ಶಿವಮೊಗ್ಗ ಬಸ್ ಗಳ ನಡುವೆ ಭೀಕರ ಅಪಘಾತ ; 40 ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Jul 1, 2022, 6:43 PM IST
ಶಿವಮೊಗ್ಗ : ಜಿಲ್ಲೆಯ ಉಂಬ್ಳೇಬೈಲು ಸಮೀಪ ಭೀಕರ ಬಸ್ ಅಪಘಾತ ಶುಕ್ರವಾರ ಸಂಭವಿಸಿದ್ದು, ಸರಕಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ 40 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಖಾಸಗಿ ಬಸ್ ಚಾಲಕನ ಸ್ಥಿತಿ ಗಂಭೀರ ವಾಗಿದೆ ಎಂದು ತಿಳಿದು ಬಂದಿದೆ.
ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಂಬ್ಳೇಬೈಲು ಸಮೀಪದ ತೋಟದಕೆರೆ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಎರಡು ಬಸ್ ಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಶಿವಮೊಗ್ಗದಿಂದ ಎನ್ ಆರ್ ಪುರ, ಕೊಪ್ಪ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್, ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಅವಘಡ ಸಂಭವಿಸಿದೆ.
ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಖಾಸಗಿ ಬಸ್ ನಲ್ಲಿ 35 ಕ್ಕೂ ಹೆಚ್ಚು ಹಾಗೂ ಸರ್ಕಾರಿ ಬಸ್ ನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ