ಈಗ್ಲೇ ಬತ್ತುತ್ತಿದೆ ತುಂಗೆ; ಮುಂದೆ ಹ್ಯಾಂಗೆ?


Team Udayavani, Mar 6, 2019, 11:36 AM IST

shiv.jpg

ತೀರ್ಥಹಳ್ಳಿ: ಮಲೆನಾಡಿನಾದ್ಯಂತ ದಿನೇ ದಿನೇ ಬಿಸಿಲಿನ ಜಳ ಹೆಚ್ಚಾಗುತ್ತಿದೆ. ಮಲೆನಾಡಿನ ಜೀವನದಿ ತುಂಗೆಯ ಒಳ ಹರಿವು ಕ್ಷೀಣಿಸುತ್ತಿದೆ. ಮುಂದಿನ ದಿನಗಳಲ್ಲಿ ತುಂಗೆಯ ಮಡಿಲು ಬರಿದಾಗುವ ಲಕ್ಷಣ ಕಂಡು ಬಂದಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಲಕ್ಷಣಗಳ ಬಗ್ಗೆ ಮಲೆನಾಡಿಗರು ಆತಂಕ ಪಡುವಂತಾಗಿದೆ.

ತಾಲೂಕಿನಾದ್ಯಂತ ವಾತಾವರಣದಲ್ಲಿ ವೈಪರೀತ್ಯ ಕಂಡು ಬಂದಿದ್ದು, ಮುಂಜಾನೆ ಇಬ್ಬನಿ ಹೆಚ್ಚಾಗಿ ನಂತರ ಬಿಸಿಲಿನ ಕಾವು ಏರುತ್ತಿದೆ. ಪ್ರತೀ ವರ್ಷ ಮೇ ಅಂತ್ಯದಲ್ಲಿ ಕಾಣುವಂತಿದ್ದ ವಾತಾವರಣ ಈ ಬಾರೀ ಮಾರ್ಚ್‌ ಮೊದಲ ವಾರದಲ್ಲಿಯೇ ಕಂಡು ಬರುವಂತಾಗಿದೆ. ಮಲೆನಾಡಿನ ಬರಗಾಲದ ಮುನ್ಸೂಚನೆಯಂತೆ ಗೋಚರಿಸುವಂತಿದೆ. ನದಿ ಪ್ರದೇಶಗಳಲ್ಲಿ ಒಳ ಹರಿವು ಇಲ್ಲದೇ ತುಂಗಾ ನದಿ ಹಳ್ಳದಂತೆ ಗೋಚರಿಸುತ್ತಿದೆ. 

ತಾಲೂಕಿನ ಪ್ರಮುಖ ನದಿಗಳಾದ ತುಂಗೆ ಹಾಗೂ ಮಾಲತಿಯಲ್ಲಿ ಪ್ರತೀ ವರ್ಷ ಬೇಸಿಗೆ ಸಮಯದಲ್ಲಿ ನೀರಿನ ಪ್ರಮಾಣ ಎಷ್ಟೇ ಕಡಿಮೆ ಇದ್ದರೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ. ಆದರೆ ಈ ಬಾರಿ ಮಲೆನಾಡಿನ ಪರಿಸ್ಥಿತಿ ಭಿನ್ನವಾಗಿದೆ. ಮಲೆನಾಡು
ಭಾಗದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದು ಖಚಿತ ಎಂಬ ವಾತವರಣದ ಮುನ್ಸೂಚನೆಯ ಬಗ್ಗೆ ರೈತರು ಚಿಂತಿಸುವಂತಾಗಿದೆ.
 
ತುಂಗೆಯ ಮಡಿಲು ಬರಿದಾಗಲು ಕಾರಣ ಏನು ಎಂಬುದರ ಬಗ್ಗೆ ಮಲೆನಾಡಿಗರೇ ಯೋಚಿಸಬೇಕಾಗಿದೆ. ಮಲೆನಾಡಿನಲ್ಲಿ ಕಡಿಮೆಯಾಗುತ್ತಿರುವ ಮಳೆಯ ಪ್ರಮಾಣ, ಅಭಿವೃದ್ಧಿಯ ಹೆಸರಿನಲ್ಲಿ ಮಾಡುತ್ತಿರುವ ನೈಸರ್ಗಿಕ ಕಾಡುಗಳ ಮಾರಣ ಹೋಮ, ತುಂಗೆ ಹಾಗೂ ಮಾಲತಿ ನದಿಯ ದಡಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ನೈಸರ್ಗಿಕ ಅರಣ್ಯಕ್ಕೆ ಬೆಂಕಿ ಇಟ್ಟು ಲಾಭ ಮಾಡುವ ದೃಷ್ಟಿಯಿಂದ ಬೆಳೆಸುತ್ತಿರುವ ಅಕೇಶಿಯ ಹಾಗೂ ನೀಲಗಿರಿ ಪ್ಲಾಂಟೇಶನ್‌ಗಳು ಮಲೆನಾಡಿನ ಭೂ ಗರ್ಭದ ಅಂತರ್ಜಲವನ್ನೇ ಬರಿದಾಗಿಸಿದೆ ಎಂಬುದು ತಜ್ಞರ ಅನಿಸಿಕೆಯಾಗಿದೆ. 

ಇನ್ನೊಂದೆಡೆ ಸುಪ್ರೀಂ ಕೋರ್ಟ್‌ ಅಕೇಶಿಯಾ ಬೆಳೆಯಲು ನಿಷೇಧ ಹೇರಿದ್ದರೂ ಮುಂದುವರಿದಿರುವ ನಾಟಾ ವ್ಯವಹಾರವು ದುಡ್ಡು ಮಾಡುವ ದಂಧೆಯಾಗಿದೆ. ಜೊತೆಗೆ ಅಗತ್ಯಕ್ಕಿಂತ ಅತಿಯಾಗಿ ಪಂಪ್‌ಸೆಟ್‌ಗಳ ಬಳಕೆಯಿಂದ ನದಿಯಿಂದ ನೀರೆತ್ತುತ್ತಿರುವುದು ಹೆಚ್ಚಾಗುತ್ತಿದೆ ಎಂದು ಪರಿಸರವಾದಿಗಳ ಅಭಿಪ್ರಾಯ ಕೇಳಿಬಂದಿದೆ.
 
ಒಟ್ಟಾರೆ ಮಲೆನಾಡಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡು ಬರಗಾಲದ ಮುನ್ಸೂಚನೆ ಕಂಡುಬರುತ್ತಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸುವ ಅವಶ್ಯಕತೆಯಿದೆ. ಮಲೆನಾಡಿಗರು ಸಹ ನೀರಿನ
ಉಪಯೋಗದ ಬಗ್ಗೆ ಜಾಗೃತಿ ವಹಿಸಿ ಬಳಕೆ ಮಾಡಬೇಕಾದ ತುರ್ತು ಅಗತ್ಯವಿದೆ.

ತೀರ್ಥಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಬಾರಿ ಕೆಲವು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಪ್ರಸ್ತುತ ಪಟ್ಟಣ ವ್ಯಾಪ್ತಿಯಲ್ಲಿ 24×7 ಕುಡಿಯುವ ನೀರಿನ ಯೋಜನೆ ಕಾರ್ಯರೂಪದಲ್ಲಿದೆ. ಆದರೂ ಪಟ್ಟಣದ ನಾಗರಿಕರು ನೀರನ್ನು ಹೆಚ್ಚು ವ್ಯರ್ಥ ಮಾಡದೇ ಉಪಯೋಗಿಸುವ ಬಗ್ಗೆ ಜಾಗೃತಿ ವಹಿಸಬೇಕಾಗಿದೆ.
 ಸಂದೇಶ್‌ ಜವಳಿ, ಪಪಂ ಅಧ್ಯಕ್ಷ

ತಾಲ್ಲೂಕಿನ ಗ್ರಾಪಂ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಇಲ್ಲಿಯ ತನಕ ಯಾವುದೇ ದೂರು ಕೇಳಿ ಬಂದಿಲ್ಲ. ಈಗಾಗಲೇ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಳಕೆ ಹಾಗೂ ವ್ಯರ್ಥ ಮಾಡುವ ವಿಚಾರದಲ್ಲಿ ಪಿಡಿಒ ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಚರ್ಚಿಸಲಾಗಿದೆ.
 ಧನರಾಜ್‌, ತಾಪಂ ಕಾರ್ಯ ನಿರ್ವಹಣಾಧಿಕಾರಿ

ರಾಂಚಂದ್ರ ಕೊಪ್ಪಲು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.