ರಾಘವೇಂದ್ರಗೆ ಭರ್ಜರಿ ಗೆಲುವು

Team Udayavani, May 24, 2019, 1:03 PM IST

24-May-19

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಕುಟುಂಬದವರು ಸಿಹಿ ತಿನ್ನಿಸಿದರು.

ಶಿವಮೊಗ್ಗ: ಮೋದಿ ಅಲೆ, ಸಂಘಟನೆ ಶಕ್ತಿಯಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಜಯ ಗಳಿಸಿದ್ದಾರೆ. ಒಂದೂವರೆ ಲಕ್ಷದ ಮತಗಳ ಅಂತರದಿಂದ ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ನಿರೀಕ್ಷೆಗೂ ಮೀರಿ ಮತಗಳು ಬಂದಿವೆ.

ಉಪ ಚುನಾವಣೆಯಲ್ಲಿ ಮೋದಿ ಅಲೆ, ಹಿಂದುತ್ವದ ಯಾವುದೇ ವಿಷಯಗಳು ಇಲ್ಲದ ವೇಳೆಯೂ 52 ಸಾವಿರ ಮತಗಳ ಅಂತರದ ಗೆಲುವು ಸಿಕ್ಕಿತ್ತು. ಇದನ್ನೇ ಕಡಿಮೆ ಮತ ಬಂದ ಬೂತ್‌ಗಳ ಮೇಲೆ ಹೆಚ್ಚು ನಿಗಾ ವಹಿಸಿದ ಪರಿಣಾಮ ಬಿಜೆಪಿ ಮತ್ತೂಂದು ದಾಖಲೆಯ ಗೆಲುವು ಸಾಧಿಸಿದೆ. ಉಪ ಚುನಾವಣೆಯಲ್ಲಿ ಸೋಲಿನ ಅಂತರವನ್ನು ತಗ್ಗಿಸಿಕೊಂಡು ಗೆಲುವಿನ ಕನಸು ಕಾಣುತ್ತಿದ್ದ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಆಘಾತಕಾರಿ ಸೋಲು ಅನುಭವಿಸಿದ್ದಾರೆ.

ಸಹ್ಯಾದ್ರಿ ಕಲಾ ಕಾಲೇಜು ಕಟ್ಟಡದಲ್ಲಿ ಗುರುವಾರ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಗಳಿಸಿದ ರಾಘವೇಂದ್ರ ಅವರು ಅಂತಿಮವಾಗಿ 2,23,360 ಮತಗಳಿಂದ ಜಯಭೇರಿ ಭಾರಿಸಿದರು. ಉಪ ಚುನಾವಣೆಯಲ್ಲಿ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಘವೇಂದ್ರ ಅವರು 7,29,872 ಲಕ್ಷ ಮತ ಗಳಿಸಿದರೆ, ಮಧು ಬಂಗಾರಪ್ಪ ಅವರು 5,06,512 ಲಕ್ಷ ಮತಗಳನ್ನು ಪಡೆದರು. 50ರಿಂದ 1 ಲಕ್ಷ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂದು ಹೇಳುತ್ತಿದ್ದರಾದರೂ ಆಂತರಿಕವಾಗಿ ಅಂತರ ಬಹಳ ಕಡಿಮೆಯಾಗಲಿದೆ ಎಂದು ಮಾತನಾಡಿಕೊಂಡಿದ್ದರು. ಆರಂಭದಲ್ಲಿ ಒಂದೂವರೆ ಲಕ್ಷ ಅಂತರ ಎಂದು ಹೇಳುತ್ತಿದ್ದ ಬಿಜೆಪಿ ಮುಖಂಡರ ಮತಗಟ್ಟೆ ಸಮೀಕ್ಷೆ ಆಧಾರದ ಮೇಲೆ 70 ಸಾವಿರ ಅಂತರಕ್ಕೆ ಬಂದಿದ್ದರು. ಆದರೆ ಮತದಾರ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ಲಿಸಿ ಹೊಸ ಸಂದೇಶ ನೀಡಿದ್ದಾನೆ.

ಎರಡನೇ ದೊಡ್ಡ ಗೆಲುವು: ಈವರೆಗೆ ಶಿವಮೊಗ್ಗ ಲೋಕಸಭೆ ಚುನಾವಣೆ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ. ಈ ಹಿಂದೆ 2014ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರು 3.62 ಲಕ್ಷ ಮತಗಳ ಅಂತರದಿಂದ ವಿಜಯ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿತ್ತು. ಈಗ ಎರಡನೇ ದೊಡ್ಡ ಗೆಲುವು ರಾಘವೇಂದ್ರ ಅವರ ಪಾಲಾಗಿದೆ. ರಾಘವೇಂದ್ರ ಅವರು ಗಳಿಸಿದ 7 ಲಕ್ಷ ಮತಗಳು ಸಹ ಹೊಸ ದಾಖಲೆ ನಿರ್ಮಿಸಿದೆ. 2014ರ ಚುನಾವಣೆಯಲ್ಲಿ ಅವರ ತಂದೆ ಯಡಿಯೂರಪ್ಪ ಅವರು 6.06 ಲಕ್ಷ ಮತ ಗಳಿಸಿದ್ದು ದಾಖಲೆಯಾಗಿತ್ತು. ಅವರಿಗಿಂತ 1.23 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಮತಗಳನ್ನು ಗಳಿಸಿದ ಸಂಸದ ಎಂಬ ಕೀರ್ತಿಗೆ ರಾಘವೇಂದ್ರ ಪಾತ್ರರಾಗಿದ್ದಾರೆ.

ಪರಾಜಿತ ಅಭ್ಯರ್ಥಿಗಳು ಗಳಿಸಿದ ಮತಗಳಲ್ಲೂ ಮಧು ಬಂಗಾರಪ್ಪ ಗಳಸಿದ ಮತಗಳು ಹೊಸ ದಾಖಲೆಯಾಗಿದೆ. ಈ ಹಿಂದೆ 2009ರ ಚುನಾವಣೆಯಲ್ಲಿ ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರು ರಾಘವೇಂದ್ರ ಅವರ ಎದುರು 4.29ಲಕ್ಷ ಮತಗಳನ್ನು ಗಳಿಸಿದ್ದರು. ಮಧು ಅವರು ತಮ್ಮ ತಂದೆಯವರಿಗಿಂತ 80 ಸಾವಿರ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ್ದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ 2.92 ಲ.ರೂ. ಪಡೆದು ವಂಚನೆ

ಭಕ್ತಿ, ಜ್ಞಾನ, ಮುಕ್ತಿ ಪರ್ಯಾಯ ಪೂಜೆಯ ಸಂದೇಶ; ನಿರ್ಗಮನ ಅದಮಾರು ಶ್ರೀಗಳು

ಭಕ್ತಿ, ಜ್ಞಾನ, ಮುಕ್ತಿ ಪರ್ಯಾಯ ಪೂಜೆಯ ಸಂದೇಶ; ನಿರ್ಗಮನ ಅದಮಾರು ಶ್ರೀಗಳು

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ್ದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.