”ಶಿಕಾರಿಪುರಕ್ಕಿನ್ನು ವಿಜಯೇಂದ್ರ”: ಮಹತ್ವದ ಘೋಷಣೆ ಮಾಡಿದ ಯಡಿಯೂರಪ್ಪ
Team Udayavani, Jul 22, 2022, 1:42 PM IST
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಅಂಜನಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದರು.
ಇದನ್ನೂ ಓದಿ:ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಸಹಪಾಠಿ ದಿನೇಶ್ ಗುಣವರ್ಧನಾ ಶ್ರೀಲಂಕಾದ ನೂತನ ಪ್ರಧಾನಿ
ಬಹಳ ದೊಡ್ಡ ಅಂತರದಿಂದ, ನನಗಿಂತ ದೊಡ್ಡ ಅಂತರದಿಂದ ಶಿಕಾರಿಪುರ ಜನರು ಗೆಲ್ಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೆನೆ ಎಂದು ಎಂಟು ಬಾರಿ ಶಿಕಾರಿಪುರದಲ್ಲಿ ಗೆದ್ದ ಬಿ.ಎಸ್.ಯಡಿಯೂರಪ್ಪ ಹೇಳಿದರು.