ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲ ಕ್ರಮ

Team Udayavani, Jun 20, 2021, 10:16 PM IST

20-21

ಶಿವಮೊಗ್ಗ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಶನಿವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಕಳೆದ 18 ದಿನಗಳಲ್ಲಿ ಜಿಲ್ಲೆಯಲ್ಲಿ ಸರಾಸರಿಗಿಂತ ಶೇ.20ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ.

ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ. 67 ಗ್ರಾಮ ಪಂಚಾಯತ್‌ ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನೋಡಲ್‌ ಅಧಿ ಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್‌ ರೂಂ ಆರಂಭಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆ ಇಲ್ಲ. 26,459 ಕ್ವಿಂಟಾಲ್‌ ಬಿತ್ತನೆ ಬೀಜ ಬೇಡಿಕೆ ಇದ್ದು, 30,242 ಕ್ವಿಂಟಾಲ್‌ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈಗಾಗಲೇ 3341 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್‌ ಅಂತ್ಯದವರೆಗೆ 52 ಸಾವಿರ ಮೆಟ್ರಿಕ್‌ ಟನ್‌ ವಿವಿಧ ರಸಗೊಬ್ಬರ ಬೇಡಿಕೆ ಇದ್ದು, 1.07 ಮೆಟ್ರಿಕ್‌ ಟನ್‌ ದಾಸ್ತಾನಿದೆ.

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ ಮೂವರು ಸಾವಿಗೀಡಾಗಿದ್ದು, ಅವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳಿಗೆ ಸ್ವಲ್ಪಮಟ್ಟಿನ ಹಾನಿಯಾಗಿದ್ದು ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಧಿಕಾರಿ ಅವರು ತಿಳಿಸಿದರು.

ಅಗತ್ಯ ಅನುದಾನ ಬಿಡುಗಡೆ: ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಯಾವುದೇ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ಜಿಲ್ಲಾ ಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್‌ ವರಿಷ್ಠಾ ಧಿಕಾರಿ ಲಕ್ಷಪ್ರಸಾದ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅ ಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.