ಕೋವಿಡ್ ಕಳವಳ: ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ಸೀಲ್ ಡೌನ್
Team Udayavani, Jun 1, 2020, 11:05 AM IST
ಶಿವಮೊಗ್ಗ: ಇಲ್ಲಿನ ಆರ್ ಎಎಸ್ ಐ ಅವರಿಗೆ ರವಿವಾರ ಕೋವಿಡ್-19 ಸೋಂಕು ದೃಢವಾಗಿದ್ದು, ಅವರ ಪುತ್ರಿ ಜಯನಗರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಅಳವಡಿಸಿ ಸೀಲ್ ಡೌನ್ ಮಾಡಲಾಗಿದ್ದು, ಇಡೀ ಪೊಲೀಸ್ ಠಾಣೆಗೆ ಅಗ್ನಿ ಶಾಮದ ದಳದ ವಾಹನ ಬಳಸಿ ಸ್ಯಾನಿಟೈಸೀಂಗ್ ಮಾಡಲಾಗುತ್ತಿದೆ.
ರವಿವಾರ ಕೆಎಸ್ ಆರ್ ಪಿ ದಳದ ಆರ್ ಎಎಸ್ ಐ ಸೇರಿದಂತೆ ಆರು ಮಂದಿ ಪೊಲೀಸರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಆರ್ ಎಎಸ್ ಐ ಅವರು ಕೆಲ ದಿನಗಳ ಹೋಂ ಕ್ವಾರಂಟೈನ್ ನಲ್ಲಿದ್ದರು. ಬಳಿಕ ಇವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಅವರ ಮಗಳು ಜಯನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕಾರಣದಿಂದ ಜಯನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ
ಉತ್ತರ ಕೊರಿಯಾದಲ್ಲಿ ಮಿತಿಮೀರಿದ ಕೋವಿಡ್; ಮೂರು ದಿನದಲ್ಲಿ 820,620 ಪ್ರಕರಣಗಳು ಪತ್ತೆ!
ಭಾರತದಲ್ಲಿ 24 ಗಂಟೆಯಲ್ಲಿ 2,841 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಭಾರೀ ಇಳಿಕೆ
ಭಾರತದಲ್ಲಿ 24 ಗಂಟೆಯಲ್ಲಿ 2,827 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 24 ಮಂದಿ ಸಾವು
ಕೋವಿಡ್ ನಾಲ್ಕನೇ ಅಲೆ ಭೀತಿ: ಕಳೆದ 24 ಗಂಟೆಗಳಲ್ಲಿ 3,451 ಹೊಸ ಕೇಸ್ , 40 ಸಾವು