ಮಾಸ್ಕ್ ಧರಿಸದವರಿಗೆ ದಂಡ
Team Udayavani, Jul 8, 2020, 2:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸೊರಬ: ಪಟ್ಟಣದಲ್ಲಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಪಪಂ ಮಾಸ್ಕ್ ಇಲ್ಲದೇ ಬೇಜವಾಬ್ದಾರಿತನ ತೋರುವವರಿಗೆ ದಂಡ ವಿಧಿಸಲು ಮುಂದಾಗಿದೆ.
ಪಪಂ ಅಧಿಕಾರಿಗಳು ದಂಡ ವಿಧಿಸುವ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಎರಡು ದಿನಗಳಲ್ಲಿ ಸುಮಾರು 5050 ರೂ., ದಂಡ ವಸೂಲಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕೂಡ ಮಾಸ್ಕ್ ಧರಿಸಿ ಓಡಾಡುವುದನ್ನು ಕಡ್ಡಾಯಗೊಳಿಸಿದ್ದು, ಪಪಂ ಸಹ ಕ್ರಮ ಕೈಗೊಂಡಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದರೆ 100 ರೂ., ದಂಡ ವಿಧಿಸಲಾಗುತ್ತಿದೆ. ಮಾಸ್ಕ್ ಧರಿಸಿದೇ ಸಂಚರಿಸುತ್ತಿದ್ದ ಕಂದಾಯ ಇಲಾಖೆಯ ಸಿಬ್ಬಂದಿಗಳೇ ದಂಡ ತೆತ್ತ ಘಟನೆಯೂ ನಡೆಯಿತು. ಕಾರ್ಯಾಚರಣೆಯಲ್ಲಿ ಪಪಂ ಮುಖ್ಯಾ ಧಿಕಾರಿ ಜಗದೀಶ್ ನಾಯ್ಕ, ಆರ್ಐ ಜಿ. ವಿನಾಯಕ್, ಅಧಿಕಾರಿಗಳಾದ ಕೆ.ಎಸ್. ರಮೇಶ್, ಸಿಬ್ಬಂದಿ ನಾಗರಾಜ್, ಏಳುಕೋಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ