ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಯೋಜನೆ

ಕೈಗಾರಿಕಾಭಿವೃದ್ಧಿ- ಉದ್ಯೋಗ ಹೆಚ್ಚಳಕ್ಕೆ ಕ್ರಮ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Team Udayavani, Sep 1, 2019, 12:09 PM IST

Udayavani Kannada Newspaper

ಶಿವಮೊಗ್ಗ: ಜಿಲ್ಲೆ ಅದರಲ್ಲೂ ಶಿವಮೊಗ್ಗ ನಗರ ಇನ್ನಷ್ಟು ಅಭಿವೃದ್ಧಿಯಾಗುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ, ವರ್ತುಲ ರಸ್ತೆ, ಹಳೆ ಜೈಲು ಸ್ಥಳದ ಅಭಿವೃದ್ಧಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಬಾರಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಿಂತಿರುವ ಕಾಮಗಾರಿಗಳ ಮಾಹಿತಿ ಪಡೆದು ಬಿಡುಗಡೆಯಾಗಬೇಕಿರುವ ಅನುದಾನದ ವರದಿಯನ್ನು ಸೂಚಿಸಿದ್ದೇನೆ ಎಂದರು. ಶಿವಮೊಗ್ಗ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿಯಾಗಬೇಕಾದರೆ ಪ್ರಮುಖವಾಗಿ ಇಲ್ಲಿಗೆ ಕೈಗಾರಿಕೆಗಳು ಬರಬೇಕು. ಉದ್ಯೋಗಾವಾಶ ಹೆಚ್ಚಳವಾಗಬೇಕು ಎಂಬ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆದಷ್ಟು ಬೇಗ ಆರಂಭವಾಗಲಿದೆ. ಈಗಾಗಲೇ 39 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ಹಳೆ ಜೈಲು ಆವರಣದ ಅಭಿವೃದ್ಧಿ: ಹಳೇ ಜೈಲು ಆವರಣದಲ್ಲಿ ಸುಂದರ ಪಾರ್ಕ್‌, ಆಟದ ಮೈದಾನ ನಿರ್ಮಿಸಲಿದ್ದು, ಸಾರ್ವಜನಿಕ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು. ಅಧಿಕಾರಿಗಳು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಿದ್ದು, ಅದಕ್ಕೆ ಅಗತ್ಯವಾದ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ವರ್ತುಲ ರಸ್ತೆಯೂ ಬಹುದಿನದ ಬೇಡಿಕೆಯಾಗಿದೆ. ಇದರಿಂದ ಸಂಪೂರ್ಣವಾಗಿ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಅನೇಕ ಅತಿವೃಷ್ಟಿ ಹಾನಿಯ ಬಗ್ಗೆ ನೆರವನ್ನು ಮತ್ತಷು ಚುರುಕುಗೊಳಿಸಲಾಗುವುದು. ಈಗಾಗಲೇ ಕೇಂದ್ರದ ತಂಡ ಸಮೀಕ್ಷೆ ನಡೆಸಿದೆ. ಹೆಚ್ಚು ನೆರವಿನ ನಿರೀಕ್ಷೆಯಲ್ಲಿದ್ದೇವೆ. ಸುಮಾರು 1 ಲಕ್ಷ ಮನೆಗಳ ನಿರ್ಮಾಣವಾಗಬೇಕಿದೆ. ಕೇಂದ್ರದಿಂದ ಹೆಚ್ಚಿನ ನೆರವು ಆದ್ಯತೆ ಮೇರೆಗೆ ಸಿಗಲಿದೆ. ಸ್ವಲ್ಪ ತಾಳ್ಮೆ ಇರಬೇಕಷ್ಟೇ ಎಂದರು.

ಸೆ. 7, 8 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬೆಂಗಳೂರಿಗೆ ಬರಲಿದ್ದು, ಅವರಿಗೆ ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಅನಾಹುತ, ಹಾನಿಯ ಬಗ್ಗೆ ತಿಳಿಸಿ ಹೆಚ್ಚಿನ ನೆರವು ನೀಡಲು ಮನವಿ ಮಾಡಲಾಗುವುದು ಎಂದರು. ಶಾಸಕರಾದ ಆರಗ ಜ್ಞಾನೇಂದ್ರ, ಕುಮಾರ್‌ ಬಂಗಾರಪ್ಪ, ಹರತಾಳು ಹಾಲಪ್ಪ, ರುದ್ರೇಗೌಡ, ಸಂಸದ ರಾಘವೇಂದ್ರ, ಡಿ.ಎಸ್‌. ಅರುಣ್‌, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಎಸ್‌.ಪಿ. ಶಾಂತರಾಜ್‌, ಸಿಇಒ ವೈಶಾಲಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.