Udayavni Special

ಆಮ್ಲಜನಕ ಲಭ್ಯತೆ ಸಮಸ್ಯೆ; ಶಾಸಕ ಹಾಲಪ್ಪ ಆತಂಕ


Team Udayavani, May 6, 2021, 11:31 PM IST

6-22

ಸಾಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಬೆಡ್‌ ಲಭ್ಯತೆ ಇಲ್ಲದ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. ಇದರಿಂದ ಸೋಂಕಿತರು ಮುಂದಿನ ದಿನಗಳಲ್ಲಿ ಸಾಗರ ಉಪವಿಭಾಗೀಯ ಆಸ್ಪತ್ರೆಯನ್ನು ಅವಲಂಬಿಸುವುದು ಅನಿವಾರ್ಯವಾಗಲಿದೆ ಎಂದು ಎಂಎಸ್‌ಐಎಲ್‌ ಅಧ್ಯಕ್ಷ, ಶಾಸಕ ಎಚ್‌. ಹಾಲಪ್ಪ ಹರತಾಳು ಆತಂಕ ವ್ಯಕ್ತಪಡಿಸಿದರು.

ತಾಲೂಕಿನ ಕೊರೊನಾ ಪರಿಸ್ಥಿತಿ ಕುರಿತು ಸಾಗರ ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಇತರ ಅಧಿ ಕಾರಿಗಳ ಜೊತೆಗೆ ಬುಧವಾರ ತುರ್ತು ಸಭೆ ನಡೆಸಿದ ನಂತರ ಮಾತನಾಡಿದ ಅವರು, ಪ್ರಸ್ತುತ ಸುತ್ತಮುತ್ತಲ ಹಳ್ಳಿಯ ಮಾಹಿತಿ ಗಮನಿಸಿದಾಗ ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಸಾಗರ ಆಸ್ಪತ್ರೆಯಲ್ಲೂ ಸೋಂಕಿತರು ತುಂಬುವ ಸಾಧ್ಯತೆ ಇದೆ. ಇದರಿಂದ ಅಗತ್ಯವಿರುವ ರೋಗಿಗಳಿಗೆ ಆಕ್ಸಿಜನ್‌ ಕೊರತೆ ಎದುರಿಸಬೇಕಾಗಲಿದೆ ಎಂದರು.

ಇಷ್ಟೆಲ್ಲ ರೋಗದ ತೀವ್ರತೆ ಇದ್ದಾಗಲೂ ಕೊರೊನಾ ನಿಯಮ ಮೀರಿ ಜನ ಮದುವೆ ಮನೆ ಮತ್ತು ಕುರಿ ಊಟದಲ್ಲಿ ಸೇರುತ್ತಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ ವಿಪರೀತವಾಗಲಿದೆ. ಇನ್ನಾದರೂ ಜನ ನಿಯಮ ಪಾಲಿಸಬೇಕು ಮತ್ತು ಸ್ವತಃ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನ ಮಾಡಬೇಕು ಎಂದರು.

ಇಲ್ಲಿಯ ಆಸ್ಪತ್ರೆ ಮೇಲೆ ಒತ್ತಡ ಆಗುವ ಮುನ್ನವೇ ಅಗತ್ಯ ವ್ಯವಸ್ಥೆ ಕಲ್ಪಿಸಲು ಹರಸಾಹಸ ಮಾಡಲಾಗುತ್ತಿದೆ. ಒಳ್ಳೆಯ ವೈದ್ಯಕೀಯ ಸಿಬ್ಬಂದಿ ನಮ್ಮೊಂದಿಗಿದೆ. ಆದರೆ ಆಕ್ಸಿಜನ್‌, ಸಿಲಿಂಡರ್‌ ಕೊರತೆ ಇದೆ. ಸಿಲಿಂಡರ್‌ ಸಾಮರ್ಥ್ಯವನ್ನು 40ಕ್ಕೆ ಏರಿಸಿಕೊಳ್ಳಲಾಗಿದೆ. ಆದರೆ ಅದು ಸಾಕಾಗುವುದಿಲ್ಲ. ಇಲ್ಲಿಯ ಕೈಗಾರಿಕೋದ್ಯಮಿಗಳ ಸಹಕಾರ ಪಡೆದು ಅವರಲ್ಲಿರುವ ಸಿಲಿಂಡರ್‌ ಕೂಡ ಬಳಸಿಕೊಳ್ಳುವ ಮೂಲಕ ಕನಿಷ್ಠ 100 ಸಿಲಿಂಡರ್‌ ಲಭ್ಯತೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಲಸಿಕೆ ತೆಗೆದುಕೊಳ್ಳಲು ಜನ ಬರುತ್ತಿದ್ದಾರೆ. ಆದರೆ ಅವರಿಗೆ ಲಸಿಕೆ ಲಭ್ಯತೆಯ ಮಾಹಿತಿ ಇಲ್ಲ. ಈ ಸಮಸ್ಯೆ ಕೂಡ ಆಗದ ರೀತಿಯಲ್ಲಿ ಬಂದಿರುವ ಎಲ್ಲರಿಗೂ ಲಸಿಕೆ ನೀಡುವ ಪ್ರಯತ್ನ ಮಾಡಲಾಗುತ್ತಿದೆ. ಸಾಗರ ಉಪವಿಭಾಗೀಯ ವ್ಯವಸ್ಥೆಯಾಗಿರುವುದರಿಂದ ಬೇರೆ ಬೇರೆ ಭಾಗದವರೂ ಇಲ್ಲಿಯ ಆಸ್ಪತ್ರೆ ನಂಬಿ ಬರುತ್ತಿರು ವುದರಿಂದ ಸೂಕ್ತ ರೀತಿಯ ಚಿಕಿತ್ಸೆ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಸಹಾಯಕ ಆಯುಕ್ತ ಡಾ.ಎಲ್‌.ನಾಗರಾಜ್‌, ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ವೈದ್ಯಾ ಧಿಕಾರಿ ಡಾ. ಪ್ರಕಾಶ್‌ ಬೋಸ್ಲೆ, ನಗರ ಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್‌ ಇದ್ದರು.

ಟಾಪ್ ನ್ಯೂಸ್

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

54

ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ಕೊಟ್ಟವರ ವಿರುದ್ಧ ಶೀಘ್ರವೇ ಕಠಿಣ ಕ್ರಮ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-20

ಆನ್‌ಲೈನ್‌ ಕೋರ್ಸ್‌: ಕುವೆಂಪು ವಿವಿಗೆ ಅನುಮತಿ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

17-23

ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಕಿಡಿ

17-22

ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಿಎಂ ಆಸರೆ: ಬಿವೈಆರ್‌

17-21

ಸಮಾಜದ ಒಳಿತಿಗೆ ಬ್ರಾಹ್ಮಣರ ಕೊಡುಗೆ ಅಪಾರ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

18-21

ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ

18-20

ಆನ್‌ಲೈನ್‌ ಕೋರ್ಸ್‌: ಕುವೆಂಪು ವಿವಿಗೆ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.