವ ವಿದ್ಯಾರ್ಥಿಗಳಿಗೆ ಸೀಲ್ಡ್‌ ವಾಟರ್‌ ಬಾಟಲ್‌ ನೀಡಬೇಕು. ಅಗತ್ಯ ಇರುವ ವಿದ್ಯಾರ್ಥಿಗಳಿಗೆ ಬಿಸ್ಕಿಟ್‌ ಪ್ಯಾಕೇಟ್‌, ಚಾಕಲೇಟ್‌ ನೀಡಲು ವ್ಯವಸ್ಥೆ ಮಾಡಬೇಕು ಎಂದರು.

ಮೀಸಲು ಪರೀಕ್ಷಾ ಕೇಂದ್ರ: ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೊಠಡಿಗಳನ್ನು ಮೀಸಲಾಗಿರಿಸಬೇಕು. ಪ್ರತಿ ತಾಲೂಕಿನಲ್ಲಿ ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಮೀಸಲು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಿ ಸಜ್ಜುಗೊಳಿಸಬೇಕು ಎಂದರು.ವಿದ್ಯಾರ್ಥಿಗಳ ವಿವರ: ಜೂ. 25ರಿಂದ ಜು. 3ರವರೆಗೆ ನಡೆಯಲಿರುವ ಪರೀಕ್ಷೆಯನ್ನು ಜಿಲ್ಲೆಯಲ್ಲಿ 24243 ವಿದ್ಯಾರ್ಥಿಗಳು ಬರೆಯಲಿದ್ದು, ಇವರಲ್ಲಿ 12287 ಬಾಲಕರು ಹಾಗೂ 11956 ಬಾಲಕಿಯರು ಇದ್ದಾರೆ. ಒಟ್ಟು 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 45 ಸರ್ಕಾರಿ, 24 ಅನುದಾನಿತ, 15ಅನುದಾನ ರಹಿತ ಹಾಗೂ 2 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಭದ್ರಾವತಿ 15, ಹೊಸನಗರ 5, ಸಾಗರ 10, ಶಿಕಾರಿಪುರ 11, ಶಿವಮೊಗ್ಗ 26, ಸೊರಬ 10 ಮತ್ತು ತೀರ್ಥಹಳ್ಳಿಯಲ್ಲಿ 7 ಪರೀಕ್ಷಾ ಕೇಂದ್ರಗಳಿವೆ ಎಂದು ಎನ್‌.ಎಂ. ರಮೇಶ ಅವರು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಎಂ.ಎಲ್‌. ವೈಶಾಲಿ, ಪೊಲೀಸ್‌ ವರಿಷ್ಠಾದಿಕಾರಿ ಕೆ.ಎಂ. ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಇದ್ದರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉದ್ಯಮಗಳಿಗೆ ಉತ್ತೇಜನದ ಜತೆಗೆ ಬೇಕು ಹೊಸ ಹೂಡಿಕೆಗಳ ಹರಿವು

ಉದ್ಯಮಗಳಿಗೆ ಉತ್ತೇಜನದ ಜತೆಗೆ ಬೇಕು ಹೊಸ ಹೂಡಿಕೆಗಳ ಹರಿವು

ಚೀನಕ್ಕೆ ಲಡಾಖಿಗಳ ಸವಾಲ್‌;ಇದುವೇ ಸೇನೆಯ ‘ಕಣ್ಣುಕಿವಿ’ ಹಿಮಬೆಟ್ಟಗಳಲ್ಲಿ ಹೋರಾಡುವ ಸ್ಕೌಟ್ಸ್‌

ಚೀನಕ್ಕೆ ಲಡಾಖಿಗಳ ಸವಾಲ್‌;ಇದುವೇ ಸೇನೆಯ ‘ಕಣ್ಣುಕಿವಿ’ ಹಿಮಬೆಟ್ಟಗಳಲ್ಲಿ ಹೋರಾಡುವ ಸ್ಕೌಟ್ಸ್‌

ಕರಾವಳಿಯ ನೀರುದೋಸೆ ಮೆಚ್ಚಿದ ಕೊಹ್ಲಿ !

ಕರಾವಳಿಯ ನೀರುದೋಸೆ ಮೆಚ್ಚಿದ ಕೊಹ್ಲಿ !

Kerala-Gold-Smuggling-Case

ಚಿನ್ನದ ಕಳಂಕ CBI ತನಿಖೆ? ಕಸ್ಟಮ್ಸ್‌ ಕಚೇರಿಯಿಂದ ಮಾಹಿತಿ ಸಂಗ್ರಹ ; NIAಯಿಂದಲೂ ಅನ್ವೇಷಣೆ

ಬಲವಂತದಿಂದ ಜಾಧವ್‌ ಬಳಿ ಹೇಳಿಕೆ ಕೊಡಿಸಿದ ಪಾಕ್‌

ಬಲವಂತದಿಂದ ಜಾಧವ್‌ ಬಳಿ ಹೇಳಿಕೆ ಕೊಡಿಸಿದ ಪಾಕ್‌

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅಮೆರಿಕ

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅಮೆರಿಕ

ದೇಶದ ಮುಂದಿರುವ ಆರ್ಥಿಕ ಸವಾಲು

ದೇಶದ ಮುಂದಿರುವ ಆರ್ಥಿಕ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗ ಕೋವಿಡ್ ಸೋಂಕಿಗೆ ವೃದ್ಧ ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಶಿವಮೊಗ್ಗ ಕೋವಿಡ್ ಸೋಂಕಿಗೆ ವೃದ್ಧ ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

8-July-27

ಪೆಟ್ರೋಲ್‌- ಡೀಸೆಲ್‌ ಬೆಲೆ ಏರಿಕೆಗೆ ವಿರೋಧ

ಶಿವಮೊಗ್ಗ: ಮೊಮ್ಮಗನಿಂದಲೇ ಅಜ್ಜಿಯ ಕೊಲೆ

ಶಿವಮೊಗ್ಗ: ಮೊಮ್ಮಗನಿಂದಲೇ ಅಜ್ಜಿಯ ಕೊಲೆ

8-July-28

ಮಾಸ್ಕ್ ಧರಿಸದವರಿಗೆ ದಂಡ

8-July-11

ಸಾಗರ; ಆರು ಕಡೆ ಸೀಲ್‌ಡೌನ್‌

MUST WATCH

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home

udayavani youtube

Uday Innaje : Success story of Sugarcane Farmer | Udayavani


ಹೊಸ ಸೇರ್ಪಡೆ

ಉದ್ಯಮಗಳಿಗೆ ಉತ್ತೇಜನದ ಜತೆಗೆ ಬೇಕು ಹೊಸ ಹೂಡಿಕೆಗಳ ಹರಿವು

ಉದ್ಯಮಗಳಿಗೆ ಉತ್ತೇಜನದ ಜತೆಗೆ ಬೇಕು ಹೊಸ ಹೂಡಿಕೆಗಳ ಹರಿವು

ajya-gobbara

ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ

nanna-bali

ನನ್ನ ಬಳಿ ಯಾವುದೇ ಪೆನ್‌ಡ್ರೈವ್‌ ಇಲ್ಲ: ನಿರಾಣಿ

eshme-patra

ರೇಷ್ಮೆ ಬೆಳಗಾರರಿಗೆ ಪ್ರೋತ್ಸಾಹ ಧನ ನೀಡಲು ಸಿಎಂಗೆ ಪತ್ರ

ಓಟದ ದೊರೆಯ ಮಗಳ ಹೆಸರು ಒಲಿಂಪಿಯಾ ಲೈಟ್ನಿಂಗ್‌ ಬೋಲ್ಟ್!

ಓಟದ ದೊರೆಯ ಮಗಳ ಹೆಸರು ಒಲಿಂಪಿಯಾ ಲೈಟ್ನಿಂಗ್‌ ಬೋಲ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.