Shivamogga: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ರೌಡಿ ಶೀಟರ್ ಕಾಲಿಗೆ ಗುಂಡೇಟು
Team Udayavani, Dec 28, 2023, 10:10 AM IST
ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮಂಜುನಾಥ ಅಲಿಯಾಸ್ ಓಲಂಗ ಎಂಬಾತ ಗುಂಡೇಟು ತಿಂದ ಆರೋಪಿಯಾಗಿದ್ದಾನೆ.
ಮೂರು ದಿನದ ಹಿಂದೆ ಶಶಿ ಎನ್ನುವ ಯುವಕನಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ ಬಾಗಿಯಾಗಿದ್ದ ಮಂಜು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆದರೆ ಬುಧವಾರ ಸಂಜೆ ಜಯನಗರ ಪೊಲೀಸ್ ಠಾಣೆಗೆ ಬಂದು ಸರೇಂಡರ್ ಆಗಿದ್ದ ಮಂಜು ಓಲಂಗ.
ಬುಧವಾರ ರಾತ್ರಿ ಹಲ್ಲೆ ನಡೆಸಿದ್ದ ಪ್ರದೇಶಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಮಂಜು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಆತ್ಮ ರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿ ಓಲಂಗನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: DMDK chief Vijayakanth: ತಮಿಳು ಚಿತ್ರರಂಗದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ವಿಧಿವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ