ಒಂದಾದ ಭದ್ರಾವತಿ ಹಾಲಿ- ಮಾಜಿ ಶಾಸಕರು

ತಡರಾತ್ರಿ ತುರ್ತು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಘೋಷಣೆ

Team Udayavani, Apr 21, 2019, 4:23 PM IST

ಶಿವಮೊಗ್ಗ: ನಗರದ ಖಾಸಗಿ ಹೊಟೇಲ್‌ನಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಒಂದಾದ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್‌ ಮತ್ತು ಮಾಜಿ ಶಾಸಕ ಅಪ್ಪಾಜಿ ಗೌಡ.

ಶಿವಮೊಗ್ಗ: ಭದ್ರಾವತಿಯ ಶಾಸಕ ಬಿ.ಕೆ.
ಸಂಗಮೇಶ್ವರ್‌ ಹಾಗೂ ಮಾಜಿ ಶಾಸಕ ಅಪ್ಪಾಜಿ
ಗೌಡರ ನಡುವಿನ ಅಸಮಾಧಾನವನ್ನು
ಉಪಶಮನಗೊಳಿಸಿರುವ ಟ್ರಬಲ್‌ ಶೂಟರ್‌
ಡಿ.ಕೆ. ಶಿವಕುಮಾರ್‌ ಇಬ್ಬರೂ ಒಟ್ಟಾಗಿದ್ದಾರೆ
ಎಂದು ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ
ಹೊಟೇಲ್‌ವೊಂದರಲ್ಲಿ ಕರೆಯಲಾಗಿದ್ದ
ತುರ್ತು ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.

ಹಾವು ಮುಂಗುಸಿಯಂತಿದ್ದ ಭದ್ರಾವತಿ
ಶಾಸಕ, ಕಾಂಗ್ರೆಸ್‌ನ ಸಂಗಮೇಶ್ವರ್‌,
ಜೆಡಿಎಸ್‌ನ ಅಪ್ಪಾಜಿ ಗೌಡ ನಡುವ
ಸ್ನೇಹ ಕುದುರಿಸುವಲ್ಲಿ ಸಫಲರಾಗಿದ್ದಾರೆ.
ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಕಾರಣಕ್ಕೆ
ಮಾಜಿ ಹಾಲಿ ಶಾಸಕರು ಒಟ್ಟಿಗೆ ಪ್ರಚಾರ
ನಡೆಸಲು ತೀರ್ಮಾನಿಸಿದ್ದಾರೆ. ಇನ್ನು ಮುಂದೆ
ಕ್ಷೇತ್ರದಲ್ಲಿ ಜಂಟಿ ಪ್ರಚಾರ ಮಾಡಲಿದ್ದಾರೆ.
ಕಾರ್ಯಕರ್ತರು, ನಾಯಕರ ನಡುವೆ
ಒಟ್ಟಿಗೆ ಸಾಗಲು ತೀರ್ಮಾನಿಸಿದ್ದಾರೆ ಎಂದು
ಡಿಕೆಶಿ ತಿಳಿಸಿದರು.

ಭದ್ರಾವತಿ ಹಾಗೂ ಗ್ರಾಮಾಂತರ ಪ್ರದೇಶದ ಹತ್ತು ಕಡೆ ಶನಿವಾರ ಜಂಟಿ ಪ್ರಚಾರ ಮಾಡಲಿದ್ದು, ಚುನಾವಣೆ ದೃಷ್ಟಿಕೋನದಿಂದ ಇದು ಉತ್ತಮ ಸಂಕೇತವಾಗಿದೆ. ಭದ್ರಾವತಿಯಿಂದ ಕನಿಷ್ಠ 1 ಲಕ್ಷ ಮತಗಳ ಲೀಡ್‌ ಸಿಗುವ ನಿರೀಕ್ಷೆ ಇದೆ. ಎರಡೂ
ಪಕ್ಷದ ಮಂತ್ರಿಗಳು, ಶಾಸಕರು ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಹಾಲಿ, ಮಾಜಿ ಶಾಸಕರಿಬ್ಬರೂ ಮೈತ್ರಿಕೂಟದವರೇ ಆಗಿರುವುದರಿಂದ ಗೆಲ್ಲಲು ಪ್ರಬಲ ಅವಕಾಶಗಳಿವೆ. ಇರುವ ಎರಡು ದಿನ ಬಿರುಸಿನ ಪ್ರಚಾರ ಮಾಡಲಾಗುವುದು. ಭದ್ರಾವತಿಯಲ್ಲಿ ಮೋದಿ ಹವಾ ಇಲ್ಲ ಎಂದು ಡಿಕೆಶಿ ಪುನರುತ್ಛಸಿದರು.

ಶಾಸಕ ಬಿ.ಕೆ. ಸಂಗಮೇಶ್ವರ್‌ ಮಾತನಾಡಿ,’ನನ್ನ ಹಾಗೂ ಅಪ್ಪಾಜಿ ಗೌಡರ ನಡುವೆ ಭಿನ್ನಾಭಿಪ್ರಾಯವಿತ್ತು. ಅದನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ನೀಡುತ್ತೇವೆ. ಸಚಿವ ಡಿ.ಕೆ. ಶಿವಕುಮಾರ್‌ ಸಂಧಾನಕ್ಕೆ ನಾವು ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗೊತ್ತಿದ್ದೇವೆ. ಒಂದು ಒಪ್ಪಂದಕ್ಕೆ ಬಂದಿದ್ದೇವೆ. ನಾಳಿನ ಉಳಿವಿಗಾಗಿ ಮತ
ಯಾಚಿಸಲಿದ್ದೇವೆ. ಕಾಂಗ್ರೆಸ್‌- ಜೆಡಿಎಸ್‌ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.

ಡಿಕೆಶಿ ಸಂಧಾನದಲ್ಲಿ ಅರ್ಥವಿದೆ. ಮತದಾನಕ್ಕೆ ಇನ್ನೂ 78 ಗಂಟೆ ಕಾಲಾವಕಾಶವಿದ್ದು, ಮಧು ಗೆಲುವು ದೇಶಕ್ಕೆ ಸುದ್ದಿಯಾಗುವಂತೆ ಕೆಲಸ ಮಾಡುತ್ತೇವೆ. ರಾಜ್ಯ ನಾಯಕರ ಅಪೇಕ್ಷೆಯಂತೆ
ಕಾರ್ಯಕರ್ತರು ವೈಮನಸ್ಸನ್ನು ದೂರವಿಟ್ಟು ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಅಪ್ಪಾಜಿಗೌಡ ಮತ್ತಿತರರು ಇದ್ದರು.


ಈ ವಿಭಾಗದಿಂದ ಇನ್ನಷ್ಟು

 • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

 • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

 • ಸುರತ್ಕಲ್‌/ಉಡುಪಿ: ಒಂದು ತಿಂಗಳಿಗಿಂತಲೂ ಹೆಚ್ಚು ಅವಧಿಯಿಂದ ಪೊಲೀಸರ ಬಿಗಿ ಭದ್ರತೆಯ ನೆರಳಿನಲ್ಲಿದ್ದ ಸುರತ್ಕಲ್‌ನ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌...

 • ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಈ ಕ್ಷೇತ್ರಕ್ಕೆ...

 • ಸೋಮವಾರಪೇಟೆ: ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ...

ಹೊಸ ಸೇರ್ಪಡೆ

 • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

 • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

 • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

 • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

 • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

 • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...