ಗಾಂಜಾ ಮಾರಾಟ; ಮೂವರ ಬಂಧನ
Team Udayavani, Oct 13, 2021, 4:00 PM IST
ಸೊರಬ: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಮೂವರು ಆರೋಪಿತರನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದ ಬಸ್ ತಂಗುದಾಣದ ಬಳಿ ಮಂಗಳವಾರ ನಡೆದಿದೆ.
ಶಿಗ್ಗಾ ಗ್ರಾಮದ ಶರತ್ ಉಮಾಪತಿ, ಜಡೆ ಗ್ರಾಮದ ಸಚಿನ್ ಶ್ರೀಶೈಲಗೌಡ, ಜಡೆಕಾಲ್ಗೇರಿ ಗ್ರಾಮದ ದರ್ಶನ್ ನಾಗರಾಜ ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಮೂವರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಬೈಕ್, 1,500 ರೂ., ಹಣ ಹಾಗೂ 320 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಪರಮೇಶ್ವರ ನಾಯ್ಕ್, ಎಂ.ಕೆ. ನಾಗರಾಜ್, ಕಾನ್ಸ್ಟೇಬಲ್ ಗಳಾದ ಸಲ್ಮಾನ್ ಖಾನ್ ಹಾಜಿ, ಸುಧಾಕರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು