ಪ್ರಸಾದ ನೀಡುವ ನೆಪದಲ್ಲಿ 7 ವರ್ಷದ ಬಾಲಕಿಯ ಅತ್ಯಾಚಾರಗೈದವನಿಗೆ 10 ವರ್ಷ ಕಠಿಣ ಶಿಕ್ಷೆ

Team Udayavani, Dec 7, 2019, 2:53 PM IST

ಶಿವಮೊಗ್ಗ: ಏಳು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ನ್ಯಾಯಾಲಯ ಆರೋಪಿಗೆ ಹತ್ತು ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ತೀರ್ಥಹಳ್ಳಿ ತಾಲೂಕಿನ ಏಳು ವರ್ಷದ ಬಾಲಕಿಯ ಮೇಲೆ 2014ರಲ್ಲಿ ಭಾಸ್ಕರ್ ಎಂಬಾತ ಅತ್ಯಾಚಾರವೆಸಗಿದ್ದ. ಈ ಸಂಬಂಧ ಮಾಳೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಕೂಲಿ ಕೆಲಸದವನಾಗಿದ್ದ ಭಾಸ್ಕರ,  ಬಾಲಕಿಗೆ ಪ್ರಸಾದ ನೀಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ಅತ್ಯಾಚಾರವೆಸಗಿದ್ದ. ಬಾಲಕಿ ನಂತರ ತನ್ನ ಹೆತ್ತವರಿಗೆ ವಿಷಯ ತಿಳಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಬಿ ಶಿವಪ್ರಸಾದ್ ಅವರು ಇಂದು ತೀರ್ಪು ನೀಡಿದರು.

ಆರೋಪಿ ಭಾಸ್ಕರ್ ಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು 30 ಸಾವಿರ ದಂಡ, ಒಂದು ವೇಳೆ ದಂಡ ಕಟ್ಟಲು ಆತ ವಿಫಲನಾದರೆ ಆರು ತಿಂಗಳು ಸಾದಾ ಶಿಕ್ಷೆ ಅನುಭವಿಸಬೇಕೆಂದು ಆದೇಶ ನೀಡಿದ್ದಾರೆ.

ಜಿಲ್ಲಾ ಕಾನೂನು ನೆರವು ಸಮಿತಿಯ ಶಿಫಾರಸ್ಸಿನ ಮೇರೆಗೆ ಸಂತ್ರಸ್ತ ಬಾಲಕಿಗೆ ಸರಕಾರ ಮೂರು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ