
Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು
Team Udayavani, Jun 7, 2023, 12:46 PM IST

ಶಿವಮೊಗ್ಗ: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.
ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ.
ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ.
ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಮೇಲಾಧಿಕಾರಿಗಳ ನಿರ್ಲಕ್ಷ್ಯ ವೇ ಇಷ್ಟೆಕೆಲ್ಲ ಕಾರಣ.ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Couples: ಲಿವಿಂಗ್ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ