ರಸ್ತೆ ವಿಸ್ತರಣೆ ವಿರೋಧಿಸಿ ಪ್ರತಿಭಟನೆ

Team Udayavani, Jul 19, 2019, 3:44 PM IST

19-July-30

ಶಿವಮೊಗ್ಗ: ಮಲವಗೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಅಗಲೀಕರಣ ಮಾಡಬಾರದೆಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಗುರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 206 ಮಲವಗೊಪ್ಪ ಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣವಾಗಿದೆ. ಈಗ ಮತ್ತೂಮ್ಮೆ ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ರಸ್ತೆ ಅಗಲೀಕರಣ ಮಾಡಬಾರದು ಎಂದು ಒತ್ತಾಯಿಸಿದರು.

ಮಲವಗೊಪ್ಪದಲ್ಲಿ ಹಿಂದೆ ಚತುಷ್ಪಥ‌ ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಮುಂದೆ ರಸ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದ ಕಾರಣ ಆಕ್ಷೇಪಣೆಯನ್ನು ಹಿಂದಕ್ಕೆ ಪಡೆಯಲಾಗಿತ್ತು. ನಂತರದಲ್ಲಿ ರಸ್ತೆ ಪಕ್ಕದ ಸ್ವತ್ತಿನ ಮಾಲೀಕರು ಮನೆ, ಮಳಿಗೆಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ದೇವಾಲಯದ ಮುಂಭಾಗಕ್ಕೆ ಹಾಗೂ ಪುಷ್ಕರಣಿ ಸುತ್ತಲೂ ಕಾಂಪೌಂಡ್‌ ಮೆಶ್‌ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ರಸ್ತೆಯ ಇಕ್ಕೆಲಗಳಲ್ಲಿರುವ ಹೆಚ್ಚಿನ ಭಾಗದ ಸ್ವತ್ತಿನ ಮಾಲೀಕರು ರೈತರಾಗಿದ್ದು, ಅವರ ಜಮೀನುಗಳು ಮಲವಗೊಪ್ಪ ಭಾಗದಲ್ಲಿ ಇರುವುದರಿಂದ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗಿದೆ. ರೈತರ ವಾಸದ ಸ್ಥಳಕ್ಕೆ ಧಕ್ಕೆಯಾದರೆ ಜೀವನಕ್ಕೆ ತೊಂದರೆಯಾಗುತ್ತದೆ ಎಂದರು.

ರಸ್ತೆ ಪಕ್ಕದಲ್ಲೇ ಎರಡು ಸರ್ಕಾರಿ ಶಾಲೆಗಳು, ದೇವಾಲಯಗಳು, ಕಾಡಾ ಕಚೇರಿ ಇದೆ. ನೀರಿನ ಟ್ಯಾಂಕ್‌ ಇದೆ. ರಸ್ತೆ ವಿಸ್ತರಣೆ ಮಾಡುವುದರಿಂದ ಈ ಸ್ವತ್ತುಗಳಿಗೆ ಹಾನಿಯಾಗುತ್ತದೆ. ದೇವಾಲಯಗಳ ಭಕ್ತರ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಕೆ.ಬಿ. ಅಶೋಕ ನಾಯ್ಕ , ಮಾಜಿ ಶಾಸಕರಾದ ಶಾರದಾ ಪೂರ್ಯನಾಯ್ಕ ಮೊದಲಾದವರು ರಸ್ತೆ ಅಗಲೀಕರಣ ನಡೆಸದಂತೆ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದರೂ, ರಸ್ತೆ ಅಗಲೀಕರಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಆರೋಪಿಸಿದರು.

ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ 206 ನ್ನು ಮಲವಗೊಪ್ಪ ಭಾಗದಲ್ಲಿ ಅಗಲೀಕರಣ ಮಾಡದೆ, ಬೈಪಾಸ್‌ ಮೂಲಕ ರಾಷ್ಟ್ರೀಯ ಹೆದ್ದಾರಿಯನ್ನು ಜೋಡಣೆಗೊಳಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ಥಳೀಯ ನಿವಾಸಿಗಳಾದ ಯು.ಜಿ. ನಾಗರಾಜ್‌, ಮಂಜಪ್ಪ, ಸುರೇಶ್‌ ನಾಯ್ಕ, ಓಂಕಾರಪ್ಪ, ಗಣೇಶ ನಾಯ್ಕ, ವಾಸು, ಸೋನಾಬಾಯಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.