Shivamogga; ಅಪಾಯದಲ್ಲಿದೆ ತೀರ್ಥಹಳ್ಳಿಯ ಭೀಮನಕಟ್ಟೆ ತೂಗು ಸೇತುವೆ !

Team Udayavani, Jul 3, 2023, 11:58 AM IST

3-theerthahalli

ತೀರ್ಥಹಳ್ಳಿ: ಸಾವಿರಾರು ಜನರನ್ನು ಆಕರ್ಷಿಸುತ್ತಿರುವ ತಾಲೂಕಿನ ಭೀಮನಕಟ್ಟೆ ತೂಗು ಸೇತುವೆ ನಿರ್ವಹಣೆ ಇಲ್ಲದೆ ಹಾಳಾಗಿದೆ.

ಮುಳುಬಾಗಿಲು ಹಾಗೂ ಹೆಗ್ಗೋಡು ಗ್ರಾಮ ಪಂಚಾಯತ್ ಆಡಳಿತದ ತಿಕ್ಕಾಟದಲ್ಲಿ ಸೇತುವೆ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಮಾಲತಿ ನದಿಗೆ ಅಡ್ಡಲಾಗಿ ಈ ತೂಗು ಸೇತುವೆಯನ್ನು 2007ರಲ್ಲಿ ನಿರ್ಮಿಸಲಾಗಿದ್ದು‌, ತುಂಗಾ ಮತ್ತು ಮಾಲತಿ ನದಿ ಸೇರುವ ಈ ಪ್ರದೇಶದಲ್ಲಿ ನೈಸರ್ಗಿಕವಾಗಿ ಡ್ಯಾಂ ಸೃಷ್ಟಿಯಾಗಿದೆ.

ಎಂತಹ ಬಿರು ಬೇಸಿಗೆಯಲ್ಲಿಯೂ ಇಲ್ಲಿ ನೀರು ಕಡಿಮೆಯಾಗುವುದಿಲ್ಲ. ಸೌಳಿ, ಅಲಗೇರಿ, ಬಾಳೇಕೋಡ್ಲು, ಗೊರಕೋಡು, ಹೊಳೆಮಾದ್ಲು, ಬಿಕ್ಕೊಳ್ಳಿ, ಬೋಗಾರುಕೊಪ್ಪ ಮಜಿರೆ ಗ್ರಾಮಗಳಿಗೆ ಸಂಚಾರಕ್ಕೆ ಈ ಸೇತುವೆಯೇ ಆಧಾರ.

1983ರಲ್ಲಿ ಅಂದಿನ ಶಾಸಕ ಡಿ.ಬಿ. ಚಂದ್ರೇಗೌಡ ಅವಧಿಯಲ್ಲಿ ಸೇತುವೆ ನೀಲಿ ನಕ್ಷೆ ಸಿದ್ಧಗೊಂಡು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆಡಳಿತಾತ್ಮಕ ಗೊಂದಲದಿಂದ ಪ್ರಸ್ತಾಪ ಮೊಟಕುಗೊಳಿಸಲಾಗಿತ್ತು. ಅನಂತರ ಪ್ರತಿ ಚುನಾವಣೆಯಲ್ಲಿ ಸೇತುವೆ ಪ್ರಮುಖ ವಿಚಾರವಾಗಿತ್ತು.

ಉದ್ದೇಶಿತ ಸೇತುವೆ ಕಾಮಗಾರಿ ಬಿಟ್ಟು 2007ರಲ್ಲಿ ಅಂದಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪದ್ಮನಾಭ ಭಟ್‌ ರೂ.25 ಲಕ್ಷ ವೆಚ್ಚದ ಅನುದಾನ ನೀಡಿ ತೂಗು ಸೇತುವೆ ನಿರ್ಮಿಸಲು ಕ್ರಮ ಕೈಗೊಂಡಿದ್ದರು.

ಆದರೆ ಈಗ ಸೇತುವೆ ಶಿಥಿಲಗೊಂಡಿದೆ. ಮಳೆಗಾಲ ಆರಂಭವಾಗಿರುವುದರಿಂದ ಕಬ್ಬಿಣದ ಸೇತುವೆಗೆ ಹಿಡಿದಿರುವ ತುಕ್ಕು ಹೆಚ್ಚಾಗುವ ಆತಂಕ ಎದುರಾಗಿದೆ. ಹಲವು ಕಡೆಗಳಲ್ಲಿ ಕಬ್ಬಿಣದ ಸರಳುಗಳು ತುಕ್ಕಿನಿಂದಾಗಿ ತನ್ನ ಸಾಮರ್ಥ್ಯ ಕಳೆದುಕೊಂಡಿದ್ದು ಮುರಿದು ಬೀಳುವ ಹಂತಕ್ಕೆ ತಲುಪಿದೆ.

ಗ್ರಾಮಪಂಚಾಯಿತಿಗಳ ತಿಕ್ಕಾಟ !?

ಸೇತುವೆ ನಿರ್ವಹಣೆಗೆ ಪ್ರತಿ ವರ್ಷ ರೂ.2 ಲಕ್ಷ ಅನುದಾನ ಬೇಕಿದೆ. ಸಂಪೂರ್ಣ ದುರಸ್ತಿಗೆ ರೂ.15 ಲಕ್ಷಕ್ಕೂ ಹೆಚ್ಚು ಅನುದಾನ ಬೇಕಿದೆ. ಇದು ಬಿಕ್ಕಟ್ಟಿಗೆ ಕಾರಣವಾಗಿದೆತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇತುವೆ ಪ್ರದೇಶ ಹೆಚ್ಚಿದ್ದು, ಮುಳುಬಾಗಿಲು ಗ್ರಾಮ ಪಂಚಾಯಿತಿಯ ಕಡಿಮೆ ಹಳ್ಳಿಗಳು ಸೇತುವೆ ಪ್ರಯೋಜನ ಪಡೆಯುತ್ತವೆ. ಈ ಕಾರಣ ನಿರ್ವಹಣೆಯನ್ನು ಹೆಗ್ಗೋಡು ಗ್ರಾಮ ಪಂಚಾಯಿತಿ ವಹಿಸಲಿ ಎಂಬುದು ಮುಳುಬಾಗಲು ಪಂಚಾಯಿತಿ ಆಡಳಿತದ ವಾದ. ಸೇತುವೆಯ ಪ್ರಯೋಜನ ಮುಳುಬಾಗಿಲಿಗೂ ಅನ್ವಯಿಸುವುದರಿಂದ ವೆಚ್ಚ ಭರಿಸಲಿ ಎಂಬ ವಾದವನ್ನು ಹೆಗ್ಗೋಡು ಗ್ರಾ.ಪಂ. ಮುಂದಿಟ್ಟಿದೆ. ಎರಡೂ ಗ್ರಾಮ ಪಂಚಾಯಿತಿ ನಡುವಿನ ತಿಕ್ಕಾಟದಿಂದ ಜನರು ಸಂಕಷ್ಟ ಎದುರಿಸುವಂತಾಗಿದೆ.

ಕಾಮಗಾರಿಯ ವೇಳೆ ಸೇತುವೆಗೆ 25 ವರ್ಷ ಆಯಸ್ಸಿದೆ ಎಂದು ನಿಗದಿಪಡಿಸಲಾಗಿತ್ತು. ಆದರೆ ಸೇತುವೆ ಮೇಲೆ ನಿರಂತರ ದ್ವಿಚಕ್ರ ವಾಹನ ಸಂಚರಿಸುತ್ತಿರುವ ಪರಿಣಾಮ ಸೇತುವೆ ಶಿಥಿಲಗೊಂಡಿದೆ ಎನ್ನುತ್ತಾರೆ ಗ್ರಾಮಸ್ಥರು.

ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರ ಸೇತುವೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಪ್ರವಾಸಿಗರ ನೆಚ್ಚಿನ ತಾಣ

ಮಲೆನಾಡು ಭಾಗದಲ್ಲಿರುವ ನೈಸರ್ಗಿಕ ಪ್ರವಾಸಿ ತಾಣಗಳನ್ನು ನೋಡಲು ರಾಜ್ಯವಲ್ಲದೇ ಹೊರ ರಾಜ್ಯಗಳಿಂದಲೂ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಬರುತ್ತಾರೆ. ಅಂತಹ ಸ್ಥಳಗಳಲ್ಲಿ ಭೀಮನಕಟ್ಟೆಯ ತೂಗು ಸೇತುವೆ ಕೂಡ ಒಂದು. ಸ್ಥಳೀಯರಿಂದಲೇ ಮಾಹಿತಿ ಪಡೆದು ಅಥವಾ ಸಾಮಾಜಿಕ ಜಾಲತಾಣದಲ್ಲಿ ಫೋಟೊಗಳನ್ನು ಹುಡುಕಿ ಸೇತುವೆ ನೋಡಲು ಅನೇಕರು ಬರುತ್ತಾರೆ.

ತೂಗು ಸೇತುವೆಯಲ್ಲಿ ಸಮಸ್ಯೆ ಏನು ?

ತೂಗು ಸೇತುವೆ ಮೇಲ್ಭಾಗದಲ್ಲಿ ಹಾಸಿದ ಸಿಮೆಂಟ್‌ ಹಲಗೆ ಕಿತ್ತು ಬಂದಿರುವುದು, ಸೇತುವೆಯ ಕಬ್ಬಿಣದ ಕಂಬಿಗೆ ತುಕ್ಕು ಹಿಡಿದಿರುವುದು,  ಸೇತುವೆಯ ಕೆಳಭಾಗದಲ್ಲಿ ತುಕ್ಕು ಹಿಡಿದಿರುವುದು, ತೂಗು ಸೇತುವೆಯ ಮಧ್ಯಭಾಗದಲ್ಲಿ ಸಿಮೆಂಟ್‌ ಹಲಗೆಗೆ ರಕ್ಷಣೆ ನೀಡುವ ಕಬ್ಬಿಣ ತುಕ್ಕು ಹಿಡಿದು ಬೇರ್ಪಟ್ಟಿರುವುದು. ಹೀಗೆ ಹಲವು ಸಮಸ್ಯೆಗಳು ತೂಗು ಸೇತುವೆಯಲ್ಲಿ ಕಾಣಿಸುತ್ತಿದೆ.

15 ದಿನಗಳ ಹಿಂದೆ ಸಂಸದರ ಭೇಟಿ!

ಕಳೆದ 15 ದಿನಗಳ ಹಿಂದೆ ತೀರ್ಥಹಳ್ಳಿಗೆ ಆಗಮಿಸಿದ್ದ ಸಂಸದ ಬಿ ವೈ ರಾಘವೇಂದ್ರ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರ ಜೊತೆ ತೂಗು ಸೇತುವೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದರು. ಆದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಯಾವುದೇ ಅಧಿಕಾರಿಗಳು ಸಂಸದರ ಗಮನಕ್ಕೆ ತಂದಿಲ್ಲವೇ ಎಂಬುದೇ ಯಕ್ಷ ಪ್ರೆಶ್ನೆಯಾಗಿ ಉಳಿದಿದೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.