ತೌಕ್ತೆ ಚಂಡಮಾರುತ ಎಫೆಕ್ಟ್; ಜಿಲ್ಲೆಯಲ್ಲಿ ಶೀತಗಾಳಿ-ಮಳೆ


Team Udayavani, May 16, 2021, 10:50 PM IST

16-21

ಶಿವಮೊಗ್ಗ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಾದ್ಯಂತ ಬೆಳಿಗ್ಗೆ ಯಿಂದಲೇ ಮೋಡಕವಿದ ವಾತಾವರಣ ಕಂಡುಬಂದಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಆಗುಂಬೆ, ತೀರ್ಥಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

ನಗರದಲ್ಲಿ ಸಂಪೂರ್ಣ ಮೋಡಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗುತ್ತಿದೆ. ವಾತಾವರಣ ಸಂಪೂರ್ಣ ಬದಲಾಗಿದ್ದು, ಶೀತಗಾಳಿ ಬೀಸುತ್ತಿದೆ. ತುಂಗಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ ಯಾಗುವ ಹಂತ ತಲುಪಿದೆ. ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ ಸುಮಾರು 500 ಕ್ಯೂಸೆಕ್‌ ನೀರನ್ನು ಹೊರಗೆ ಹರಿಯ ಬಿಡಲಾಗುತ್ತಿದೆ.

ಮಳೆ ಹೆಚ್ಚಾದರೆ ಇನ್ನಷ್ಟು ನೀರನ್ನು ಜಲಾಶಯದಿಂದ ಹೊರಗೆ ಬಿಡುವ ಸಾಧ್ಯತೆ ಇದ್ದು, ತಗ್ಗುಪ್ರದೇಶದ ಜನ ಎಚ್ಚರಿಕೆ ವಹಿಸುವಂತೆ ಹಾಗೂ ಜಾನುವಾರುಗಳನ್ನು ನದಿ ಪ್ರದೇಶಕ್ಕೆ ಬಿಡದಿರುವಂತೆ ತಿಳಿಸಲಾಗಿದೆ.

ಮುಂದಿನ ಮೂರು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಈಗಾಗಲೇ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ನದಿ, ನಾಲೆ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧ ರಾಗಿರುವಂತೆ ಅಗ್ನಿಶಾಮಕ, ಮೆಸ್ಕಾಂ, ರಕ್ಷಣೆ ಹಾಗೂ ಇತರ ಇಲಾಖೆಗಳ ಅ ಧಿಕಾರಿಗಳಿಗೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

ಒಂದೆರಡು ಗಂಟೆ ಸುರಿದ ಮಳೆಗೆ ನಗರದ ತಗ್ಗು ಪ್ರದೇಶ ಮತ್ತು ರಾಜಕಾಲುವೆ ಹರಿಯುವ ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗುತ್ತಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿಗಳಿಂದ ಚರಂಡಿಗಳಲ್ಲಿ ನೀರು ಸರಾಗವಾಗಿ ಸಾಗುತ್ತಿಲ್ಲ. ಇದರ ಬಗ್ಗೆ ಗಮನಹರಿಸಲು ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಳೆ ಹೀಗೆ ಮುಂದುವರೆದರೆ ಆಗುಂಬೆ ಭಾಗದಲ್ಲಿ ಬಸ್‌ ಸಂಚಾರ ಸ್ಥಗಿತಕ್ಕೂ ಯೋಚಿಸಲಾಗಿದೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಸೂಚನೆ ನೀಡಲಾಗಿದೆ.ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.