ಹಾಳಾದ ರಸ್ತೆಗಳು ಸಂಚಾರಕ್ಕೆ ಮುಕ್ತ

ಲೋಕೋಪಯೋಗಿ ಇಲಾಖೆಯಿಂದ ದುರಸ್ತಿ •ಸಾಗರ ತಾಲೂಕಲ್ಲೇ ಹೆಚ್ಚು ರಸ್ತೆಗಳಿಗೆ ಹಾನಿ

Team Udayavani, Aug 23, 2019, 12:41 PM IST

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಸೇತುವೆಯನ್ನು ತಾತ್ಕಾಲಿಕ ದುರಸ್ತಿ ಮಾಡಿರುವುದು.

ಶಿವಮೊಗ್ಗ: ಆಶ್ಲೇಷ ಮಳೆ ಅಬ್ಬರಕ್ಕೆ ಜಿಲ್ಲೆಯ ರಸ್ತೆಗಳೆಲ್ಲ ಕ್ಲೇಷವಾಗಿವೆ. ವಾರದ ಕಾಲದ ಎಡೆಬಿಡದೆ ಸುರಿದ ಮಳೆಯಿಂದ ಬಹುತೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಲೋಕೋಪಯೋಗಿ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಿದೆ. ಎಲ್ಲ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ.

ದಾಖಲೆ ಮಳೆಗೆ ರಾಜ್ಯ, ರಾಷ್ಟ್ರೀಯ, ಜಿಲ್ಲಾ ಮಟ್ಟದ ರಸ್ತೆಗಳು ಗುಂಡಿ, ಗಟಾರುಗಳಿಂದ ಕೂಡಿದ್ದು ದುರಸ್ತಿಗೆ ಸರಕಾರದ ನೆರವನ್ನು ಬೇಡುತ್ತಿವೆ. ರಸ್ತೆ ಸಂಪೂರ್ಣ ಕೊಚ್ಚಿ ಹೋಗಿರುವ ಕಡೆ ತಾತ್ಕಾಲಿಕ ದುರಸ್ತಿ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 113 ಕೋಟಿ ಮೌಲ್ಯದ ರಸ್ತೆ, ಸೇತುವೆಗಳು ನೀರು ಪಾಲಾಗಿವೆ.

ರಾಜ್ಯ ಹೆದ್ದಾರಿ: ಭದ್ರಾವತಿ ತಾಲೂಕಿನಲ್ಲಿ 5.6 ಕಿಮೀ, ಹೊಸನಗರ 2.34 ಕಿಮೀ, ಸಾಗರ 2.8 ಕಿಮೀ, ಶಿಕಾರಿಪುರ 4.9 ಕಿಮೀ, ಶಿವಮೊಗ್ಗ 6, ಸೊರಬ 11. 8 ಕಿಮೀ, ತೀರ್ಥಹಳ್ಳಿ 19 ಕಿಮೀ ಸೇರಿ ಒಟ್ಟು ಜಿಲ್ಲೆಯಲ್ಲಿ 52.44 ಕಿಮೀ ರಾಜ್ಯ ಹೆದ್ದಾರಿ ಹಾಳಾಗಿದ್ದು 20.84 ಕೋಟಿ ನಷ್ಟ ಉಂಟಾಗಿದೆ. ಅದೇ ರೀತಿ ಜಿಲ್ಲಾ ಮುಖ್ಯ ರಸ್ತೆಗಳು ನೀರು ಪಾಲಾಗಿದ್ದು ಭದ್ರಾವತಿಯಲ್ಲಿ 6.8 ಕಿಮೀ, ಹೊಸನಗರ 8.6 ಕಿಮೀ, ಸಾಗರ 17.82 ಕಿಮೀ, ಶಿಕಾರಿಪುರ 11.49 ಕಿಮೀ, ಶಿವಮೊಗ್ಗ 1.21 ಕಿಮೀ, ಸೊರಬ 12.27 ಕಿಮೀ, ತೀರ್ಥಹಳ್ಳಿ 4.45 ಕಿಮೀ ಸೇರಿ ಒಟ್ಟು 62.64 ಕಿಮೀನಷ್ಟು ರಸ್ತೆ ಹಾಳಾಗಿದ್ದು 30.65 ಕೋಟಿ ರೂ. ನಷ್ಟ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಗಳೂ ಹಾಳು: ಬೆಂಗಳೂರು- ಹೊನ್ನಾವರ, ಬೈಂದೂರು- ರಾಣೆಬೆನ್ನೂರು, ತೀರ್ಥಹಳ್ಳಿ ಮೂಲಕ ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಸಹ ಇವೆ. ಈ ಪೈಕಿ ಸಾಗರ ತಾಲೂಕಿನಲ್ಲೇ ಅತಿ ಹೆಚ್ಚು ನಷ್ಟ ಸಂಭವಿಸಿದೆ. ಸಾಗರ ತಾಲೂಕಿನ 51.80 ಕಿಮೀನಷ್ಟು ರಸ್ತೆ ನೀರಿನಲ್ಲಿ ಆಹುತಿಯಾಗಿದೆ. ಹೊಸನಗರ 16.22 ಕಿಮೀ, ಭದ್ರಾವತಿ 5.10 ಕಿಮೀ, ಶಿವಮೊಗ್ಗ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 7.72 ಕಿಮೀ ಸೇರಿ ಒಟ್ಟು 80.84 ಕಿಮೀ ರಾಷ್ಟ್ರೀಯ ಹೆದ್ದಾರಿ ಹಾನಿಯಾಗಿದೆ. 16.97 ಕೋಟಿ ನಷ್ಟ ಸಂಭವಿಸಿದೆ.

ಸ್ಕ್ವಾಯರ್‌ ಕಟ್: ಸಿಎಂ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ರಸ್ತೆ ಗುಂಡಿಗಳನ್ನು ಸಮಭುಜ ಆಕಾರದಲ್ಲಿ ಕತ್ತರಿಸಿ ದುರಸ್ತಿ ಮಾಡಬೇಕೆಂದು ಶಾಸಕ ಕುಮಾರ್‌ ಬಂಗಾರಪ್ಪ ಒತ್ತಾಯಿಸಿದರು. ಇರುವ ಗುಂಡಿಗಳನ್ನು ಅದೇ ಆಕಾರದಲ್ಲಿ ಮುಚ್ಚಿದರೆ ಅವು ಇನ್ನಷ್ಟು ದೊಡ್ಡದಾಗುತ್ತವೆ. ವಾಹನಗಳಿಗೂ ತೊಡಕಾಗುತ್ತದೆ ಎಂಬುದನ್ನು ಗಮನ ಸೆಳೆದಿದ್ದರು.

ಮಣ್ಣು ಬೇಡ: ರಸ್ತೆ ಗುಂಡಿಗಳನ್ನು ತಾತ್ಕಾಲಿಕವಾಗಿ ಮಣ್ಣು ಮುಚ್ಚಿ ದುರಸ್ತಿ ಮಾಡಲಾಗಿದೆ. ಮಳೆ ಪೂರ್ಣ ಮುಗಿದ ಮೇಲೆ ಡಾಂಬರು ಹಾಕಿ ಮುಚ್ಚಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ತಿಳಿಸಿದ್ದಾರೆ. ಮಳೆ ಬಿಟ್ಟು ಬಿಟ್ಟು ಬರುತ್ತಿರುವುದರಿಂದ ವಾಹನ ಸವಾರರಿಗೆ ಬಿಸಿಲು ಬಂದಾಗ ಧೂಳು, ಮಳೆ ಬಂದಾಗ ಕೆಸರು ಎದುರಾಗುತ್ತಿದೆ. ಪೂರ್ಣ ಪ್ರಮಾಣದ ದುರಸ್ತಿಗೆ ನಾಗರಿಕರು ಆಗ್ರಹಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲೂ ಹಾಳು: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಂಕ್ರೀಟ್ ರಸ್ತೆ ಹೊರತುಪಡಿಸಿ ಡಾಂಬರು ರಸ್ತೆಗಳು ಮಳೆಗಾಲಕ್ಕೂ ಮೊದಲೇ ಗುಂಡಿ ಬಿದ್ದಿದ್ದವು. ಈಗ ಸಂಪೂರ್ಣ ಹಾಳಾಗಿದ್ದು, ರಸ್ತೆ ಸಂಚಾರ ನರಕವಾಗಿದೆ. ಪಾಲಿಕೆ ವ್ಯಾಪ್ತಿಯ ರಸ್ತೆಗಳ ದುರಸ್ತಿಗೆ ವಿಶೇಷ ಅನುದಾನ ಬೇಕಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

  • ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ "ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ'...

  • ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ದಲಿತರು, ಅಲ್ಪಸಂಖ್ಯಾತರರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟ ಸಾಹು ಮಹಾರಾಜ್‌ ಹಾಗೂ ಶಿವಾಜಿ ವಂಶಸ್ಥರಾದ ಮರಾಠಿಗರನ್ನು...

  • ಬೆಂಗಳೂರು: ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಹಳ್ಳಿ ಬಿಟ್ಟು ನಗರಕ್ಕೆ ಬರಬಾರದು ಎಂದು ನಟ ಶಿವರಾಜ್‌ಕುಮಾರ್‌ ರೈತರಲ್ಲಿ ಮನವಿ ಮಾಡಿದರು. ಕನಕಪುರ...

  • ಬೆಂಗಳೂರು: ರಾಜ್ಯದ್ಲಲಿ ಪೊಲೀಸರ ಕಾರ್ಯವೈಖರಿ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಎ ವಿರುದ್ಧದ...

ಹೊಸ ಸೇರ್ಪಡೆ

  • ಬೇಸಾಯ ಲಾಭದಾಯಕ ಅಲ್ಲ ಎನ್ನುವ ತೀರ್ಮಾನಕ್ಕೆ ಬಂದಿರುವ ರೈತರು ಪರ್ಯಾಯ ಉದ್ಯೋಗಗಳ ಹುಡುಕಾಟದಲ್ಲಿದ್ದಾರೆ. ಆದರೆ ಕೆಲವರು ಬೇಸಾಯದಲ್ಲೇ ಬದುಕು ರೂಪಿಸಿಕೊಳ್ಳುವ...

  • ಹಿಂದೆಲ್ಲಾ ಈಡೀ ಊರಿಗೆ ಒಂದೇ ಒಂದು ಎಸ್‌.ಟಿ.ಡಿ. ಬೂತ್‌ ಇರುತ್ತಿತ್ತು. ಇದು ದಶಕಗಳ ಹಿಂದಿನ ಮಾತು. ಆಗ, ಯಾರ ಬಳಿಯೂ ಮೊಬೈಲ್‌ ಇರುತ್ತಿರಲಿಲ್ಲವಾದ್ದರಿಂದ ಊರವರು...

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...