ಸೊರಬ: ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸಾವು
Team Udayavani, Dec 23, 2021, 7:41 PM IST
ಸೊರಬ: ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ಬೆನ್ನೂರು ಗ್ರಾಮದ ಕೆರೆಯಲ್ಲಿ ಗುರುವಾರ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣ ಸಾವಜ್ಜಿ (50) ಮೃತ ದುರ್ಧೈವಿ.
ಬೆನ್ನೂರು ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಲಕ್ಷ್ಮಣ ಸಾವಜ್ಜಿ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಬೆನ್ನೂರು ಗ್ರಾಮದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗುತ್ತಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕ ಠಾಣೆಯ ಸಿಬ್ಬಂದಿ ಕೆರೆಯಿಂದ ಶವವನ್ನು ಮೇಲೆತ್ತಿದ್ದಾರೆ.
ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಮಹಾಬಲೇಶ್ವರ, ಸಿಬ್ಬಂದಿ ಡಿ.ವಿ. ಮಂಜುನಾಥ್, ಮಹೇಶ್ ಮಡಿವಾಳ, ಶ್ರೀಶೈಲ ಚಿಪ್ಪಲಕಟ್ಟಿ, ಎನ್.ಜಿ. ಪ್ರದೀಪ, ಎಚ್.ಎಂ. ಪ್ರಸನ್ನ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್