Shimoga ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ
Team Udayavani, Jan 19, 2024, 3:08 PM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಅವಧಿ ಮೀರಿದ ಕಡತಗಳ ಬಗ್ಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸರ್ಕಾರ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳನ್ನು ಅನಗತ್ಯವಾಗಿ ಇಟ್ಟುಕೊಳ್ಳಲಾಗಿದೆ ಎಂದು ಲೋಕಾಯುಕ್ತಕ್ಕೆ ನೇರವಾಗಿ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಲೋಕಾಯುಕ್ತ ಕಚೇರಿಗೆ ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಅಧಿಕಾರಿಗಳು ಆಗಮಿಸಿ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಕಡತಗಳ ತಪಾಸಣೆ ಆರಂಭಿಸಲಾಗಿದೆ. ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳ ಬಗ್ಗೆ ಸಿಬ್ಬಂದಿಯಿಂದ ವಿವರಣೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್: ದೂರು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ