ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ
Team Udayavani, May 21, 2022, 1:51 PM IST
ಶಿವಮೊಗ್ಗ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ತೀರ್ಥಹಳ್ಳಿಯ ಮಾಳೂರು ಠಾಣೆಯ ಪಿಎಸ್ಐ ನವೀನ್ ಮಠಪತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಗೋವು ಕತ್ತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಗೋ ಮಾಂಸದ ಜೊತೆಗೆ ಜೀವಂತ ಹಸು ಹಾಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇಜಾಜ್ ಪಾಶಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ
ಗೋ ಮಾಂಸ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಮಾಳೂರು ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಪಿಎಸ್ಐ ನವೀನ್ ಜೊತೆ ಸಿಬ್ಬಂದಿಗಳಾದ ಪುನೀತ್, ಸಂದೀಪ್, ಅಭಿಲಾಶ್ ಭಾಗಿಯಾಗಿದ್ದರು.