ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಕಿಡಿ

Team Udayavani, Jun 17, 2021, 11:01 PM IST

17-23

ಶಿವಮೊಗ್ಗ: ತೈಲ ಬೆಲೆ ಏರಿಕೆ ವಿರೋಧಿ ಸಿ ಪಾಲಿಕೆ ಸದಸ್ಯ ಎಚ್‌.ಸಿ. ಯೋಗೀಶ್‌ ನೇತೃತ್ವದಲ್ಲಿ ಕುವೆಂಪು ರಸ್ತೆಯ ನಂದಿ ಪೆಟ್ರೋಲ್‌ ಬಂಕ್‌ ಬಳಿ ಕಾಂಗ್ರೆಸ್‌ ಮುಖಂಡರು ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಮೇಲೆ ಗದಾಪ್ರಹಾರ ನಡೆಸಿದೆ.

ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಬೆಲೆ ಗಗನಕ್ಕೇರಿದೆ. ಶ್ರೀಮಂತರಿಗೆ ಮಣೆ ಹಾಕಿದ ಸರ್ಕಾರ ಬಡವರನ್ನು ತುಳಿಯುತ್ತಿದೆ. ಸಾಮಾನ್ಯರ ಬದುಕನ್ನು ಕಸಿದುಕೊಂಡು ತೆರಿಗೆ ಏರಿಸಿ ಅಕ್ಷರಶಃ ಸುಲಿಗೆಗೆ ಇಳಿದಿದೆ. ಈ ಹಗಲು ದರೋಡೆಯ ವಿರುದ್ಧ ಕಾಂಗ್ರೆಸ್‌ ತನ್ನ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಕೇಂದ್ರ ಸರ್ಕಾರ ಕಾರ್ಪೊರೇಟ್‌ ತೆರಿಗೆಯನ್ನು ಶೇ.30 ರಿಂದ ಶೇ.22ಕ್ಕೆ ಇಳಿಸಿದೆ.

ಆದರೆ ಜನ ಸಾಮಾನ್ಯರು ನಿತ್ಯ ಬಳಸುವ ವಸ್ತುಗಳ ಮೇಲೆ ತೆರಿಗೆ ಏರಿಸಿದೆ. ಗರೀಬಿ ಹಠಾವೋ ಎಂಬ ಘೋಷಣೆ ಕೇವಲ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಇದು ಬಂಡವಾಳಶಾಹಿಗಳ ಪರವಾದ ಸರ್ಕಾರ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಪಾಕಿಸ್ತಾನ, ಶ್ರೀಲಂಕಾ, ಭೂತಾನ್‌, ಬಾಂಗ್ಲಾದೇಶ, ನೇಪಾಳ ಮುಂತಾದ ದೇಶಗಳಲ್ಲಿ ತೈಲಬೆಲೆ 50 ರಿಂದ 70 ರೂ. ಒಳಗೆ ಇದ್ದರೆ ಭಾರತದಲ್ಲಿ ಮಾತ್ರ ಶತಕ ಬಾರಿಸಿದೆ. ಕೇಂದ್ರ ಸರ್ಕಾರ ಕೂಡಲೆ ತೈಲ ಮತ್ತು ಅಡುಗೆ ಅನಿಲ ಬೆಲೆಯನ್ನು ಇಳಿಸಬೇಕು. ಬೇಕಾಬಿಟ್ಟಿ ಏರಿಸಿರುವ ತೆರಿಗೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪಾಲಿಕೆ ಸದಸ್ಯ ಎಚ್‌.ಸಿ. ಯೋಗೀಶ್‌ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಕಾರದಲ್ಲಿದ್ದಾಗ ಅಂತಾರಾಷೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆ ಏರಿಸಿರಲಿಲ್ಲ. ಆದರೆ ಈಗ ಅಂತಾರಾಷೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಇಳಿಕೆಯಾಗಿದ್ದರೂ ಕೂಡ ಏರಿಸಲಾಗಿದೆ. ಭಾವನಾತ್ಮಕ ವಿಷಯಗಳ ಮೇಲೆ ಬಡವರ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಸರ್ಕಾರ ತನ್ನ ಭಕ್ತರಿಗೆ ಪ್ರತ್ಯೇಕ ಪೆಟ್ರೋಲ್‌ ಬಂಕ್‌ ಗಳನ್ನು ತೆರೆದು ಅವರ ಹತ್ತಿರ ಎಷ್ಟು ಬೇಕಾದರೂ ತೆರಿಗೆ ವಸೂಲು ಮಾಡಲಿ ಆದರೆ ಬಡವರಿಗೆ ಮಾತ್ರ ತೈಲಬೆಲೆ ಇಳಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌, ವಿಧಾನ ಪರಿಷತ್‌ ಸದಸ್ಯ ಆರ್‌ .ಪ್ರಸನ್ನ ಕುಮಾರ್‌, ವಿಶ್ವನಾಥ್‌ ಕಾಶಿ, ರಂಗನಾಥ್‌, ರವಿಕುಮಾರ್‌, ಮಂಜುಳಾ ಶಿವಣ್ಣ, ನವೀನ್‌, ದೇವೇಂದ್ರಪ್ಪ, ಕುಮಾರೇಶ್‌, ರಂಗೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.