ಹುಣಸೋಡು ಕಲ್ಲುಕ್ವಾರಿ ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ಪ್ರಕರಣದ ತನಿಖೆಗೆ 6 ತಂಡ ರಚನೆ: ಎಸ್ಪಿ ಕೆ.ಎಂ.ಶಾಂತರಾಜು

Team Udayavani, Feb 6, 2021, 6:02 PM IST

6-35

ಶಿವಮೊಗ್ಗ: ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಕೆ.ಎಂ.ಶಾಂತರಾಜು ಅವರು, ಜಮೀನಿನ ಮಾಲೀಕರಾದ ಶಂಕರಗೌಡ ಟಿ. ಕುಲಕರ್ಣಿ, ಅವಿನಾಶ್‌ ಕುಲಕರ್ಣಿ ಹಾಗೂ ಆಂಧ್ರ ಪ್ರದೇಶದ ಅನಂತಪುರಂ ನಿವಾಸಿಗಳಾದ ಪಿ. ಶ್ರೀರಾಮುಲು ಮತ್ತು ಪಿ.ಮಂಜುನಾಥ್‌ ಸಾಯಿ ಎಂಬುವವರನ್ನು ಬಂ ಧಿಸಲಾಗಿದೆ ಎಂದರು.

ಈ ಪ್ರಕರಣ ಸಂಬಂಧ ಆರು ತನಿಖಾ ತಂಡಗಳನ್ನು ರಚಿಸಿದ್ದು, ತುಂಗಾನಗರ ಠಾಣೆ ಪಿಐ ದೀಪಕ್‌ ಮತ್ತು ಸೊರಬ ವೃತ್ತ ಸಿಪಿಐ ಮರುಳಸಿದ್ದಪ್ಪ ಅವರು ಆಂಧ್ರಪ್ರದೇಶದ ಅನಂತಪುರಂಗೆ ತೆರಳಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ರಾಯದುರ್ಗದಲ್ಲಿ ಶ್ರೀರಾಮುಲು ಅವರಿಗೆ ಸಂಬಂಧಪಟ್ಟ ಸೊ#ಧೀಟಕಗಳ ದಾಸ್ತಾನು ಗೋದಾಮಿದೆ. ಅಲ್ಲಿ ಪರವಾನಗಿ ಪಡೆಯದೇ ಒಂದು ವಾಹನದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಅನಂತಪುರಂ ಜಿಲ್ಲೆಯ ಗುಮ್ಮಟಘಟ್ಟ ಪೊಲೀಸ್‌ ಠಾಣೆಯಲ್ಲಿ ಅಕ್ರಮ ಸ್ಫೋಟ ದಾಸ್ತಾನು ಸಂಬಂಧಪಟ್ಟಂತೆ  ಪ್ರಕರಣ ಕೂಡ ದಾಖಲಾಗಿದೆ.

ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ, ಆಂಧ್ರಪ್ರದೇಶದ ಪೊಲೀಸರು,
ವಿಶಾಖಪಟ್ಟಣದ ಡೆಪ್ಯೂಟಿ ಕಂಟ್ರೋಲರ್‌ ಆಫ್‌ ಎಕ್ಸ್‌ಪ್ಲೋಸಿವ್‌ ಅವರಿಗೆ ಶ್ರೀರಾಮುಲು ಲೈಸೆನ್ಸ್‌ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ನೀಡಿದ್ದು, ಅವರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಫೆ.4ರಂದು ಭದ್ರಾವತಿ ಟೌನ್‌ ಸಿಪಿಐ ರಾಘವೇಂದ್ರ ಕಾಂಡಿಕೆ, ವಿನೋಬನಗರ ಪಿಎಸ್‌ಐ ಉಮೇಶ್‌, ಸಿಬ್ಬಂದಿ ನಾಗರಾಜ್‌, ಸಂದೀಪ್‌ ಅವರನ್ನೊಳಗೊಂಡ ತಂಡವು ಹಾವೇರಿ, ದಾವಣಗೆರೆ, ಜಗಳೂರು, ಚನ್ನಗಿರಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಈ ಪ್ರಕರಣದಲ್ಲಿ ಸ್ಫೋಟವಾದ ಜಮೀನಿನ ಮಾಲೀಕರಾದ ಶಂಕರ್‌ಗೌಡ ಮತ್ತು ಅವಿನಾಶ್‌ ಅವರನ್ನು ದಾವಣಗೆರೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ ಎಂದರು.
ಮಹಿಳಾ ಪೊಲೀಸ್‌ ಠಾಣೆ ಪಿಐ ಅಭಯ್‌ ಪ್ರಕಾಶ್‌, ಗ್ರಾಮಾಂತರ ಸಿಪಿಐ ಸಂಜೀವ್‌ ಕುಮಾರ್‌, ಎಎಸ್‌ಐ ವಿಜಯ್‌, ಸಿಬ್ಬಂದಿ
ಕಿರಣ್‌ ಮೋರೆ ಅವರನ್ನೊಳಗೊಂಡ ತಂಡವು ಅನಂತಪುರಂ, ರಾಯದುರ್ಗ ಮುಂತಾದ ಕಡೆಗಳಿಗೆ ಭೇಟಿ ನೀಡಿ ನಂತರ ಹೈದರಾಬಾದ್‌ಗೆ
ತೆರಳಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈಗೆ ತೆರಳಿ ಅಲ್ಲಿ ಶ್ರೀರಾಮುಲು ಮತ್ತು ಮಂಜುನಾಥ್‌ ಎಂಬುವವರನ್ನು ಬಂಧಿ ಸಿದ್ದಾರೆ ಎಂದು ತಿಳಿಸಿದರು.

ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಸ್ಫೋಟಕಗಳು ಪಿ. ಶ್ರೀರಾಮುಲು ಅವರ ಮಾಲೀಕತ್ವದಲ್ಲಿರುವ ಆಂಧ್ರಪ್ರದೇಶದ
ಅನಂತಪುರಂನ ಗಣೇಶ್‌ ಟ್ರೇಡರ್‌ನಿಂದ ಪೂರೈಕೆಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದಲ್ಲಿ ಈವರೆಗೆ ಎಂಟು
ಜನರನ್ನು ಬಂಧಿ ಸಲಾಗಿದೆ ಎಂದು ಎಸ್ಪಿ ಕೆ.ಎಂ. ಶಾಂತರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಎಚ್‌.ಟಿ. ಶೇಖರ್‌ ಇದ್ದರು.

ಓದಿ : ದ್ವಿಪಥ ಹೆದ್ದಾರಿ ಉನ್ನತೀಕರಣಕ್ಕೆ 87 ಕೋಟಿ ರೂ. ಅನುಮೋದನೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.