ದಂಡ ವಸೂಲಿ ಬದಲು ಮಾಸ್ಕ್ ನೀಡಿದ ಪೊಲೀಸರು!

Team Udayavani, Apr 20, 2021, 6:21 PM IST

20-22

ಶಿವಮೊಗ್ಗ: ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡುವ ಬದಲಿಗೆ ಅವರಿಗೆ ಮಾಸ್ಕ್ ನೀಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪೊಲೀಸರು ವಿಶಿಷ್ಟ ಕಾರ್ಯಾಚರಣೆ ನಡೆಸಿದರು.

ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿ ಕಾರಿ ಎಚ್‌.ಟಿ. ಶೇಖರ್‌ ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾಸ್ಕ್ ಧರಿಸದೆ ನಿರ್ಲಕ್ಷé ವಹಿಸಿದವರನ್ನು ತರಾಟೆಗೆ ತೆಗೆದುಕೊಂಡು ಮಾಸ್ಕ್ ವಿತರಣೆ ಮಾಡಿ ಕೊರೊನಾ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

ಖಾಸಗಿ ಬಸ್‌ ನಿಲ್ದಾಣದಲ್ಲಿ ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದರು. ಸಾಮಾಜಿಕ ಅಂತರವಿಲ್ಲದೆ ಪ್ರಯಾಣಿಕರು ನಿಂತಿದ್ದರು.ಇದನ್ನು ಗಮನಿಸಿದ ಎಎಸ್ಪಿ ಡಾ|ಎಚ್‌.ಟಿ ಶೇಖರ್‌, ಡಿವೈಎಸ್‌ಪಿ ಪ್ರಶಾಂತ್‌ ಹಾಗೂ ಸಿಬ್ಬಂದಿ ಪ್ರತಿಯೊಬ್ಬರಿಗೂ ಮಾಸ್ಕ್ ವಿತರಣೆ ಮಾಡಿದರು. ಅಲ್ಲದೇ ಮಾಸ್ಕ್ ತೊಡದೆ ಬಸ್ಸಿಗಾಗಿ ಕಾದು ಕುಳಿತಿದ್ದ ಮಕ್ಕಳಿಗೆ ಎಎಸ್ಪಿಯವರು ಮಾಸ್ಕ್ ತೊಡಿಸಿ,ಪೋಷಕರಿಗೆ ತಿಳುವಳಿಕೆ ನೀಡಿದರು. ಪೊಲೀಸರು ಬಸ್‌ ನಿಲ್ದಾಣದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಸುತ್ತಿದ್ದಂತೆ ಕೆಲವರು ಕರ್ಚಿಫ್‌,ಟವೆಲ್‌ ಮುಖಕ್ಕೆ ಕಟ್ಟಿಕೊಂಡರು.

ಇದನ್ನು ಗಮನಿಸಿ ಬಸ್‌ ಏರಿದ ಎಎಸ್ಪಿ ಶೇಖರ್‌, ಜೀವ ಹಾಗೂ ಜೀವನ ಮುಖ್ಯ.ದಂಡಕ್ಕೆ ಹೆದರಿ ಮುಖ ಮುಚ್ಚಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಕೊರೊನಾದಿಂದ ಬಚಾವ್‌ ಆಗುವುದು ಮುಖ್ಯ ಎಂದು ತಿಳುವಳಿಕೆ ನೀಡಿ, ಮಾಸ್ಕ್ ವಿತರಣೆ ಮಾಡಿದರು.

ಸಿಟಿ ಬಸ್‌ನಲ್ಲಿ ಡಿವೈಎಸ್ಪಿ ಪಾಠ: ಇನ್ನು ಡಿವೈಎಸ್ಪಿ ಪ್ರಶಾಂತ್‌ ಮುನ್ನೋಳಿ ಅವರು, ನಗರ ಸಾರಿಗೆ ಬಸ್ಸುಗಳಲ್ಲಿ ಮಾಸ್ಕ್ ಧರಿಸದವರಿಗೆ ಕೊರೊನಾ ಸೋಂಕು ಜೀವಕ್ಕೆ ಎಷ್ಟು ಅಪಾಯಕಾರಿ ಎನ್ನುವುದರ ಬಗ್ಗೆ ತಿಳುವಳಿಕೆ ನೀಡಿದರು. ಕೊರೊನಾ ಸೋಂಕಿನಿಂದ ತಮ್ಮನ್ನು ಕಾಪಾಡಿಕೊಳ್ಳಲು ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರು.

ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಂಡ ಪ್ರಯೋಗದ ಜೊತೆಗೆ ಮಾಸ್ಕ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.