ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ


Team Udayavani, Aug 17, 2017, 3:16 PM IST

17-SHIV-2.jpg

ಶಿವಮೊಗ್ಗ: ರಾಜ್ಯದಲ್ಲಿ ಮತ್ತೂಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್‌. ರುದ್ರೇಗೌಡ ಹೇಳಿದರು.

ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಹಾಗೂ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸಾರುವ ಮೂಲಕ ಬಿಜೆಪಿ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. 

ಆದರೆ ಅವುಗಳು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ರಾಜ್ಯದಲ್ಲೂ
ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕು ಎಂದು ಹೇಳಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಗತ್ತಿನಲ್ಲೇ ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿಸಿದೆ. ವಿಶ್ವದೆಲ್ಲೆಡೆ ದೇಶಕ್ಕೆ ಗೌರವ ದೊರಕುವಂತೆ ಮಾಡಿದೆ. ಅಲ್ಲದೇ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಜನಸಾಮಾನ್ಯರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿತ್ತು. ಇದೆಲ್ಲವನ್ನು ಜನರಿಗೆ ತಲುಪಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಮುಕ್ತ ರಾಷ್ಟ್ರವನ್ನಾಗಿಸಲು ಮುಂದಡಿ  ಇಡಲಾಗಿದೆ. ಇನ್ನು 6 ತಿಂಗಳಲ್ಲಿ ಚುನಾವಣೆ ಎದುರಾಗಲಿದೆ. ಕಾರ್ಯಕರ್ತರು ಮೈಮರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮುಂದಾಗಬೇಕು. ರಾಷ್ಟ್ರ ನಾಯಕರೇ ಪ್ರತಿನಿತ್ಯ 17 ರಿಂದ 18 ಗಂಟೆ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಕರ್ತರಾದ ನಾವು ಅವರ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಜನಸಂಪರ್ಕ ಅಭಿಯಾನ, ವಿಸ್ತಾರಕ ಅಭಿಯಾನವನ್ನು ಜಿಲ್ಲೆಯ ಎಲ್ಲಾ 1704 ಬೂತ್‌ ಗಳಲ್ಲಿಯೂ 1250 ವಿಸ್ತಾರಕರು ನಡೆಸಿದ್ದಾರೆ. ಪ್ರತಿ ಮನೆಮನೆಗೆ ಭೇಟಿ ನೀಡಿ ನಮ್ಮ ಪಕ್ಷದ ಸಾಧನೆ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ತಲುಪಿಸಿದ್ದಾರೆ. ಈ ಅಭಿಯಾನ ಜನರಲ್ಲಿ ಸದಾಭಿಪ್ರಾಯ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಇದರಿಂದ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದರು. ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಫಸಲ್‌ ಬೀಮಾ ಯೋಜನೆ, ಕೈಗಾರಿಕೆಗಳಿಗೆ ಬೆನ್ನೆಲುಬಾದ ಯೋಜನೆಗಳು, ಜನರಿಕ್‌ ಯೋಜನೆ ಹೀಗೆ ಹಲವಾರು ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಜಾತಿ, ಧರ್ಮಗಳ ನಡುವೆ ಒಡಕು ಮೂಡಿಸುವ, ಪ್ರತ್ಯೇಕ ಧ್ವಜ ಗೊಂದಲಗಳಲ್ಲಿಯೇ ಮುಳುಗಿದೆ ಎಂದು
ಆರೋಪಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಎದರುರಾಗಿದೆ. ಮಳೆ ಇಲ್ಲದೆ ರೈತ ಸಮುದಾಯ ಆತಂಕಕ್ಕೆ ಒಳಗಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದಕ್ಕೆ ಆದ್ಯತೆ ಕೊಡಬೇಕಿತ್ತು ಅದನ್ನು ಬಿಟ್ಟು ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುವ, ಧಮನಕಾರಿ ಚಿಂತನೆಯತ್ತ ರಾಜ್ಯ ಸರ್ಕಾರ ಮುಂದಾಗಿದೆ ಎಂದು ದೂರಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಬೇಕು. ದೇಶದ ಹಲವು ರಾಜ್ಯಗಳು ಈ ಕಾರ್ಯ ಮಾಡಿವೆ. ರಾಜ್ಯ ಸರ್ಕಾದ ವೈಫಲ್ಯವನ್ನು ವಿರೋಧಿಸಲು ಪ್ರಬಲವಾದ ಹೋರಾಟ ಅಗತ್ಯವಾಗಿದೆ ಎಂದರು. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಅಧಿಕಾರದಲ್ಲಿದೆ. ಕಳೆದ 4 ವರ್ಷಗಳ ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕೇವಲ ಫ್ಲೆಕ್ಸ್‌, ಬ್ಯಾನರ್‌, ಜಾಹಿರಾತು ಮೂಲಕ ಜನರನ್ನು ಮರುಳು ಮಾಡತೊಡಗಿದೆ. ಪಕ್ಷದ ಕಾರ್ಯಕರ್ತರು ಸತ್ಯವನ್ನು ಜನರಿಗೆ ತಿಳಿಸಿ ಹೇಳಬೇಕಿದೆ ಎಂದರು.

ಸಭೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್‌, ಮಾಜಿ ಸಚಿವ ಕುಮಾರ್‌ ಬಂಗಾರಪ್ಪ, ಪ್ರಮುಖರಾದ ಗೋಪಾಲಕೃಷ್ಣ ಬೇಳೂರು, ಆರ್‌. ಕೆ. ಸಿದ್ದರಾಮಣ್ಣ, ಎಸ್‌. ದತ್ತಾತ್ರಿ, ಗಿರೀಶ್‌ ಪಟೇಲ್‌, ಬಿ. ಸ್ವಾಮಿರಾವ್‌, ಭಾರತೀ ಶೆಟ್ಟಿ, ಪವಿತ್ರ ರಾಮಯ್ಯ, ಗುರುಮೂರ್ತಿ, ದೇವದಾಸ್‌ ನಾಯಕ್‌, ಭವಾನಿ ರಾವ್‌ ಮೋರೆ, ಗಣೇಶರಾವ್‌ ಮತ್ತಿತರರು ಇದ್ದರು. 

ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕಗೊಂಡ ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್‌ ಹಾಗೂ ಹಿರಿಯ ಸಹಕಾರಿ  ಧುರೀಣ ಶ್ರೀಪಾದ ಹೆಗಡೆ ನಿಸರಾಣಿ ಅವರನ್ನು ಗೌರವಿಸಲಾಯಿತು. ಸಭೆಗೆ ಮೊದಲು ಇತ್ತೀಚಿಗೆ ನಿಧನರಾದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ. ಶಿವಪ್ಪ ಹಾಗೂ ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಾವನ್ನಿಪ್ಪಿದ  ಮಕ್ಕಳ ನಿಧನಕ್ಕೆ ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.