ನಿಪ ವೈರಸ್‌ ತಡೆಗೆ ಕ್ರಮ ಕೈಗೊಳ್ಳಿ


Team Udayavani, May 25, 2018, 5:25 PM IST

shiv-2.jpg

ಶಿವಮೊಗ್ಗ: ಬಾವಲಿಗಳ ಮೂಲಕ ಹರಡುವ ನಿಪ ವೈರಸ್‌ ರೋಗ ಜಿಲ್ಲೆಗೆ ಕಾಲಿರಿಸದಂತೆ ತುರ್ತು ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಪ ವೈರಸ್‌ ತಡೆಗೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಲಾದ ವಿವಿಧ ಇಲಾಖಾ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಈ ರೋಗದ ಶಂಕಿತ ಲಕ್ಷಣ ಮಂಗಳೂರಿನಲ್ಲಿ ಸಹ ಪತ್ತೆಯಾಗಿವೆ. ಶಿವಮೊಗ್ಗ ಜಿಲ್ಲೆ ನೆರೆಯ ಉಡುಪಿ ಹಾಗೂ ಮಂಗಳೂರಿನೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಪ್ರತಿ ನಿತ್ಯ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾವಹಿಸುವ ಅಗತ್ಯವಿದೆ ಎಂದರು. ಪ್ರಥಮ ಹಂತದಲ್ಲಿ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಬೇಕು.

ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ನೀಡಬೇಕು. ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಶುಂಠಿ ಬೆಳೆಯಲು ಜನರು ಬರುವ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಬೇಕು. ಇದೇ ರೀತಿ ಬಾವಲಿಗಳು ಹೆಚ್ಚಾಗಿ ಕಂಡು ಬರುವ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. 

ಬಿಡಾಡಿ ಹಂದಿಗಳನ್ನು ತೆರವುಗೊಳಿಸಿ: ಪ್ರಥಮ ಬಾರಿಗೆ 1999ರಲ್ಲಿ ಮಲೇಷಿಯಾ ಮತ್ತು ಸಿಂಗಾಪುರ ದೇಶದಲ್ಲಿ ಹಂದಿಗಳಲ್ಲಿ ವೈರಸ್‌ ಪತ್ತೆಯಾಗಿದೆ. ಹಂದಿ ಮೂಲಕ ವೈರಾಣು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಬಿಡಾಡಿ
ಹಂದಿ ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಬೇಕು. ಈ ಕುರಿತು ಸೂಕ್ತ ಕ್ರಮವನ್ನು ನಗರ ಸ್ಥಳೀಯ ಸಂಸ್ಥೆಗಳು ಕೂಡಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 

ಮಾಹಿತಿ ನೀಡಿ: ನಿಪ ವೈರಸ್‌ ರೋಗದ ಲಕ್ಷಣ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕ ವೈರಲ್‌ ವಾರ್ಡ್‌ ಆರಂಭಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.

ರೋಗದ ಲಕ್ಷಣಗಳು: ನಿಪ ವೈರಸ್‌ ಬಾಧಿತರಿಗೆ ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ ಪ್ರಥಮ ಹಂತದಲ್ಲಿ ಕಾಣಿಸಿಕೊಳ್ಳುವುದು. ಬಳಿಕ ಪ್ರಜ್ಞಾಹೀನತೆಗೆ ಒಳಗಾಗುವರು. ಅತಿಯಾದ ಜ್ವರ ಮೆದುಳಿಗೆ ವ್ಯಾಪಿಸುವುದು, ಮಾತುಗಳಲ್ಲಿ ತೊದಲುವಿಕೆ ಹಾಗೂ ಅಪಸ್ವರದ ಲಕ್ಷಣ ಕಾಣಿಸಿಕೊಳ್ಳುತ್ತದೆ. ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದಲ್ಲಿ ಸಾವು ಸಂಭವಿಸಬಹುದು. 

ಸೋಂಕಿತ ದಿನದಿಂದ 4ರಿಂದ 18ದಿನಗಳಲ್ಲಿ ನಿಪ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಎಂದು ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮುತ್ತುರಾಜ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಿ.ಸಿ ವೆಂಕಟೇಶ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು. 

ರೋಗದ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ. ಆದರೆ ರೋಗ ಹರಡದಂತೆ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಸ್ಥಳೀಯ ಆಡಳಿತ ಸಮನ್ವಯದಿಂದ
ಕಾರ್ಯನಿರ್ವಹಿಸಬೇಕು. ಆಶಾ ಕಾರ್ಯಕರ್ತೆಯರು, ಸ್ವಸಹಾಯ ಗುಂಪಿನ ಸದಸ್ಯರು ಗ್ರಾಮೀಣ ಮಟ್ಟದಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.